Featured

ಮಹತ್ವದ ತಿರುವು ಪಡೆದ ಸೋನಾಲಿ ಫೋಗಾಟ್‌ ಸಾವು ಪ್ರಕರಣ ; ವಿಷಮಿಶ್ರಿತ ಪಾನೀಯ ಕುಡಿಸಿ ಕೊಲೆ – Vishwanews24

ಮಹತ್ವದ ತಿರುವು ಪಡೆದ ಸೋನಾಲಿ ಫೋಗಾಟ್‌ ಸಾವು ; ವಿಷಮಿಶ್ರಿತ ಪಾನೀಯ ಕುಡಿಸಿ ಕೊಲೆ

ಪಣಜಿ: ಹರಿಯಾಣದ ಬಿಜೆಪಿ ನಾಯಕಿ ಸೋನಾಲಿ ಫೋಗಾಟ್‌ ಅವರ ಸಾವಿನ ತನಿಖೆ ಮಹತ್ವದ ತಿರುವು ಪಡೆದಿದ್ದು, ಅವರದ್ದು ಹೃದಯಾಘಾತದಿಂದಾದ ಸಾವಲ್ಲ, ಅದು ಕೊಲೆ ಎಂದು ಗೋವಾ ಪೊಲೀಸರು ದೃಢಪಡಿಸಿದ್ದಾರೆ.

ಅಂಜುನಾ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಐಜಿಪಿ ಓಂವೀರ್ ಸಿಂಗ್ ಬಿಷ್ಣೋಯ್, ಫೋಗಾಟ್‌ ಅವರ ಆಪ್ತರಾದ ಸುಧೀರ್‌ ಸಂಗ್ವಾನ್‌ ಮತ್ತು ಸುಖ್ವಿಂದರ್‌ ಸಿಂಗ್‌ ಬಿಜೆಪಿ ನಾಯಕಿಗೆ ಒತ್ತಾಯಪೂರ್ವಕವಾಗಿ ವಿಷಯುಕ್ತ ಪಾನೀಯ ಕುಡಿಸಿ ಕೊಂದಿದ್ದಾರೆ. ಕೊಲೆ ಮಾಡಿರುವುದನ್ನು ಇಬ್ಬರು ಆರೋಪಿಗಳು ಒಪ್ಪಿಕೊಂಡಿದ್ದು, ಇಬ್ಬರನ್ನೂ ಬಂಧಿಸಲಾಗಿದೆ ಎಂದು ತಿಳಿಸಿದರು

ಗುರುವಾರ ನಡೆದ ಮರಣೋತ್ತರ ಪರೀಕ್ಷೆಯಲ್ಲಿ ಫೋಗಾಟ್‌ ಅವರ ದೇಹದ ಮೇಲೆ ಹಲ್ಲೆಯ ಗಾಯದ ಗುರುತುಗಳಿದ್ದವು. ಗೋವಾ ವೈದ್ಯಕೀಯ ಕಾಲೇಜಿನ ವಿಧಿವಿಜ್ಞಾನ ತಜ್ಞರು ಫೋಗಾಟ್‌ ಸಾವಿನ ಕಾರಣವನ್ನು ರಾಸಾಯನಿಕವನ್ನು ವಿಶ್ಲೇಷಣೆ ನಡೆಸುವವರೆಗೂ ಬಹಿರಂಗಪಡಿಸಿರಲಿಲ್ಲ ಎಂದು ಬಿಷ್ಣೋಯ್‌ ತಿಳಿಸಿದರು.

ಅಂಜುನಾದ ಕರ್ಲೀಸ್‌ ರೆಸ್ಟೋರೆಂಟ್‌ನಿಂದ ಕಲೆ ಹಾಕಿರುವ ಸಾಕ್ಷ್ಯ ಮತ್ತು ಸಿಸಿಟಿವಿ ಕ್ಯಾಮೆರಾ ದೃಶ್ಯಗಳಿಂದ ಫೋಗಾಟ್‌ ಜತೆಗೆ ಪಾರ್ಟಿಯಲ್ಲಿ ಭಾಗವಹಿಸಿದ್ದ ಆಪ್ತರು ಆಕೆ ಕುಡಿದ ಪಾನೀಯದಲ್ಲಿ ವಿಷ ಬೆರೆಸಿರುವುದು ಮತ್ತು ಆಕೆ ನಿಯಂತ್ರಣ ಕಳೆದುಕೊಂಡು ಬಿದ್ದಾಗ ಆಕೆಯನ್ನು ಎತ್ತಿಕೊಂಡು ಹೋಗಿ, ಮತ್ತೊಮ್ಮೆ ಒತ್ತಾಯಪೂರ್ವಕವಾಗಿ ವಿಷಮಿಶ್ರಿತ ಪಾನೀಯ ಕುಡಿಸುತ್ತಿರುವುದುಕಂಡುಬಂದಿದೆ ಎಂದು ಹಿರಿಯ ಪೊಲಿಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಸೋನಾಲಿ ಫೋಗಾಟ್‌ ಅವರು ತಮ್ಮ ಆಪ್ತರೊಂದಿಗೆ ರಜೆ ಕಳೆಯಲು ಗೋವಾದಲ್ಲಿದ್ದರು. ಫೋಗಾಟ್‌ ಸಾವಿನಲ್ಲಿ ಏನೋ ಸಂಚು ಇದೆ ಎಂಬುದಾಗಿ ಅವರ ಕುಟುಂಬ ಸದಸ್ಯರು ಆರೋಪಿಸಿದ್ದರು. ಜತೆಗೆ ಫೋಗಾಟ್‌ ಅವರ ಸಹೋದರಿಯರು, ಆಕೆ ನಮಗೆ ಕರೆ ಮಾಡಿ ಸೋಮವಾರ ರಾತ್ರಿ ತಾನು ಸೇವಿಸಿದ ಆಹಾರದ ಬಗ್ಗೆ ಹೇಳಿಕೊಂಡಿದ್ದು ತನ್ನ ವಿರುದ್ದ ಏನೋ ಸಂಚು ನಡೆಯುತ್ತಿದೆ ಎಂದು ಹೇಳಿಕೊಂಡಿದ್ದರು.

ಸೋನಾಲಿ ಫೋಗಾಟ್ ಅವರ ಸಾವಿನ ಸಂಬಂಧ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಆಕೆಯ ಸಹೋದರ ರಿಂಕು ಢಾಕಾ ಒತ್ತಾಯಿಸಿದಾಗಲೂ, ಫೋಗಾಟ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಪ್ರಮೋದ್ ಸಾವಂತ್ ಹೇಳಿಕೆ ನೀಡಿದ್ದರು.

ಫೋಗಾಟ್‌ ಅವರ ಹತ್ಯೆಗೆ ರಾಜಕೀಯ ಉದ್ದೇಶ ಅಥವಾ ಹಣಕಾಸು ವಿಷಯವೇ ಎನ್ನುವುದು ಇನ್ನೂ ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಗೋವಾ ಕಾಂಗ್ರೆಸ್‌ ಒತ್ತಾಯಿಸಿದೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

18 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago