Featured

ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಮೂಲಭೂತ ಹಕ್ಕಲ್ಲ : ಅಲಹಾಬಾದ್ ಹೈಕೋರ್ಟ್ – Vishwanews24

ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಮೂಲಭೂತ ಹಕ್ಕಲ್ಲ : ಅಲಹಾಬಾದ್ ಹೈಕೋರ್ಟ್

ಲಕ್ನೋ: ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಮೂಲಭೂತ ಹಕ್ಕಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

2021ರ ಡಿಸೆಂಬರ್ 3ರಂದು ಬದೌನ್ ಜಿಲ್ಲೆಯ ಬಿಸೌಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ (SDM) ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿದ್ದ ಮುಸ್ಲಿಂ ಮುಖಂಡ ಇರ್ಫಾನ್ ಆಜಾನ್‌ಗಾಗಿ ಧೋರನ್‌ಪುರ ಗ್ರಾಮದ ನೂರಿ ಮಸೀದಿಯಲ್ಲಿ ಧ್ವನಿವರ್ಧಕಗಳನ್ನು ಅಳವಡಿಸಲು ಅನುಮತಿ ಕೋರಿದ್ದರು.

ನ್ಯಾಯಮೂರ್ತಿ ವಿವೇಕ್‌ಕುಮಾರ್ ಬಿರ್ಲಾ ಹಾಗೂ ನ್ಯಾಯಮೂರ್ತಿ ವಿಕಾಸ್ ಅವರಿದ್ದ ನ್ಯಾಯಪೀಠವು, ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಸಾಂವಿಧಾನಿಕ ಹಕ್ಕಲ್ಲ ಎಂದು ಕಾನೂನು ಹೇಳುತ್ತದೆ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿದೆ.

ಅರ್ಜಿದಾರರು ತಮ್ಮ ಮನವಿಯಲ್ಲಿ, ಎಸ್‌ಡಿಎಂನ ಆದೇಶವು ಕಾನೂನುಬಾಹಿರ. ಇದು ಮೂಲಭೂತ ಮತ್ತು ಕಾನೂನು ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಉಲ್ಲೇಖಿಸಿದ್ದರು.

ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಯ ವಿಚಾರವಾಗಿ ಈಗಾಗಲೇ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಕೊಂಡಿದೆ. ಈಚೆಗಷ್ಟೇ ಉತ್ತರ ಪ್ರದೇಶದಲ್ಲೂ ಸಹ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ರಾಜ್ಯದ 17,000 ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಪ್ರಮಾಣವನ್ನು ಮಿತಗೊಳಿಸುವಂತೆ ಸೂಚನೆ ನೀಡಿತ್ತು.

ಅನುಮತಿ ಪಡೆದ ಧ್ವನಿವರ್ಧಕಗಳನ್ನು ಮಾತ್ರವೇ ನಿಯಮಿತ ಶಬ್ಧದೊಂದಿಗೆ ಬಳಸುವಂತೆ ಸೂಚನೆ ನೀಡಿತ್ತು. ಇದರಿಂದ ಹಿಂದೂ-ಮುಸ್ಲಿಂ ದೇವಾಯಗಳಲ್ಲೂ ಪ್ರಸಾರವಾಗುತ್ತಿದ್ದ ಧಾರ್ಮಿಕ ಕೈಂಕರ್ಯಗಳು ಆವರಣಕ್ಕೆ ಮಾತ್ರ ಸೀಮಿತವಾಗಿತ್ತು.

 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

36 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

48 minutes ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

1 hour ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

4 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

4 hours ago