ಮಸ್ಕತ್ : ಒಮನ್ ರಾಜಧಾನಿ ಮಸ್ಕತ್‌ನಲ್ಲಿ ವರುಣನ ಅಬ್ಬರಕ್ಕೆ ಜನ ನಲುಗಿ ಹೋಗಿದ್ದು 12 ಮಕ್ಕಳು ಸೇರಿ 19 ಮಂದಿ ವರುಣನ ಅಬ್ಬರಕ್ಕೆ ಬಲಿಯಾಗಿದ್ದಾರೆ.
ಭಾರೀ ಮಳೆಯಿಂದ ಪ್ರವಾಹ ಉಂಟಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಕೇರಳನ ಮೂಲದ ವ್ಯಕ್ತಿ ಗೋಡೆ ಕುಸಿದು ಸಾವನ್ನಪ್ಪಿದ್ದಾರೆ. ದಿಢೀರ್ ಪ್ರವಾಹದ ಹಿನ್ನೆಲೆ ಮಸ್ಕತ್‌ನಲ್ಲಿ ಸರ್ಕಾರಿ ಮತ್ತು ಖಾಸಗಿ ವಲಯದ ಉದ್ಯೋಗಿಗಳಲ್ಲಿ ಮನೆಯಿಂದಲೇ ಕೆಲಸ ಮಾಡಲು ಸೂಚಿಸಲಾಗಿದೆ.
ಮುಸಾಂದಮ್, ಬ್ಯೂರೈಮಿ, ಧಾಹಿರಾ, ಉತ್ತರ ಬಾತಿನಾ ಹಾಗೂ ದಾಖಿಲ್ಯಾ ಪ್ರದೇಶಗಳಲ್ಲಿ ಮಂಗಳವಾರ ರಿಮೋಟ್ ವರ್ಕ್ ಪಾಲಿಸಿಯನ್ನು ತರಲಾಗಿದೆ. ಇನ್ನು, ಮುನ್ನೆಚ್ಚರಿಕೆ ಕ್ರಮವಾಗಿ ಮುಸಾಂಡಮ್ ಪ್ರದೇಶದ ಕಮ್ಜಾರ್ ಮತ್ತು ಮಿಮಾ ಗ್ರಾಮಗಳ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ.
ಹಠಾತ್ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ ಸಾವಿರಾರು ಜನರನ್ನು ರಕ್ಷಿಸಲಾಗಿದೆ. ಅಲ್ ಮುದಾಹಿಬಿನಲ್ಲಿ ಸಾವಿರಕ್ಕೂ ಹೆಚ್ಚು ಜನರನ್ನು ಸ್ಥಳಾಂತರ ಮಾಡಲಾಗಿದೆ. ಇನ್ನು, ಹಲವು ಕಡೆ ಸಿಲುಕಿದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಭಾನುವಾರ ಬೆಳಗ್ಗೆಯಿಂದ ರಾಷ್ಟ್ರೀಯ ತುರ್ತು ಪರಿಸ್ಥಿತಿ ನಿರ್ವಹಣಾ ಕೇಂದ್ರಕ್ಕೆ ಸುಮಾರು 80ಕ್ಕೂ ಅಧಿಕ ಕರೆಗಳು ಬಂದಿದ್ದು, ಜನರ ಸಮಸ್ಯೆಗಳನ್ನು ಪರಿಹರಿಸುತ್ತಿದ್ದೇವೆ ಎಂದು ಎನ್‌ಸಿಇಎಂ ಹೇಳಿದೆ.
ಇಂದು ಮಂಗಳವಾರ ರಾತ್ರಿ ಮತ್ತೆ ಮಸ್ಕತ್ ಮತ್ತು ಸುತ್ತಲಿನ ಪ್ರದೇಶದಲ್ಲಿ ಭಾರಿ ಮಳೆಯಬ ಎಚ್ಚರಿಕೆ ಹವಾಮಾನ ಇಲಾಖೆ ರವಾನಿಸಿದ್ದು ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ ಎಂದು ಎಚ್ಚರಿಕೆ ನೀಡಿದೆ. ಮಂಗಳವಾರ ಮಧ್ಯರಾತ್ರಿಯಿಂದ ಬುಧವಾರ ಬೆಳಗ್ಗೆಯವರೆಗೆ ಭಾರೀ ಮಳೆ ಸುರಿಯಲಿದೆ ಎಂದು ಅದು ಎಚ್ಚರಿಸಿದೆ. ಮುಸಾಂಡಮ್‌ನಲ್ಲಿ ಬಿರುಗಾಳಿ, ಗುಡುಗು ಮಿಂಚು ಸಹಿತ 50 ಮಿಮೀನಿಂದ 150 ಮಿಮೀ ಮಳೆ ಸುರಿಯಲಿದೆ ಎಂದು ಸಿಎಎ ತನ್ನ ವರದಿಯಲ್ಲಿ ಹೇಳಿದೆ. ಇನ್ನು, ಬ್ಯೂರೈಮಿ, ಧಾಹಿರಾ, ಉತ್ತರ ಬಾತಿನಾ ಹಾಗೂ ದಾಖಿಲ್ಯಾ ಪ್ರದೇಶಗಳಲ್ಲಿ 30 ಮಿಮೀನಿಂದ 120 ಮಿಮೀ ಮಳೆಯಾಗಲಿದೆ ಎನ್ನಲಾಗಿದ್ದು, ಇದು ಹಠಾತ್ ಪ್ರವಾಹಕ್ಕೆ ಕಾರಣವಾಗುವ ಸಾಧ್ಯತೆ ಇದೆ.. ಏಪ್ರಿಲ್ 16 ರಂದು ಸರ್ಕಾರಿ, ಖಾಸಗಿ ಮತ್ತು ಅಂತಾರಾಷ್ಟ್ರೀಯ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ಲಭ್ಯವಿರುವ ಸಂಪನ್ಮೂಲಗಳ ಆಧಾರದಲ್ಲಿ ತರಗತಿಗಳನ್ನು ಆನ್‌ಲೈನ್‌ನಲ್ಲಿ ನಡೆಸಬಹುದು ಎಂದು ಹೇಳಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…