Featured

ಮಳೆ ಹಾನಿ : ಕಳೆದ ಮೂರು ವರ್ಷದಲ್ಲಿ ಪರಿಹಾರ ಪಡೆದವರಿಗೆ ಮತ್ತೆ ಪರಿಹಾರ ಇಲ್ಲ: ರಾಜ್ಯ ಸರ್ಕಾರ – Vishwanews24

ಮಳೆ ಹಾನಿ : ಕಳೆದ ಮೂರು ವರ್ಷದಲ್ಲಿ ಪರಿಹಾರ ಪಡೆದವರಿಗೆ ಮತ್ತೆ ಪರಿಹಾರ ಇಲ್ಲ: ರಾಜ್ಯ ಸರ್ಕಾರ

ಬೆಂಗಳೂರು : ಕಳೆದ ಮೂರು ವರ್ಷದಲ್ಲಿ ಸಂಭವಿಸಿದ ಮಳೆಯಿಂದ ಮನೆ ಕಳೆದುಕೊಂಡು‌ ಪರಿಹಾರ ಪಡೆದವರ ಮನೆಗೆ ಈ ವರ್ಷ ಮತ್ತೆ ಹಾನಿಯಾದರೆ ಪರಿಹಾರ‌ ಕೊಡುವಂತಿಲ್ಲ‌ ಎಂದು ರಾಜ್ಯ ಸರಕಾರ ಸ್ಪಷ್ಟಪಡಿಸಿದೆ.

ಈ ಬಗ್ಗೆ ಕೆಲವು ಜಿಲ್ಲಾಧಿಕಾರಿಗಳು ಪತ್ರ ಬರೆದು ಸ್ಪಷ್ಟನೆ ನೀಡಿದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ ವಿಭಾಗದಿಂದ ಈ ಸ್ಪಷ್ಟನೆ ನೀಡಲಾಗಿದೆ.

2019, 2020, 2021 ನೇ ವರ್ಷದಲ್ಲಿ ಎ ಅಥವಾ ಬಿ ಕೆಟಗರಿಯಲ್ಲಿ ಪರಿಹಾರ ಪಡೆದಿರುವ ಸಂತ್ರಸ್ತರ ಮನೆಗಳಿಗೆ ಈ ಸಾಲಿನಲ್ಲಿ‌ ಮತ್ತೆ ಪರಿಹಾರ‌ ನೀಡುವುದಕ್ಕೆ ಅವಕಾಶವಿಲ್ಲ.

ಆದರೆ ಈ ವರ್ಷಗಳಲ್ಲಿ ಅಲ್ಪಸ್ವಲ್ಪ ಹಾನಿಗೊಳಗಾದ ಸಿ ಕೆಟಗರಿಯಲ್ಲಿ ಐವತ್ತು ಸಾವಿರ ರೂ. ಪಡೆದ ಮನೆಗಳಿಗೆ ಈ ಬಾರಿ ಎ,ಬಿ,ಸಿ ವಿಭಾಗದಲ್ಲಿ ಪರಿಹಾರ ಪಾವತಿಸಬಹುದು.

ವಾಸದ ಮನೆ ಅಧಿಕೃತವಾಗಿದ್ದರೆ ಮಾತ್ರ ನಿಯಮಾನುಸಾರ ಪರಿಹಾರ ನೀಡಬಹುದು. ಆದರೆ ಜಮೀನಿನಲ್ಲಿ‌ ಕಟ್ಟಿರುವ ತೋಟದ ಮನೆ, ಸರಕಾರಿ ಜಾಗ, ಗೋಮಾಳಗಳಲ್ಲಿ ಕಟ್ಟಿರುವ ಮನೆ ಅನಧಿಕೃತವಾಗಿದ್ದಲ್ಲಿ ನಿಯಮಾನುಸಾರ ಪ್ರತಿಜ್ಞಾ ಪತ್ರ ಸ್ವೀಕರಿಸಿ 1 ಲಕ್ಷ ರೂ. ಎಕ್ಸ್ ಗ್ರೇಷಿಯಾ ಪಾವತಿಸಬಹುದು.

ಸರಕಾರಿ ವಸತಿ ಯೋಜನೆಗಳಲ್ಲಿ ನಿರ್ಮಾಣ ಕೆಲಸ ಪೂರ್ಣಗೊಂಡ ಮನೆಗಳು ಹಂಚಿಕೆಯಾಗಿ ಜನವಾಸ್ತವ್ಯ ಇದ್ದ ಸಂದರ್ಭದಲ್ಲಿ ಎ,ಬಿ,ಸಿ ವಿಭಾಗ ಮಾಡಿ ಪರಿಹಾರ ನೀಡಬೇಕು ಎಂದು ಆದೇಶ ಸ್ಪಷ್ಟಪಡಿಸಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

6 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

7 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

7 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

7 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

7 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago