Featured

ಮಹಾತ್ಮಾ ಗಾಂಧಿಯವರನ್ನು ಹತ್ಯೆಗೈದ ಕೊಲೆಗಡುಕನನ್ನೇ ಆರಾಧಿಸುವ ದೇಶದ್ರೋಹಿಗಳು  ಹೆಚ್ಚಾಗುತ್ತಿದ್ದಾರೆ : ಸಿದ್ದರಾಮಯ್ಯ -Vishwanews24

ಮಹಾತ್ಮಾ ಗಾಂಧಿಯವರನ್ನು ಹತ್ಯೆಗೈದ ಕೊಲೆಗಡುಕನನ್ನೇ ಆರಾಧಿಸುವ ದೇಶದ್ರೋಹಿಗಳು  ಹೆಚ್ಚಾಗುತ್ತಿದ್ದಾರೆ : ಸಿದ್ದರಾಮಯ್ಯ -Vishwanews24

ಬೆಂಗಳೂರು: ‘ಮಹಾತ್ಮಾಗಾಂಧಿಯವರನ್ನು ಹತ್ಯೆಗೈದ ಕೊಲೆಗಡುಕನನ್ನೇ ಆರಾಧಿಸುವ ದೇಶದ್ರೋಹಿಗಳು  ಹೆಚ್ಚಾಗುತ್ತಿದ್ದಾರೆ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದರು.

ಮಹಾತ್ಮಾಗಾಂಧಿಯವರ ಪುಣ್ಯ ಸ್ಮರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಹುತಾತ್ಮರ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಮಹಾತ್ಮಾಗಾಂಧೀಜಿಯವರು ಯಾರನ್ನೂ ಶತ್ರುಗಳು ತಿಳಿದು ಅವರ ವಿರುದ್ಧ ಹೋರಾಡಿದರೋ, ಅವರು ಗಾಂಧೀಜಿಯವರನ್ನು ಹತ್ಯೆಮಾಡಲಿಲ್ಲ. ದೇಶಪ್ರೇಮದ ಪಾಠ ಹೇಳುವ ಸಂಘಟನೆಯ ನಾಯಕ ನಾಥುರಾಮ್ ಗೋಡ್ಸೆ ಎಂಬ ದೇಶದ್ರೋಹಿ ಗಾಂಧೀಜಿಯವರನ್ನು ಹತ್ಯೆಮಾಡಿದ್ದ ಎಂಬುದನ್ನು ನಾವು ಮರೆಯಬಾರದು’ ಎಂದರು.

‘ಮಹಾತ್ಮಾಗಾಂಧೀಜಿಯವರು ಹುತಾತ್ಮರಾದ ದಿನವನ್ನು ನಾವು ಹುತಾತ್ಮರ ದಿನವಾಗಿ ಆಚರಿಸುತ್ತಿದ್ದೇವೆ. ಈ ಮೂಲಕ ಸ್ವಾತಂತ್ರ್ಯಹೋರಾಟಕ್ಕಾಗಿ ಪ್ರಾಣಾರ್ಪಣೆ ಮಾಡಿದ ಸಾವಿರಾರು ದೇಶಭಕ್ತರಿಗೆ ಗೌರವವನ್ನು ಅರ್ಪಿಸುತ್ತಿದ್ದೇವೆ. ಇವರಲ್ಲಿ ಬಹಳಷ್ಟು ಹುತಾತ್ಮರು ಅನಾಮಿಕರಾಗಿಯೇ ಉಳಿದಿದ್ದಾರೆ. ಅವರ ನಿಸ್ವಾರ್ಥವಾದ ದೇಶಭಕ್ತಿ ನಮಗೆಲ್ಲರಿಗೂ ಆದರ್ಶವಾಗಬೇಕು’

‘ಗಾಂಧೀಜಿ ಕಾಂಗ್ರೆಸ್ ಪಕ್ಷದ ನಾಯಕರಾಗಿ ಸ್ವಾತಂತ್ರ್ಯಹೋರಾಟವನ್ನು ಮುನ್ನಡೆಸಿದ್ದರೂ ಅಂತರಂಗದಲ್ಲಿ ಅವರೊಬ್ಬ ಸಮಾಜ ಸುಧಾರಕರಾಗಿದ್ದರು. ಪ್ರೀತಿ, ಸೋದರತೆ, ಅನುಕಂಪ, ಸತ್ಯ ಮತ್ತು ಅಹಿಂಸೆ ಎಂಬ ಪಂಚ ಸೂತ್ರಗಳ ಮೇಲೆ  ತಮ್ಮ  ಜೀವನ ಪಯಣ ನಡೆಸಿದ ಗಾಂಧೀಜಿ ಮಹಾನ್ ಸಮಾಜ ಪರಿವರ್ತಕ’.

‘ಗಾಂಧೀಜಿ ಜೀವನ ಮತ್ತು ಸಾಧನೆ ಹೇಗೆ ನಮ್ಮ ಆದರ್ಶಪ್ರಾಯವೋ, ಅದೇ ರೀತಿ ಅವರ ಸಾವು ಕೂಡಾ ನಮಗೆ ಪಾಠವಾಗಿದೆ. ಗಾಂಧೀಜಿಯವರು ಕೇವಲ ಸ್ವಾತಂತ್ರ್ಯಕ್ಕಾಗಿ, ಅಸ್ಪೃರ್ಶತೆಯ ನಿವಾರಣೆಗಾಗಿ, ಗ್ರಾಮೀಣ ಪ್ರದೇಶದ ಅಭಿವೃದ್ದಿಗಾಗಿ ಮಾತ್ರ ಹೋರಾಡಲಿಲ್ಲ. ಅವರು ಬಹುಮುಖ್ಯವಾದ ಕೋಮುಸಾಮರಸ್ಯಕ್ಕಾಗಿ ಕೂಡಾ ತನ್ನ ಕೊನೆ ಉಸಿರಿರುವ ತನಕ ಹೋರಾಡಿದರು. ಈ ತನ್ನ ಹೋರಾಟಕ್ಕಾಗಿಯೇ ತನ್ನ ಪ್ರಾಣವನ್ನು ಕಳೆದುಕೊಂಡರು.

ಆದರೆ, ಗಾಂಧೀಜಿ ಅವರು ಯಾವ ಉದ್ದೇಶಕ್ಕಾಗಿ ಹೋರಾಡಿದರೋ, ಆ ಕೋಮುಸೌಹಾರ್ದತೆಯ ಸ್ಥಾಪನೆಯ ಕಾರ್ಯ ಇನ್ನೂ ಅಪೂರ್ಣವಾಗಿಯೇ ಉಳಿದಿದೆ.

ಮಹಾತ್ಮಾ ಗಾಂಧೀಜಿ ಪ್ರತಿಪಾದಿಸಿದ ತತ್ವ, ಸಿದ್ಧಾಂತಗಳ ಪಾಲನೆ ಮಾಡಬೇಕು : ಮುಖ್ಯಮಂತ್ರಿ BSY -Vishwanews24

‘ಗಾಂಧೀಜಿಯವರ ಚಿಂತನೆಗಳು ಒಂದೊಂದಾಗಿ ನಮ್ಮ ಕಣ್ಣಮುಂದೆಯೇ ನಾಶಗೊಳಿಸುವ ಪ್ರಯತ್ನ ನಡೆಯುತ್ತಿದೆ. ಧರ್ಮಧರ್ಮಗಳ ನಡುವೆ ವೈಮನಸ್ಸು ಹುಟ್ಟಿಸಿ, ಗಲಭೆ ಸೃಷ್ಟಿಸಿ ಅದರ ಮೂಲಕ ರಾಜಕೀಯ ಲಾಭ ಪಡೆಯುವ ಹುನ್ನಾರ ನಡೆದಿದೆ. ‘

‘ಸ್ವಾತಂತ್ರ್ಯ ಹೋರಾಟದ ಮೂಲಕ ಬ್ರಿಟಿಷರ ಗುಲಾಮಗಿರಿಯಿಂದ ನಮ್ಮನ್ನು ಬಿಡುಗಡೆಗೊಳಿಸಿ ನಮಗೆ ರಾಜಕೀಯ ಸ್ವಾತಂತ್ರ್ಯವನ್ನು ನಮಗೆ ಗಳಿಸಿಕೊಟ್ಟರು. ಈಗ ನಾವು ನವವಸಾಹತುಷಾಹಿಗಳ ವಿರುದ್ಧ ಹೋರಾಡಿ ಸಾಮಾಜಿಕ ಸ್ವಾತಂತ್ರ್ಯವನ್ನು ಪಡೆಯಲು ಇನ್ನೊಂದು ಸ್ವಾತಂತ್ರ್ಯಹೋರಾಟ ನಡೆಸಬೇಕಾಗಿದೆ.’ ಎಂದರು.

‘ಇಂದಿನ ಭಾರತದಲ್ಲಿ ಅತ್ಯಂತ ಶೋಷಿತ ಸಮುದಾಯಗಳಾದ ರೈತರು,ಕಾರ್ಮಿಕರು, ಮಹಿಳೆಯರು,ದಲಿತರು ಮಾತ್ರವಲ್ಲ ಈ ದೇಶದ ಯಾವ ಸಾಮಾನ್ಯ ಮನುಷ್ಯ ಕೂಡಾ ಸುರಕ್ಷಿತವಾಗಿಲ್ಲ. ಈ ಅನ್ಯಾಯ,ಶೋಷಣೆ,ಅವಮಾನದ ವಿರುದ್ದ ನಾವು ದನಿ ಎತ್ತದೆ ಹೋದರೆ ಮುಂದಿನ ಪೀಳಿಗೆ ನಮ್ಮನ್ನು ಕ್ಷಮಿಸುವುದಿಲ್ಲ’.

‘ಇಂದು ಕೃಷಿ ವಿರೋಧಿ ಕಾನೂನುಗಳನ್ನು ವಿರೋಧಿಸಿ ಹೋರಾಡುತ್ತಿರುವ ರೈತರ ಮೇಲೆ ಕೇಂದ್ರ ಸರ್ಕಾರ ದೌರ್ಜನ್ಯ ನಡೆಸುತ್ತಿದೆ. ಇದು ಹಿಂಸೆಯನ್ನು ಕೂಡಾ ಅಹಿಂಸೆಯ ಮೂಲಕ ಹೋರಾಡಿ ಗೆದ್ದ ಮಹಾತ್ಮಗಾಂಧೀಜಿ ಅವರಿಗೆ ತೋರುವ ಅಗೌರವವಾಗಿದೆ’ ಎಂದು ಅವರು ಅಭಿಪ್ರಾಯ ಪಟ್ಟರು.

ಮಂಗಳೂರು: ಕಾಂಗ್ರೆಸ್ ಭವನದಲ್ಲಿ ಮಹಾತ್ಮ ಗಾಂಧಿ 73ನೇ ಪುಣ್ಯ ತಿಥಿ ಕಾರ್ಯಕ್ರಮ -Vishwanews24

 

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

13 minutes ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

25 minutes ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

33 minutes ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

2 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

2 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

2 hours ago