Featured

ಮಹಂತ ನರೇಂದ್ರ ಗಿರಿ ಆತ್ಮಹತ್ಯೆ: ಅವರ ಮೂವರು ಶಿಷ್ಯಂದಿರ ಬಂಧನ -Vishwanews24

ಮಹಂತ ನರೇಂದ್ರ ಗಿರಿ ಆತ್ಮಹತ್ಯೆ: ಅವರ ಮೂವರು ಶಿಷ್ಯಂದಿರ ಬಂಧನ -Vishwanews24

ಲಖನೌ: ಅಖಿಲ ಭಾರತೀಯ ಅಖಾಡ ಪರಿಷತ್‌ ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮೂವರು ಶಿಷ್ಯಂದಿರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಆನಂದಗಿರಿ, ಆದ್ಯ ತಿವಾರಿ ಮತ್ತು ಸಂದೀಪ್ ತಿವಾರಿ ಎಂದು ಗುರುತಿಸಲಾಗಿದೆ. ಆನಂದಗಿರಿಯನ್ನು ಹರಿದ್ವಾರದಲ್ಲಿ ಹಾಗೂ ಇನ್ನಿಬ್ಬರನ್ನು ಪ್ರಯಾಗ್‌ರಾಜ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಮೂವರ ವಿರುದ್ಧ ಐಪಿಸಿ ಸೆಕ್ಷನ್ 306ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಂಧಿತರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪದ ಅಡಿ ಐಪಿಸಿ ಸೆಕ್ಷನ್‌ 306ರ ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.

ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ಪಟ್ಟಣದಲ್ಲಿ ಬಘಾಂಬರಿ ಮಠದಲ್ಲಿನ ಕೊಠಡಿಯೊಳಗೆ ನೇಣುಬಿಗಿದ ಸ್ಥಿತಿಯಲ್ಲಿ ನರೇಂದ್ರ ಗಿರಿ ಅವರ ದೇಹ ಪತ್ತೆಯಾಗಿತ್ತು. ಪೊಲೀಸ್ ಮೂಲಗಳ ಪ್ರಕಾರ ಗಿರಿ ಅವರ ಕೊಠಡಿಯಲ್ಲಿ ಎಂಟು ಪುಟಗಳ ಆತ್ಮಹತ್ಯಾ ಪತ್ರ ಪತ್ತೆಯಾಗಿದೆ.

ಈ ಪತ್ರದಲ್ಲಿ ಮಹಾಂತ ಅವರು ‘ನನ್ನ ಮೂವರು ಶಿಷ್ಯಂದಿರು ನನಗೆ ಕಿರುಕುಳ ನೀಡುತ್ತಿದ್ದರು. ನಾನು ತುಂಬಾ ಘನತೆ ಮತ್ತು ಗೌರವದಿಂದ ಜೀವನ ನಡೆಸುತ್ತಿದ್ದೆ. ಆದರೆ, ಇತ್ತೀಚೆಗೆ ಶಿಷ್ಯಂದಿರ ಕಿರುಕುಳದಿಂದಾಗಿ ಅವಮಾನ ಅನುಭವಿಸಿ ಬದುಕುವಂತಾಯಿತು‘ ಎಂದು ಬರೆದಿರುವುದಾಗಿ ಪ್ರಯಾಗ್‌ರಾಜ್‌ನ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಪತ್ರದಲ್ಲಿ ತಮಗೆ ಕಿರುಕುಳ ನೀಡಿದ ಮೂವರು ಶಿಷ್ಯಂದಿರ ಹೆಸರನ್ನು ಬರೆದಿರುವುದಾಗಿ ಮೂಲಗಳು ತಿಳಿಸಿವೆ. ಈ ಪತ್ರದ ಆಧಾರದ ಮೇಲೆ ಪೊಲೀಸರು ಶಿಷ್ಯಂದಿರನ್ನು ಬಂಧಿಸಿದ್ದಾರೆ.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

20 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

20 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

20 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

23 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

23 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

23 hours ago