Featured

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಬುಧವಾರ (ಜು.8) ರಂದು ಜಿಲ್ಲೆಯಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಆದೇಶ ಹೊರಡಿಸಿದ್ದಾರೆ.

ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಮತ್ತು ಪದವಿ ಪೂರ್ವ (PU) ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ.

ಆದೇಶ ಉಲ್ಲಂಘಿಸಿ ತರಗತಿಗಳನ್ನು ನಡೆಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.

ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ನದಿ, ಹಳ್ಳ, ಕೊಳ್ಳ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚುವರಿ ಜಾಗ್ರತೆ ವಹಿಸುವಂತೆ ಕೋರಲಾಗಿದೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

4 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

7 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

7 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

7 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

7 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

8 hours ago