ಬೆಂಗಳೂರು : ಮಹಾತ್ಮ ಗಾಂಧಿಯವರನ್ನ ಗುಂಡಿಟ್ಟು ಕೊಂದಿರಬಹುದು ಆದ್ರೆ ಅವರ ಮೌಲ್ಯಗಳನ್ನು ಕೊಲ್ಲಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ, ಆರೆಸ್ಸೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ರಾಷ್ಟ್ರಪಿತ ಮಹಾತ್ಮ ಗಾಂಧಿ ಸ್ಮರಣಾರ್ಥ ಇಂದು ನಗರದ ಕೆಪಿಸಿಸಿ ಆವರಣದಲ್ಲಿ ಆಯೋಜಿಸಲಾಗಿದ್ದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಡಿಸಿಎಂ ಡಿಕೆ ಶಿವಕುಮಾರ ಅನುಪಸ್ಥಿತಿಯಲ್ಲೇ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ನಾವು ನಿಜವಾಗಿ ಮಹಾತ್ಮ ಗಾಂಧೀಜಿಗೆ ಗೌರವ ಸಲ್ಲಿಸುವುದು ಅಂದ್ರೆ ಯಾವ ಮೌಲ್ಯಗಳಿಗಾಗಿ ಅವರು ಹೋರಾಟ ಮಾಡಿದರೋ ಆ ಮೌಲ್ಯಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ದೇಶ ಸಮಾಜ ಕಟ್ಟುವ ಕೆಲಸ ಮಾಡಿದಾಗ ಮಾತ್ರ ಗಾಂಧೀಜಿಗೆ ಗೌರವ ಕೊಟ್ಟು ಅದಕ್ಕೊಂದು ಅರ್ಥ ಬರುತ್ತದೆ ಎಂದರು.
ಮಹಾತ್ಮ ಗಾಂಧೀಜಿಯವರು ಎಲ್ಲ ಧರ್ಮಗಳನ್ನ, ಭಾಷೆಗಳನ್ನ ಗೌರವಿಸುತ್ತಿದ್ದರು.ಬೇರೆ ಧರ್ಮದ ಬಗ್ಗೆ ಅವರಿಗೆ ಸಹಿಷ್ಣುತೆ ಇತ್ತು. ಸಮಾನತೆ ಸಹಿಷ್ಣುತೆ ಇರುವ ದೇಶ ನಮ್ಮದು. ನಾವೆಲ್ಲರೂ ಕೂಡ ಬೇರೆ ಧರ್ಮ ಬೇರೆ ಭಾಷೆ ಬಗ್ಗೆ ಸಹಿಷ್ಣುತೆ ಇಟ್ಟುಕೊಳ್ಳಬೇಕು. ವೈವಿದ್ಯತೆಯಲ್ಲಿ ಏಕತೆಯನ್ನು ಕಾಣಬೇಕು. ಯಾವ ಧರ್ಮ ಮೇಲಲ್ಲ, ಯಾವುದೂ ಕೀಳಲ್ಲ. ಯಾವುದೇ ಜಾತಿ ಮೇಲಲ್ಲ, ಯಾವುದೂ ಕೀಳಲ್ಲ ಎಂದರು.
ಸಂವಿಧಾನ ರಕ್ಷಣೆ ಮಾಡಬೇಕಾಗಿದ್ದು ನಮ್ಮ ಕರ್ತವ್ಯ. ಕೆಲವು ಮತಾಂಧ ಶಕ್ತಿಗಳು ನಮ್ಮ ಸಂವಿಧಾನಕ್ಕೆ ಧಕ್ಕೆ ತರುವ ಪ್ರಯತ್ನ ಮಾಡ್ತಿದ್ದಾರೆ. ಹೀಗಾಗಿ ಸಂವಿಧಾನ ರಕ್ಷಣೆ ಆದ್ರೆ ನಮ್ಮೆಲ್ಲರ ರಕ್ಷಣೆ ಆಗುತ್ತದೆ. ಬಿಜೆಪಿಯವರು ದೇಶವನ್ನು ಹಿಂದೂಸ್ಥಾನ, ಹಿಂದೂರಾಷ್ಟ್ರ ಮಾಡ್ತಿವಿ ಅಂತಾ ಹೊರಟಿದ್ದಾರೆ. ಏಕ ಭಾಷೆ ಏಕ ಸಂಹಿತೆ ಜಾರಿಗೆ ತರಲು ಹೊರಟ್ಟಿದ್ದಾರೆ. ನಾವು ಪ್ರಜಾಪ್ರಭುತ್ವ ಉಳಿಸಬೇಕು ಪ್ರಜಾಪ್ರಭುತ್ವ ರಕ್ಷಣೆ ರಕ್ಷಣೆ ಮಾಡಬೇಕು. ನಾವೆಲ್ಲರೂ ಈಗ ಎರಡನೇ ಹೋರಾಟವನ್ನು ಮಾಡಬೇಕಿದೆ ಎಂದರು.
ಕಾಂಗ್ರೆಸ್‌ನಿಂದ ಮಾತ್ರ ಸಂವಿಧಾನ ಉಳಿಸಲು ಸಾಧ್ಯ:
ಕಾಂಗ್ರೆಸ್ ಕಾರ್ಯಕರ್ತರಿಂದ ಮಾತ್ರ ಸಂವಿಧಾನ ಉಳಿಸಲು ಸಾಧ್ಯ ಎಂದ ಸಿಎಂ ಸಿದ್ದರಾಮಯ್ಯ ಅವರು, ಕಾರ್ಯಕರ್ತರಿಗೆ ಇದು ಅತ್ಯಂತ ಅಗತ್ಯ ಮತ್ತು ಅನಿವಾರ್ಯತೆಯಾಗಿದೆ. ಬಿಜೆಪಿ ಮತ್ತು ಆರ್ ಎಸ್ ಎಸ್ ನವರು ಗಾಂಧಿ ಕೊಂದವರನ್ನು ಆರಾಧಿಸುತ್ತಿದ್ದಾರೆ. ಗೋಡ್ಸೆ ಒಬ್ಬ ಹಂತಕ, ಮತಾಂಧ ಅವನನ್ನು ಆರೆಸ್ಸೆಸ್‌ನವರು ಪೂಜಿಸುತ್ತಾರೆ. ಹಿಂದೆ ಗೋಳವಾಲ್ಕರ್ ‘ಸಂವಿಧಾನದಲ್ಲಿ ಭಾರತೀಯತೆಯೇ ಇಲ್ಲ’ ಎಂದಿದ್ದರು. ಈಗಿನ ಆರೆಸ್ಸೆಸ್ ಬಿಜೆಪಿ ಸಂವಿಧಾನವನ್ನೇ ರೀರೈಟ್ ಮಾಡಿ ಮನುಸ್ಮೃತಿ ತರಲು ಹೊರಟಿದ್ದಾರೆ. ಹೀಗಾಗಿ ನಾವು ಸಂವಿಧಾನ ವಿರೋಧಿಗಳ ವಿರುದ್ಧ ಹೋರಾಟ ಮಾಡಬೇಕು ಎಂದು ಕರೆ ನೀಡಿದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…