Featured

ಮಳೆಯ ಅಬ್ಬರ  – ಕಾಪು ನೆರೆಗೆ ಸಿಲುಕಿದ 35 ಮಂದಿಯ ಸ್ಥಳಾಂತರ – vishwanews24

ಮಳೆಯ ಅಬ್ಬರ  – ಕಾಪು ನೆರೆಗೆ ಸಿಲುಕಿದ 35 ಮಂದಿಯ ಸ್ಥಳಾಂತರ

ಉಡುಪಿ: ಜಿಲ್ಲಾದ್ಯಂತ ಮಳೆ ಅಬ್ಬರ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿಇಂದು ಪಿಯುಸಿವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.

ಶನಿವಾರ ಬೆಳಗ್ಗೆ ಮಳೆ ಪ್ರಮಾಣ ಕೊಂಚ ತಗ್ಗಿದ್ದು, ಶುಕ್ರವಾರದ ಬಿರುಸಿನ ಮಳೆಯಿಂದಾಗಿ ಕುಂದಾಪುರ, ಬೈಂದೂರು ತಾಲೂಕಿನಲ್ಲಿ ಹಲವು ಮನೆಗಳಿಗೆ ಹಾನಿ ಸಂಭವಿಸಿದೆ. ಅಮಾಸೆಬೈಲು ಬಳ್ಮನೆ ಭಾಗದಲ್ಲೂ ಮನೆಗಳಿಗೆ ಹಾನಿಯಾಗಿದೆ.

ಕಾಪು ತಾಲೂಕಿನಲ್ಲಿ ಗಾಳಿ, ಮಳೆ ಮತ್ತು ನೆರೆಗೆ ಸಿಲುಕಿದ 35 ಮಂದಿಯನ್ನು ತಹಶೀಲ್ದಾರ್‌ ಡಾ| ಪ್ರತಿಭಾ ಆರ್‌. ನೇತೃತ್ವದಲ್ಲಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಕಟಪಾಡಿ ಮೂಡಬೆಟ್ಟು, ಏಣಗುಡ್ಡೆ, ನಡ್ಪಾಲು ಪಾದೆಬೆಟ್ಟು, ಪಡುಬಿದ್ರಿ ಕಲ್ಲಟ್ಟೆ ಮತ್ತು ಹೆಜಮಾಡಿ ಶಿವನಗರ ಪರಿಸರದ ಸಂತ್ರಸ್ತರನ್ನು ತಾಲೂಕು ಆಡಳಿತ, ಗೃಹರಕ್ಷಕ ದಳ ಮತ್ತು ಸ್ಥಳೀಯ ಗ್ರಾಮ ಪಂಚಾಯತ್‌ಗಳ ನೇತೃತ್ವದಲ್ಲಿ ರಕ್ಷಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ತಾಲೂಕು ಆಡಳಿತ ಕೇಂದ್ರದ ಕಂಟ್ರೋಲ್‌ ರೂಂ ದೂರವಾಣಿ ಸಂಖ್ಯೆ 0820-2551444 ಅನ್ನು ಸಂಪರ್ಕಿಸುವಂತೆ ತಹಶೀಲ್ದಾರ್‌ ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

1 hour ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

1 hour ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

1 hour ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

2 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

2 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

2 hours ago