ಉಡುಪಿ: ಜಿಲ್ಲಾದ್ಯಂತ ಮಳೆ ಅಬ್ಬರ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿಇಂದು ಪಿಯುಸಿವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.
ಶನಿವಾರ ಬೆಳಗ್ಗೆ ಮಳೆ ಪ್ರಮಾಣ ಕೊಂಚ ತಗ್ಗಿದ್ದು, ಶುಕ್ರವಾರದ ಬಿರುಸಿನ ಮಳೆಯಿಂದಾಗಿ ಕುಂದಾಪುರ, ಬೈಂದೂರು ತಾಲೂಕಿನಲ್ಲಿ ಹಲವು ಮನೆಗಳಿಗೆ ಹಾನಿ ಸಂಭವಿಸಿದೆ. ಅಮಾಸೆಬೈಲು ಬಳ್ಮನೆ ಭಾಗದಲ್ಲೂ ಮನೆಗಳಿಗೆ ಹಾನಿಯಾಗಿದೆ.
ಕಾಪು ತಾಲೂಕಿನಲ್ಲಿ ಗಾಳಿ, ಮಳೆ ಮತ್ತು ನೆರೆಗೆ ಸಿಲುಕಿದ 35 ಮಂದಿಯನ್ನು ತಹಶೀಲ್ದಾರ್ ಡಾ| ಪ್ರತಿಭಾ ಆರ್. ನೇತೃತ್ವದಲ್ಲಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಕಟಪಾಡಿ ಮೂಡಬೆಟ್ಟು, ಏಣಗುಡ್ಡೆ, ನಡ್ಪಾಲು ಪಾದೆಬೆಟ್ಟು, ಪಡುಬಿದ್ರಿ ಕಲ್ಲಟ್ಟೆ ಮತ್ತು ಹೆಜಮಾಡಿ ಶಿವನಗರ ಪರಿಸರದ ಸಂತ್ರಸ್ತರನ್ನು ತಾಲೂಕು ಆಡಳಿತ, ಗೃಹರಕ್ಷಕ ದಳ ಮತ್ತು ಸ್ಥಳೀಯ ಗ್ರಾಮ ಪಂಚಾಯತ್‌ಗಳ ನೇತೃತ್ವದಲ್ಲಿ ರಕ್ಷಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ತಾಲೂಕು ಆಡಳಿತ ಕೇಂದ್ರದ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ 0820-2551444 ಅನ್ನು ಸಂಪರ್ಕಿಸುವಂತೆ ತಹಶೀಲ್ದಾರ್ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…