ಮಸೀದಿಗಳ ತೆರವು ಹೇಳಿಕೆ : ಸಚಿವ ಕೆ.ಎಸ್‌.ಈಶ್ವರಪ್ಪ ಅವರನ್ನು ವಜಾಗೊಳಿಸಲು ಪ್ರಧಾನಿ ಮೋದಿಗೆ ಡಿ.ಕೆ.ಶಿವಕುಮಾರ್ ಒತ್ತಾಯ -Vishwanews24

ಬೆಂಗಳೂರು: ಸಚಿವ ಕೆ.ಎಸ್‌.ಈಶ್ವರಪ್ಪ ಅವರನ್ನು ವಜಾಗೊಳಿಸಲು ಬಿಎಸ್‌ವೈಗೆ ಸೂಚಿಸಬೇಕೆಂದು ಡಿ.ಕೆ.ಶಿವಕುಮಾರ್‌ ಪ್ರಧಾನಿ ಮೋದಿಗೆ ಒತ್ತಾಯಿಸಿದ್ದಾರೆ.

ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರಿಗೆ ಟ್ಯಾಗ್‌ ಮಾಡಿ, ವಿಡಿಯೊ ತುಣುಕೊಂದನ್ನು ಟ್ವೀಟ್‌ ಮಾಡಿರುವ ಡಿ.ಕೆ.ಶಿವಕುಮಾರ್‌, ‘ಕೋಮು ಸೌಹಾರ್ದಕ್ಕೆ ದಕ್ಕೆ ತರುವ ಉದ್ದೇಶದಿಂದ ಪ್ರಚೋದನಾಕಾರಿ  ಹೇಳಿಕೆಗಳನ್ನು ಸಚಿವ ಈಶ್ವರಪ್ಪ ನೀಡಿದ್ದಾರೆ. ಅವರನ್ನು ವಜಾಗೊಳಿಸಲು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸೂಚಿಸಬೇಕೆಂದು ಪ್ರಧಾನಿ ಮೋದಿಯವರನ್ನು ನಾನು ಒತ್ತಾಯಿಸುತ್ತೇನೆ’ ಎಂದಿದ್ದಾರೆ.

ನಾವು ಭಾರತದ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯಬೇಕಿದೆ. ಈಶ್ವರಪ್ಪ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಮತ್ತು ಅವರನ್ನು ಬಂಧಿಸಬೇಕು ಎಂದು ಡಿಕೆಶಿ ಟ್ವೀಟ್‌ನಲ್ಲಿ ಒತ್ತಾಯಿಸಿದ್ದಾರೆ.

ಕಾಶಿ ವಿಶ್ವನಾಥ, ಮಥುರಾ ಶ್ರೀಕೃಷ್ಣ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ತೆರಳಿದರೆ ಹಿಂದೂಗಳ ಗುಲಾಮತನ ಭಾಸವಾಗುತ್ತದೆ. ಅಲ್ಲಿ ಭಕ್ತಿಯಿಂದ ಪೂಜೆ ಸಲ್ಲಿಸಲೂ ಆಗದ ಸ್ಥಿತಿ ಇದೆ. ಅಲ್ಲಿರುವ ಮಸೀದಿಗಳು ಅಂತಹ ಮನೋಸ್ಥಿತಿ ಬಿಂಬಿಸುತ್ತವೆ ಎಂದು ಈಶ್ವರಪ್ಪ ಬುಧವಾರ ಹೇಳಿದ್ದರು.

ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿನ ಹಲವು ದೇವಸ್ಥಾನಗಳು ಧ್ವಂಸವಾಗಿವೆ. ಗುಲಾಮಗಿರಿಯ ಸಂತೇತವಾದ ಅಯೋಧ್ಯೆಯ ಮಸೀದಿ ತೆರವುಗೊಳಿಸಿದಂತೆ ಅಲ್ಲಿನ ಮಸೀದಿಗಳನ್ನು ತೆರವುಗೊಳಿಸಬೇಕಿದೆ. ಎಲ್ಲಾ ಶ್ರದ್ಧಾ ಕೇಂದ್ರಗಳೂ ಮಸೀದಿಗಳಿಂದ ಮುಕ್ತವಾಗಬೇಕಿದೆ ಎಂದು ತಿಳಿಸಿದ್ದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago