ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಮೂಲಭೂತ ಹಕ್ಕಲ್ಲ : ಅಲಹಾಬಾದ್ ಹೈಕೋರ್ಟ್ – Vishwanews24
ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಮೂಲಭೂತ ಹಕ್ಕಲ್ಲ : ಅಲಹಾಬಾದ್ ಹೈಕೋರ್ಟ್
ಲಕ್ನೋ: ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಮೂಲಭೂತ ಹಕ್ಕಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.
2021ರ ಡಿಸೆಂಬರ್ 3ರಂದು ಬದೌನ್ ಜಿಲ್ಲೆಯ ಬಿಸೌಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (SDM) ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿದ್ದ ಮುಸ್ಲಿಂ ಮುಖಂಡ ಇರ್ಫಾನ್ ಆಜಾನ್ಗಾಗಿ ಧೋರನ್ಪುರ ಗ್ರಾಮದ ನೂರಿ ಮಸೀದಿಯಲ್ಲಿ ಧ್ವನಿವರ್ಧಕಗಳನ್ನು ಅಳವಡಿಸಲು ಅನುಮತಿ ಕೋರಿದ್ದರು.
ನ್ಯಾಯಮೂರ್ತಿ ವಿವೇಕ್ಕುಮಾರ್ ಬಿರ್ಲಾ ಹಾಗೂ ನ್ಯಾಯಮೂರ್ತಿ ವಿಕಾಸ್ ಅವರಿದ್ದ ನ್ಯಾಯಪೀಠವು, ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಸಾಂವಿಧಾನಿಕ ಹಕ್ಕಲ್ಲ ಎಂದು ಕಾನೂನು ಹೇಳುತ್ತದೆ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿದೆ.
ಮಸೀದಿಯ ಆಜಾನ್ ಗೆ ಹಾರ್ನ್ ಮೈಕ್ ಬದಲು- ಸೌಂಡ್ ಬಾಕ್ಸ್ ಉಪಯೋಗಿಸಿ: ಶಾಸಕ ರಘುಪತಿ ಭಟ್:-vishwanews24
ಅರ್ಜಿದಾರರು ತಮ್ಮ ಮನವಿಯಲ್ಲಿ, ಎಸ್ಡಿಎಂನ ಆದೇಶವು ಕಾನೂನುಬಾಹಿರ. ಇದು ಮೂಲಭೂತ ಮತ್ತು ಕಾನೂನು ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಉಲ್ಲೇಖಿಸಿದ್ದರು.
ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಯ ವಿಚಾರವಾಗಿ ಈಗಾಗಲೇ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಕೊಂಡಿದೆ. ಈಚೆಗಷ್ಟೇ ಉತ್ತರ ಪ್ರದೇಶದಲ್ಲೂ ಸಹ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ರಾಜ್ಯದ 17,000 ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಪ್ರಮಾಣವನ್ನು ಮಿತಗೊಳಿಸುವಂತೆ ಸೂಚನೆ ನೀಡಿತ್ತು.
ಅನುಮತಿ ಪಡೆದ ಧ್ವನಿವರ್ಧಕಗಳನ್ನು ಮಾತ್ರವೇ ನಿಯಮಿತ ಶಬ್ಧದೊಂದಿಗೆ ಬಳಸುವಂತೆ ಸೂಚನೆ ನೀಡಿತ್ತು. ಇದರಿಂದ ಹಿಂದೂ-ಮುಸ್ಲಿಂ ದೇವಾಯಗಳಲ್ಲೂ ಪ್ರಸಾರವಾಗುತ್ತಿದ್ದ ಧಾರ್ಮಿಕ ಕೈಂಕರ್ಯಗಳು ಆವರಣಕ್ಕೆ ಮಾತ್ರ ಸೀಮಿತವಾಗಿತ್ತು.
ಉಡುಪಿ : ಪ್ರಮೋದ್ ಪಕ್ಷ ಸೇರ್ಪಡೆಯಾಗಲು ಯಾವುದೇ ರೀತಿಯ ಹುದ್ದೆಯ ಕಂಡೀಷನ್ ಹಾಕಿಲ್ಲ : ಕುಯಿಲಾಡಿ – Vishwanews24
