ಮಸೀದಿಗಳಲ್ಲಿ ಧ್ವನಿವರ್ಧಕ ಬಳಸುವುದನ್ನು ಕೂಡಲೇ ನಿಲ್ಲಿಸಬೇಕು : ಪ್ರಮೋದ್ ಮುತಾಲಿಕ್ -Vishwanews24

Featured, ರಾಜ್ಯ ನ್ಯೂಸ್

ಮಸೀದಿಗಳಲ್ಲಿ ಧ್ವನಿವರ್ಧಕ ಬಳಸುವುದನ್ನು ಕೂಡಲೇ ನಿಲ್ಲಿಸಬೇಕು : ಪ್ರಮೋದ್ ಮುತಾಲಿಕ್ -Vishwanews24

ಹುಬ್ಬಳ್ಳಿ : ಮಸೀದಿಗಳಲ್ಲಿ ಧ್ವನಿವರ್ಧಕ ಬಳಸಿ ‘ಅಜಾನ್’ (ಪ್ರಾರ್ಥನೆ) ಮಾಡುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ಧ್ವನಿವರ್ಧಕ ಬಳಸಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ಮಾಡಿದ್ದರೂ, ನಿಯಮ ಉಲ್ಲಂಘಿಸಿ ಮಸೀದಿಗಳಲ್ಲಿ ಧ್ವನಿವರ್ಧಕ ಬಳಸಿ ದಿನಕ್ಕೆ ಐದು ಬಾರಿ ಪ್ರಾರ್ಥನೆ ಮಾಡುತ್ತಿದ್ದಾರೆ. ಇದರಿಂದ ನಿಶಬ್ದ(ಆಸ್ಪತ್ರೆ, ಶಿಕ್ಷಣ ಸಂಸ್ಥೆ ಮತ್ತು ಧಾರ್ಮಿಕ ಕೇಂದ್ರ) ವಲಯಗಳಲ್ಲಿ ಶಬ್ದ ಮಾಲಿನ್ಯ ವಾಗುತ್ತಿದೆ. ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳದಿದ್ದರೆ, ಶ್ರೀರಾಮ ಸೇನೆಯಿಂದ ಧ್ವನಿವರ್ಧಕ ತೆರವು ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.

ಕೋರ್ಟ್ ನಿಯಮವನ್ನೇ ಉಲ್ಲಂಘಿಸಿ ದೇಶದಲ್ಲಿ ಅಪಾಯಕಾರಿ ವಾತಾವರಣ ಸೃಷ್ಟಿಸಲಾಗುತ್ತಿದೆ. ಧಾರ್ಮಿಕ ಕಟ್ಟಡಗಳ ತೆರವು ಮಾಡುವುದರಲ್ಲೂ ಅನಧಿಕೃತ ದರ್ಗಾ ಮತ್ತು ಮಸೀದಿಗಳನ್ನು ತೆರವು ಮಾಡಲಿಲ್ಲ. ಈ ರೀತಿ ಮಾಡುವುದಾದರೆ ಪೊಲೀಸ್ ಠಾಣೆ, ಕೋರ್ಟ್‍ಗಳನ್ನು ಮುಚ್ಚಿಬಿಡಿ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಮಾತು ಮುಂದುವರೆಸಿದ ಅವರು, `ಮತಾಂತರ ತಡೆಗೆ ನಿರ್ದಿಷ್ಟ ಕಾನೂನು ರೂಪಿಸಬೇಕು. ಗೋಹತ್ಯೆ ನಿಷೇಧ ಕಾನೂನು ರೂಪಿಸಿದರೂ ಗೋಹತ್ಯೆ ನಿಂತಿಲ್ಲ. ಗೋಹತ್ಯೆ ತಡೆಯುವ ಹಿಂದೂ ಕಾರ್ಯಕರ್ತರು ಮಾತ್ರ ಕಾಣಿಸುತ್ತಾರೆ. ಗೋಹತ್ಯೆ ಏಕೆ ತಡೆಯುವುದಿಲ್ಲ? ಪೊಲೀಸರು ಕತ್ತೆ ಕಾಯುತ್ತಿದ್ದಾರೆಯೇ’. ಬಿಜೆಪಿ ಅವರನ್ನು ನಂಬಿ ಹಿಂದೂಪರ ಸಂಘಟನೆಗಳು ಹಾಗೂ ಹಿಂದೂಗಳು ಮತ ಹಾಕಿದ್ದಾರೆ ಎಂದು ಟೀಕಿಸಿದರು.