ಮಸೀದಿ ಸೌಂಡ್ ಬ್ಯಾನ್ ಅಭಿಯಾನಕ್ಕೆ ಮುಂದಾದ ಹಿಂದೂ ಸಂಘಟನೆಗಳು – Vishwanews24

Featured, ರಾಜ್ಯ ನ್ಯೂಸ್

ಮಸೀದಿ ಸೌಂಡ್ ಬ್ಯಾನ್ ಅಭಿಯಾನಕ್ಕೆ ಮುಂದಾದ ಹಿಂದೂ ಸಂಘಟನೆಗಳು

ಬೆಂಗಳೂರು: ಜಟ್ಕಾ ಕಟ್ ಅಭಿಯಾನ ಯಶಸ್ವಿಯಾಗಿರುವ ಹಿನ್ನೆಲೆ ಇದೀಗ ಮಸೀದಿ ಸೌಂಡ್ ಬ್ಯಾನ್ ಅಭಿಯಾನಕ್ಕೆ ಹಿಂದೂಪರ ಸಂಘಟನೆಗಳು ಸಜ್ಜಾಗಿದೆ.

ಹಿಂದೂಪರ ಸಂಘಟನೆಗಳು ಯುಗಾದಿ ಹೊಸತೊಡುಕು ವೇಳೆ ಹಲಾಲ್ ಕಟ್ ಮಾಂಸವನ್ನು ಬಿಟ್ಟು, ಹಿಂದೂಗಳು ಜಟ್ಕಾ ಕಟ್ ಮಾಂಸವನ್ನು ಖರೀದಿಸಿ ಸೇವೆಸಬೇಕು ಎಂದು ಅಭಿಯಾನ ನಡೆಸಿದ್ದರು. ಅದರಂತೆ ಬುಧವಾರ ಹಲಾಲ್ ಕಟ್ ಮಾಂಸಕ್ಕಿಂತಲೂ ಜಟ್ಕಾ ಕಟ್ ಮಾಂಸವನ್ನು ಜನ ಹೆಚ್ಚಾಗಿ ಖರೀದಿಸಿದ್ದು, ಜಟ್ಕಾ ಕಟ್ ಅಭಿಯಾನ ಯಶಸ್ವಿಯಾಗಿದೆ.

ಇದರ ಬೆನ್ನಲ್ಲೇ ಇದೀಗ ಮಸೀದಿ ಸೌಂಡ್ ಬ್ಯಾನ್ ಅಭಿಯಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಕಾನೂನಾತ್ಮಕವಾಗಿ ಹೋರಾಡಿ ಮಸೀದಿ ಸೌಂಡ್ ಬ್ಯಾನ್ ಮಾಡಲು ಮುಂದಾಗಿದ್ದಾರೆ. ಈ ಕುರಿತಂತೆ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಲು ಹಿಂದೂ ಪರ ಸಂಘಟನೆ ತಯಾರಿ ನಡೆಸಿದೆ.

ಚಿಕ್ಕಮಗಳೂರು : ದೇವೀರಮ್ಮನ ಸುಗ್ಗಿ ಹಬ್ಬಕ್ಕೆ ಮುಸ್ಲಿಮರಿಗೆ ವ್ಯಾಪಾರ ನಿಷೇಧ – Vishwanews24

Leave a Reply