ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ದುರಂತ ಪ್ರಕರಣದಲ್ಲಿ 30 ಭಕ್ತರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸರ್ಕಾರ ಪ್ರಕಟಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಿಎಂ ಯೋಗಿ ಆದಿತ್ಯನಾಥ್ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಈ ದುರಂತದಲ್ಲಿ 90ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದು, 36 ಜನರು ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಎಂ ಆದಿತ್ಯನಾಥ್ ಅವರು ಕಾಲ್ತುಳಿತ ದುರಂತದ ಕುರಿತು ನ್ಯಾಯಾಂಗ ತನಿಖೆಗೆ ಆದೇಶ ನೀಡಿದ್ದಾರೆ. ತನಿಖೆ ನಡೆಸಲು ಉತ್ತರ ಪ್ರದೇಶ ಸರ್ಕಾರ ನ್ಯಾಯಮೂರ್ತಿ ಹರ್ಷ ಕುಮಾರ್, ಮಾಜಿ ಪೊಲೀಸ್ ಮಹಾ ನಿರ್ದೇಶಕ ವಿ.ಕೆ. ಗುಪ್ತಾ, ಮತ್ತು ನಿವೃತ್ತ ಮೂವರು ಸದಸ್ಯರೊಂದಿಗೆ ಆಯೋಗವನ್ನು ರಚಿಸಲಾಗಿದೆ.
ಪ್ರಯಾಗರಾಜ್‌ನ ಮಹಾಕುಂಭ ಮೇಳದಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟವರ ಪೈಕಿ ಕರ್ನಾಟಕದ ನಾಲ್ವರು, ಅಸ್ಸಾಂನ ಒಬ್ಬ ಮತ್ತು ಗುಜರಾತ್‌ನ ಒಬ್ಬ ಭಕ್ತರೂ ಇದ್ದಾರೆ ಎನ್ನಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…