ಮಸೀದಿ, ದರ್ಗಾಗಳಲ್ಲಿ ಧ್ವನಿವರ್ಧಕ ಬಳಕೆಗೆ ಬ್ರೇಕ್ : ರಾಜ್ಯ ವಕ್ಫ್ ಮಂಡಳಿ ಸುತ್ತೋಲೆ -Vishwanews24

Featured, ರಾಜ್ಯ ನ್ಯೂಸ್

ಮಸೀದಿ, ದರ್ಗಾಗಳಲ್ಲಿ ಧ್ವನಿವರ್ಧಕ ಬಳಕೆಗೆ ಬ್ರೇಕ್ : ರಾಜ್ಯ ವಕ್ಫ್ ಮಂಡಳಿ ಸುತ್ತೋಲೆ -Vishwanews24

ಬೆಂಗಳೂರು, : ಕರ್ನಾಟಕ ವಕ್ಫ್‌ ಬೋರ್ಡ್‌,ಶಬ್ದ ಮಾಲಿನ್ಯವನ್ನು ತಡೆಗಟ್ಟವ ನಿಟ್ಟಿನಲ್ಲಿ, ಮಸೀದಿಗಳು ಮತ್ತು ದರ್ಗಾಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆವರೆಗೆ ಧ್ವನಿವರ್ಧಕ ಬಳಕೆಗೆ ಕಡಿವಾಣ ಹಾಕುವಂತೆ ಸುತ್ತೋಲೆ ಹೊರಡಿಸಿದೆ.

ಅಝಾನ್ ಬಗ್ಗೆ ರಾಜ್ಯ ವಕ್ಫ್ ಮಂಡಳಿ ಯಾವುದೇ ನಿರ್ಬಂಧ ಹೇರಿಲ್ಲವಾದರೂ, ಧ್ವನಿವರ್ಧಕವನ್ನು ಅಝಾನ್‌ ಮತ್ತು ಸಾವು, ಸಮಾಧಿಯ ಸಮಯ, ಚಂದ್ರನನ್ನು ನೋಡುವುದು ಸೇರಿದಂತೆ ಇನ್ನಿತರ ಪ್ರಮುಖ ಘೋಷಣೆಗಳಿಗೆ ಮಾತ್ರ ಬಳಸಬೇಕು ಎಂದು ಹೇಳಿದೆ.

ಇದನ್ನೂ ಓದಿ : ಉಡುಪಿ:ಬಿಜೆಪಿ‌ ಬೆಂಬಲಿತ ಆಡಳಿತ ತೆಂಕನಿಡಿಯೂರು ಗ್ರಾಮ ಪಂಚಾಯತ್ತನ್ನು ಅಶಾಂತಿಯ ಗೂಡಾಗಿ ಪರಿವರ್ತಿಸಲು ಹೊರಟಿದೆ: ಪ್ರಖ್ಯಾತ್ ಶೆಟ್ಟಿ -Vishwanews24

ಆಸ್ಪತ್ರೆಗಳು, ನ್ಯಾಯಾಲಯ, ಶೈಕ್ಷಣಿಕ ಸಂಸ್ಥೆಗಳು ಸೇರಿದಂತೆ ನಿಶ್ಯಬ್ದ ವಲಯಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆವರೆಗೆ ಧ್ವನಿವರ್ಧಕ ಬಳಸೋದು ಪರಿಸರ ಸಂರಕ್ಷಣಾ ಕಾಯ್ದೆಯನ್ವಯ ದಂಡನಾರ್ಹವಾಗಿದೆ. ಈ ಹಿನ್ನೆಲೆ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆವರೆಗೆ ಮಸೀದಿ ಹಾಗೂ ದರ್ಗಾಗಳಲ್ಲಿ ಧ್ವನಿವರ್ಧಕ ಬಳಸುವಂತಿಲ್ಲ. ಉಳಿದ ಸಮಯಗಳಲ್ಲಿ ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಗಮನದಲ್ಲಿಟ್ಟು ಮೈಕ್‌ ಬಳಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

ಇದನ್ನೂ ಓದಿ : ಪಡುಬಿದ್ರಿ : ಬ್ಲೂ ಫ್ಲಾಗ್ ಬೀಚ್ ನಲ್ಲಿ ನಮಾಜ್ ಪ್ರಕರಣ : ಆರೋಪಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹಿಂದು ಜಾಗಠಣ ವೇದಿಕೆ ಆಗ್ರಹ -Vishwanews24

ಇದಲ್ಲದೆ ಸಲಾತ್, ಜುಮಾ ಖುತ್ಬಾ, ಬಯಾನ್ಸ್, ಧಾರ್ಮಿಕ ಇನ್ನಿತರ ಕಾರ್ಯಕ್ರಮಗಳಿಗೆ ಮಸೀದಿ ಅಥವಾ ದರ್ಗಾದ ಆವರಣದೊಳಗೆ ಇರುವ ಮೈಕ್‌ಗಳನ್ನು ಬಳಸಬೇಕು.ಯಾವುದೇ ಸಂದರ್ಭದಲ್ಲಿ ಶಬ್ದಗಳನ್ನು ಹೊರಸೂಸುವ ಪಟಾಕಿಗಳನ್ನು ಮಸೀದಿ, ದರ್ಗಾದ ಆವರಣದಲ್ಲಿ ಸುಡಬಾರದು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

ವಕ್ಫ್‌ ಬೋರ್ಡ್‌ ಹೊರಡಿಸಿರುವ ಸುತ್ತೋಲೆಯ ಪ್ರಮುಖ ಸೂಚನೆಗಳು ಇಂತಿವೆ..

  • ಮಸೀದಿಗಳು ಮತ್ತು ದರ್ಗಾಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆವರೆಗೆ ಧ್ವನಿವರ್ಧಕಗಳನ್ನು ಬಳಸಬಾರದು.
  • ಧ್ವನಿವರ್ಧಕವನ್ನು ಅಝಾನ್‌ ಮತ್ತು ಸಾವು, ಸಮಾಧಿಯ ಸಮಯ, ಚಂದ್ರನನ್ನು ನೋಡುವುದು ಸೇರಿದಂತೆ ಇನ್ನಿತರ ಪ್ರಮುಖ ಘೋಷಣೆಗಳಿಗೆ ಮಾತ್ರ ಬಳಸಬೇಕು.
  • ಹಗಲಿನಲ್ಲಿ ಬಳಸುವ ಧ್ವನಿವರ್ಧಕಗಳು ಶಬ್ದಕ್ಕೆ ಸಂಬಂಧಿಸಿದಂತೆ ಸುತ್ತುರಿದ ಗಾಳಿಯ ಗುಣಮಟ್ಟದ ಮಾನದಂಡಗಳ ಪ್ರಕಾರ ಇರಬೇಕು.
  • ಯಾವುದೇ ಸಂದರ್ಭದಲ್ಲಿ ಶಬ್ದಗಳನ್ನು ಹೊರಸೂಸುವ ಪಟಾಕಿಗಳನ್ನು ಮಸೀದಿ, ದರ್ಗಾದ ಆವರಣದಲ್ಲಿ ಸುಡಬಾರದು.
  • ಲಾತ್, ಜುಮಾ ಖುತ್ಬಾ, ಬಯಾನ್ಸ್, ಧಾರ್ಮಿಕ ಇನ್ನಿತರ ಕಾರ್ಯಕ್ರಮಗಳಿಗೆ ಮಸೀದಿ ಅಥವಾ ದರ್ಗಾದ ಆವರಣದೊಳಗೆ ಇರುವ ಮೈಕ್‌ಗಳನ್ನು ಬಳಸಬೇಕು.

ಇದನ್ನೂ ಓದಿ : ಕರ್ನಾಟಕದಲ್ಲಿ ಮತ್ತೆ ಲಾಕ್ ಡೌನ್, ಸೀಲ್ ಡೌನ್, ನೈಟ್ ಕರ್ಪ್ಯೂ ಜಾರಿ ಮಾಡಲ್ಲ : ಸಚಿವ ಡಾ.ಕೆ. ಸುಧಾಕರ್ – Vishwanews24