ಮಸೀದಿಗಳಲ್ಲಿ ಧ್ವನಿವರ್ಧಕ ಬಳಸುವುದನ್ನು ಕೂಡಲೇ ನಿಲ್ಲಿಸಬೇಕು : ಪ್ರಮೋದ್ ಮುತಾಲಿಕ್ -Vishwanews24
ಹುಬ್ಬಳ್ಳಿ : ಮಸೀದಿಗಳಲ್ಲಿ ಧ್ವನಿವರ್ಧಕ ಬಳಸಿ ‘ಅಜಾನ್’ (ಪ್ರಾರ್ಥನೆ) ಮಾಡುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ಧ್ವನಿವರ್ಧಕ ಬಳಸಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ಮಾಡಿದ್ದರೂ, ನಿಯಮ ಉಲ್ಲಂಘಿಸಿ ಮಸೀದಿಗಳಲ್ಲಿ ಧ್ವನಿವರ್ಧಕ ಬಳಸಿ ದಿನಕ್ಕೆ ಐದು ಬಾರಿ ಪ್ರಾರ್ಥನೆ ಮಾಡುತ್ತಿದ್ದಾರೆ. ಇದರಿಂದ ನಿಶಬ್ದ(ಆಸ್ಪತ್ರೆ, ಶಿಕ್ಷಣ ಸಂಸ್ಥೆ ಮತ್ತು ಧಾರ್ಮಿಕ ಕೇಂದ್ರ) ವಲಯಗಳಲ್ಲಿ ಶಬ್ದ ಮಾಲಿನ್ಯ ವಾಗುತ್ತಿದೆ. ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳದಿದ್ದರೆ, ಶ್ರೀರಾಮ ಸೇನೆಯಿಂದ ಧ್ವನಿವರ್ಧಕ ತೆರವು ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.
ಕೋರ್ಟ್ ನಿಯಮವನ್ನೇ ಉಲ್ಲಂಘಿಸಿ ದೇಶದಲ್ಲಿ ಅಪಾಯಕಾರಿ ವಾತಾವರಣ ಸೃಷ್ಟಿಸಲಾಗುತ್ತಿದೆ. ಧಾರ್ಮಿಕ ಕಟ್ಟಡಗಳ ತೆರವು ಮಾಡುವುದರಲ್ಲೂ ಅನಧಿಕೃತ ದರ್ಗಾ ಮತ್ತು ಮಸೀದಿಗಳನ್ನು ತೆರವು ಮಾಡಲಿಲ್ಲ. ಈ ರೀತಿ ಮಾಡುವುದಾದರೆ ಪೊಲೀಸ್ ಠಾಣೆ, ಕೋರ್ಟ್‍ಗಳನ್ನು ಮುಚ್ಚಿಬಿಡಿ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಮಾತು ಮುಂದುವರೆಸಿದ ಅವರು, `ಮತಾಂತರ ತಡೆಗೆ ನಿರ್ದಿಷ್ಟ ಕಾನೂನು ರೂಪಿಸಬೇಕು. ಗೋಹತ್ಯೆ ನಿಷೇಧ ಕಾನೂನು ರೂಪಿಸಿದರೂ ಗೋಹತ್ಯೆ ನಿಂತಿಲ್ಲ. ಗೋಹತ್ಯೆ ತಡೆಯುವ ಹಿಂದೂ ಕಾರ್ಯಕರ್ತರು ಮಾತ್ರ ಕಾಣಿಸುತ್ತಾರೆ. ಗೋಹತ್ಯೆ ಏಕೆ ತಡೆಯುವುದಿಲ್ಲ? ಪೊಲೀಸರು ಕತ್ತೆ ಕಾಯುತ್ತಿದ್ದಾರೆಯೇ’. ಬಿಜೆಪಿ ಅವರನ್ನು ನಂಬಿ ಹಿಂದೂಪರ ಸಂಘಟನೆಗಳು ಹಾಗೂ ಹಿಂದೂಗಳು ಮತ ಹಾಕಿದ್ದಾರೆ ಎಂದು ಟೀಕಿಸಿದರು.
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…
ಪಿಕಲ್‌ಬಾಲ್ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ : ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್‌ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…
ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ…