ಬೆಂಗಳೂರು : ರಾಜ್ಯದಲ್ಲಿ ಹಲವೆಡೆ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ಥವ್ಯಸ್ಥವಾಗಿದ್ದು,ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ ಮನೆಗಳನ್ನ, ಜೀವ ಕಳೆದುಕೊಂಡ ಪರಿಸ್ಥಿತಿ ನಿರ್ಮಾಣವಾಗಿದೆ.
ಇಂದುವಿಧಾನಸಭೆ ಅಧಿವೇಶನದಲ್ಲಿ ಮಳೆ ಹಾನಿ ಕುರಿತು ಚರ್ಚೆ ನಡೆಸಿ, ಈ ವೇಳೆ ಉತ್ತರಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪರಿಹಾರ ಕ್ರಮಕ್ಕೆ ಎಲ್ಲಾ ಜಿಲ್ಲೆಗಳಿಗೆ 777.54 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಮಳೆ ಹಾನಿ ಪರಿಹಾರ ಕ್ರಮಕ್ಕೆ ನಮ್ಮ ಬಳಿ ಹಣದ ಕೊರತೆ ಇಲ್ಲ ಎಂದು ತಿಳಿಸಿದರು.
ಸಮಸ್ಯೆ ನಿವಾರಣೆಗೆ ರಾಜ್ಯ ಸರ್ಕಾರ ಎಲ್ಲಾ ಪ್ರಯತ್ನ ಮಾಡುತ್ತಿದೆ. ಸಂಪುಟ ಸಭೆಯಲ್ಲಿ ಹಾನಿ ಪರಿಹಾರ ಬಗ್ಗೆ ಚರ್ಚೆ ಮಾಡುತ್ತೇವೆ. ಕರಾವಳಿ ಭಾಗದಲ್ಲಿ ವಾಡಿಕೆಗಿಂತ ಶೇ.21ರಷ್ಟು ಹೆಚ್ಚು ಮಳೆ ಆಗಿದೆ. ಮಲೆನಾಡಿನಲ್ಲಿ ವಾಡಿಕೆಗಿಂತ ಶೇಕಡಾ 9ರಷ್ಟು ಹೆಚ್ಚು ಮಳೆಯಾಗಿದೆ. ಪರಿಹಾರ ಕ್ರಮಕ್ಕೆ ಎಲ್ಲಾ ಜಿಲ್ಲೆಗಳಿಗೆ 777.54 ಕೋಟಿ ರೂ. ನೀಡಲಾಗಿದ್ದು, ಮಳೆ ಹಾನಿ ಪರಿಹಾರ ಕ್ರಮಕ್ಕೆ ನಮ್ಮ ಬಳಿ ಹಣದ ಕೊರತೆ ಇಲ್ಲ ಎಂದು ಕೃಷ್ಣ ಬೈರೇಗೌಡ ಭರವಸೆ ನೀಡಿದರು.
6 ಜಿಲ್ಲೆಗಳಲ್ಲಿ 5 ಎನ್ಡಿಆರ್ಎಫ್ ತುಕಡಿ ನಿಯೋಜಿಸಲಾಗಿದೆ. ಸಮಸ್ಯೆ ಉಂಟಾಗುವ 2,225 ಗ್ರಾಮಗಳನ್ನು ಗುರುತಿಸಲಾಗಿದ್ದು, 1,200ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ. ಅಲ್ಲದೇ ತಾಲೂಕು ಮಟ್ಟದ ಅಧಿಕಾರಿ ಪ್ರತಿ ಗ್ರಾಮ ಪಂಚಾಯಿತಿಗೆ ಪ್ರವಾಹ ನಿರ್ವಹಣೆಗೆ ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದ್ದು, ಗ್ರಾ.ಪಂ. ಟಾಸ್ಕ್ಫೋರ್ಸ್ಗೂ ಹಣ ಬಿಡುಗಡೆ ಮಾಡಲಾಗಿದೆ ಎಂದು ನುಡಿದರು.
ಉಡುಪಿ: ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…
ಪುತ್ತೂರು ಅತ್ಯಾಚಾರ ಪ್ರಕರಣ: ರಾಜಿ ಸಂಧಾನದ ಮೂಲಕ ವಿವಾದ ಇತ್ಯರ್ಥಕ್ಕೆ ಹೈಕೋರ್ಟ್ ಸೂಚನೆ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ…
ಬೆಳ್ತಂಗಡಿ: ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಬಂಧನ ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳೆಯೊಬ್ಬರ ಮೇಲೆ…
ಸುಳ್ಯ : ದ್ವಿತೀಯ ಪಿಯುಸಿಯಲ್ಲಿ ರಾಜ್ಯದಲ್ಲಿ 4ನೇ ರ‍್ಯಾಂಕ್ ಪಡೆದಿದ್ದ ವಿದ್ಯಾರ್ಥಿನಿ ಅಭಿಜ್ಞಾ ಭಟ್ ಅಸೌಖ್ಯದಿಂದ ನಿಧನ ಸುಳ್ಯ :…
ಬ್ರಹ್ಮಾವರ: ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು ಬ್ರಹ್ಮಾವರ: ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ…