Featured

ಮಸ್ಕತ್ : ಒಮಾನ್ ನಲ್ಲಿ ಪ್ರವಾಹ, ಭಾರೀ ಮಳೆ : ಮಕ್ಕಳು ಸೇರಿ 19 ಮಂದಿ ಸಾವು – Vishwanews24

ಮಸ್ಕತ್ : ಒಮಾನ್ ನಲ್ಲಿ ಪ್ರವಾಹ, ಭಾರೀ ಮಳೆ : ಮಕ್ಕಳು ಸೇರಿ 19 ಮಂದಿ ಸಾವು

ಮಸ್ಕತ್ : ಒಮನ್‌ ರಾಜಧಾನಿ ಮಸ್ಕತ್‌ನಲ್ಲಿ ವರುಣನ ಅಬ್ಬರಕ್ಕೆ ಜನ ನಲುಗಿ ಹೋಗಿದ್ದು 12 ಮಕ್ಕಳು ಸೇರಿ 19 ಮಂದಿ ವರುಣನ ಅಬ್ಬರಕ್ಕೆ  ಬಲಿಯಾಗಿದ್ದಾರೆ.

ಭಾರೀ ಮಳೆಯಿಂದ ಪ್ರವಾಹ ಉಂಟಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಕೇರಳನ ಮೂಲದ ವ್ಯಕ್ತಿ ಗೋಡೆ ಕುಸಿದು ಸಾವನ್ನಪ್ಪಿದ್ದಾರೆ. ದಿಢೀರ್‌ ಪ್ರವಾಹದ ಹಿನ್ನೆಲೆ ಮಸ್ಕತ್‌ನಲ್ಲಿ ಸರ್ಕಾರಿ ಮತ್ತು ಖಾಸಗಿ ವಲಯದ ಉದ್ಯೋಗಿಗಳಲ್ಲಿ ಮನೆಯಿಂದಲೇ ಕೆಲಸ ಮಾಡಲು ಸೂಚಿಸಲಾಗಿದೆ.

ಮುಸಾಂದಮ್‌, ಬ್ಯೂರೈಮಿ, ಧಾಹಿರಾ, ಉತ್ತರ ಬಾತಿನಾ ಹಾಗೂ ದಾಖಿಲ್ಯಾ ಪ್ರದೇಶಗಳಲ್ಲಿ ಮಂಗಳವಾರ ರಿಮೋಟ್‌ ವರ್ಕ್‌ ಪಾಲಿಸಿಯನ್ನು ತರಲಾಗಿದೆ. ಇನ್ನು, ಮುನ್ನೆಚ್ಚರಿಕೆ ಕ್ರಮವಾಗಿ ಮುಸಾಂಡಮ್‌ ಪ್ರದೇಶದ ಕಮ್ಜಾರ್‌ ಮತ್ತು ಮಿಮಾ ಗ್ರಾಮಗಳ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ.

ಹಠಾತ್‌ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ ಸಾವಿರಾರು ಜನರನ್ನು ರಕ್ಷಿಸಲಾಗಿದೆ. ಅಲ್‌ ಮುದಾಹಿಬಿನಲ್ಲಿ ಸಾವಿರಕ್ಕೂ ಹೆಚ್ಚು ಜನರನ್ನು ಸ್ಥಳಾಂತರ ಮಾಡಲಾಗಿದೆ. ಇನ್ನು, ಹಲವು ಕಡೆ ಸಿಲುಕಿದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಭಾನುವಾರ ಬೆಳಗ್ಗೆಯಿಂದ ರಾಷ್ಟ್ರೀಯ ತುರ್ತು ಪರಿಸ್ಥಿತಿ ನಿರ್ವಹಣಾ ಕೇಂದ್ರಕ್ಕೆ ಸುಮಾರು 80ಕ್ಕೂ ಅಧಿಕ ಕರೆಗಳು ಬಂದಿದ್ದು, ಜನರ ಸಮಸ್ಯೆಗಳನ್ನು ಪರಿಹರಿಸುತ್ತಿದ್ದೇವೆ ಎಂದು ಎನ್‌ಸಿಇಎಂ ಹೇಳಿದೆ.

ಇಂದು ಮಂಗಳವಾರ ರಾತ್ರಿ ಮತ್ತೆ ಮಸ್ಕತ್‌ ಮತ್ತು ಸುತ್ತಲಿನ ಪ್ರದೇಶದಲ್ಲಿ ಭಾರಿ ಮಳೆಯಬ ಎಚ್ಚರಿಕೆ ಹವಾಮಾನ ಇಲಾಖೆ ರವಾನಿಸಿದ್ದು ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ ಎಂದು ಎಚ್ಚರಿಕೆ ನೀಡಿದೆ. ಮಂಗಳವಾರ ಮಧ್ಯರಾತ್ರಿಯಿಂದ ಬುಧವಾರ ಬೆಳಗ್ಗೆಯವರೆಗೆ ಭಾರೀ ಮಳೆ ಸುರಿಯಲಿದೆ ಎಂದು ಅದು ಎಚ್ಚರಿಸಿದೆ. ಮುಸಾಂಡಮ್‌ನಲ್ಲಿ ಬಿರುಗಾಳಿ, ಗುಡುಗು ಮಿಂಚು ಸಹಿತ 50 ಮಿಮೀನಿಂದ 150 ಮಿಮೀ ಮಳೆ ಸುರಿಯಲಿದೆ ಎಂದು ಸಿಎಎ ತನ್ನ ವರದಿಯಲ್ಲಿ ಹೇಳಿದೆ. ಇನ್ನು, ಬ್ಯೂರೈಮಿ, ಧಾಹಿರಾ, ಉತ್ತರ ಬಾತಿನಾ ಹಾಗೂ ದಾಖಿಲ್ಯಾ ಪ್ರದೇಶಗಳಲ್ಲಿ 30 ಮಿಮೀನಿಂದ 120 ಮಿಮೀ ಮಳೆಯಾಗಲಿದೆ ಎನ್ನಲಾಗಿದ್ದು, ಇದು ಹಠಾತ್‌ ಪ್ರವಾಹಕ್ಕೆ ಕಾರಣವಾಗುವ ಸಾಧ್ಯತೆ ಇದೆ.. ಏಪ್ರಿಲ್‌ 16 ರಂದು‌ ಸರ್ಕಾರಿ, ಖಾಸಗಿ ಮತ್ತು ಅಂತಾರಾಷ್ಟ್ರೀಯ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ಲಭ್ಯವಿರುವ ಸಂಪನ್ಮೂಲಗಳ ಆಧಾರದಲ್ಲಿ ತರಗತಿಗಳನ್ನು ಆನ್‌ಲೈನ್‌ನಲ್ಲಿ ನಡೆಸಬಹುದು ಎಂದು ಹೇಳಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

15 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

15 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

16 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

16 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

16 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

18 hours ago