Featured

ಮಸಾಜ್ ಪಾರ್ಲರ್ ಮೇಲೆ ದಾಳಿ  ಪ್ರಕರಣ : ಪ್ರಸಾದ್ ಅತ್ತಾವರ ಸೇರಿ 11 ಮಂದಿಗೆ ಜಾಮೀನು ಮಂಜೂರು – vishwanews24

ಮಸಾಜ್ ಪಾರ್ಲರ್ ಮೇಲೆ ದಾಳಿ  ಪ್ರಕರಣ : ಪ್ರಸಾದ್ ಅತ್ತಾವರ ಸೇರಿ 11 ಮಂದಿಗೆ ಜಾಮೀನು

ಮಂಗಳೂರು:  ಬಿಜೈನಲ್ಲಿರುವ ಕಲರ್ಸ್ ಮಸಾಜ್ ಪಾರ್ಲರ್ ಮೇಲೆ ದಾಳಿ ಮಾಡಿದ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ರಾಮಸೇನೆಯ ಮುಖಂಡ ಪ್ರಸಾದ್ ಅತ್ತಾವರ ಸೇರಿದಂತೆ 11 ಮಂದಿ ಕಾರ್ಯಕರ್ತರಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಜನವರಿ 23ರಂದು ನಗರದ ಬಿಜೈ ಕೆಎಸ್ಸಾರ್ಟಿಸಿ ಬಳಿಯ ಆದಿತ್ಯ ಕಾಂಪ್ಲೆಕ್ಸ್ ನಲ್ಲಿ ಕಲರ್ಸ್ ಯೂನಿಸೆಕ್ಸ್ ಸೆಲೂನ್ ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ರಾಮ ಸೇನೆಯ ಕಾರ್ಯಕರ್ತರು ದಾಳಿ ಎಸಗಿದ್ದರು. ಕೃತೃದ ಸಂದರ್ಭದಲ್ಲಿ ಪೀಠೋಪಕರಣಗಳನ್ನು ಧ್ವಂಸ ಮಾಡಿ ಅಲ್ಲಿದ್ದ ಮಹಿಳಾ ಸಿಬಂದಿಗೆ ಜೀವ ಬೆದರಿಕೆ ಹಾಕಿದ್ದರು. ಘಟನೆ ಸಂಬಂಧಿಸಿ ಸೆಲೂನ್ ಮಾಲೀಕ ಸುಧೀರ್ ಶೆಟ್ಟಿ ಬರ್ಕೆ ಠಾಣೆಗೆ ದೂರು ನೀಡಿದ್ದರು.

ಬರ್ಕೆ ಪೊಲೀಸರು ಪ್ರಸಾದ್ ಅತ್ತಾವರ ಸೇರಿದಂತೆ 14 ಮಂದಿಯನ್ನು ಬಂಧಿಸಿದ್ದು ಮಂಗಳೂರಿನ 6ನೇ ಜೆಎಂಎಫ್ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಎಲ್ಲ ಆರೋಪಿಗಳಿಗೂ ನ್ಯಾಯಾಂಗ ಬಂಧನ ವಿಧಿಸಿತ್ತು. ಆರೋಪಿಗಳ ಪರವಾಗಿ ವಕೀಲ ಮಯೂರ ಕೀರ್ತಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಪ್ರಸಾದ್ ಅತ್ತಾವರ್ ಮತ್ತು ಇತರ ಹತ್ತು ಮಂದಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

Vishwa News 24

Recent Posts

ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ -vishwanews24

ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…

5 hours ago

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ -vishwanews24

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…

5 hours ago

ನಂದಿನಿ ಹಾಲಿನ ದರ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ -vishwanews24

ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…

6 hours ago

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ -vishwanews24

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…

6 hours ago

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್‌ ಠಾಣಾ…

7 hours ago

ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ :  ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ -vishwanews24

ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ :  ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ ನವದೆಹಲಿ : ವಂದೇ…

7 hours ago