ಅಲಿಗಡ: ಹುತಾತ್ಮರ ದಿನದಂದು (ಜನವರಿ 30) ಉತ್ತರ ಪ್ರದೇಶದಲ್ಲಿ ಮಹಾತ್ಮ ಗಾಂಧಿ ಹತ್ಯೆ ಘಟನೆಯನ್ನು ಮರುಸೃಷ್ಟಿಸಿ ಸಂಭ್ರಮಾಚರಿಸಿ ವಿಕೃತಿ ಮೆರೆದಿದ್ದ ಘಟನೆ ರಾಷ್ಟ್ರದಾದ್ಯಂತ ಚರ್ಚೆಯಾಗುತ್ತಿದ್ಧಂತೆ, ಘಟನೆಯ ರೂವಾರಿ ಪೂಜಾ ಶಕುನ್ ಪಾಂಡೆ ನಾಪತ್ತೆಯಾಗಿದ್ದರು. ಮಂಗಳವಾರ ಅಲಿಗಡದಲ್ಲಿ ಅವರನ್ನು ಬಂಧಿಸಲಾಗಿದೆ.
ಅಖಿಲ ಭಾರತ ಹಿಂದೂ ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ಪೂಜಾ ಶಕುನ್ ಪಾಂಡೆ ಮತ್ತು ಅವರ ತಂಡ, ಮಹಾತ್ಮ ಗಾಂಧಿ ಅವರ 71ನೇ ಪುಣ್ಯಸ್ಮರಣೆಯ ದಿನ ಗಾಂಧಿ ಪ್ರತಿಕೃತಿಗೆ ಗುಂಡು ಹಾರಿಸುವ ಮೂಲಕ ಹತ್ಯೆ ಘಟನೆಯನ್ನು ಮರುಸೃಷ್ಟಿಸಲಾಗಿತ್ತು. ಬಲಪಂಥೀಯರ ಈ ಆಚರಣೆ ಸಂಬಂಧ ಉತ್ತರ ಪ್ರದೇಶ ಪೊಲೀಸರು 12 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ವಿಡಿಯೊದಲ್ಲಿ ಕಾಣಿಸಿಕೊಂಡಿದ್ದ ಇತರೆ ಮೂವರನ್ನು ಕಳೆದ ವಾರ ಪೊಲೀಸರು ಬಂಧಿಸಿದ್ದರು. ಪೂಜಾ ಪತಿ ಅಶೋಕ್ ಪಾಂಡೆಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೇಸರಿಧಾರಿಯಾಗಿದ್ದ ಪೂಜಾ ಶಕುನ್ ಪಾಂಡೆ ಏರ್ ಪಿಸ್ತೂಲ್ ಮೂಲಕ ಗಾಂಧೀಜಿ ಚಿತ್ರಕ್ಕೆ ಗುಂಡು ಹಾರಿಸಿದ್ದು ಮತ್ತು ಗಾಂಧೀಜಿ ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆ ಚಿತ್ರಕ್ಕೆ ಮಾಲೆ ಹಾಕಿದ ವಿಡಿಯೊ, ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಪೂಜಾ ಮಾಡಿದ ಕೃತ್ಯದ ವಿರುದ್ಧ ಬಹಳಷ್ಟು ಜನ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
ಹಿಂದೂ ಮಹಾಸಭಾ ನಾಥೂರಾಮ್ ಗೋಡ್ಸೆ ಕಾರ್ಯವನ್ನು ದೇಶಭಕ್ತಿ ಎಂದೇ ಬಿಂಬಿಸಲು ಪ್ರಯತ್ನಿಸುತ್ತಿದ್ದು, 2015ರಲ್ಲಿ ಹಿಂದೂ ಮಹಾಸಭಾ ಮುಖಂಡ ಸ್ವಾಮಿ ಪ್ರಣವಾನಂದ ಗೋಡ್ಸೆಯ ಪ್ರತಿಮೆಗಳನ್ನು ಅನಾವರಣಗೊಳಿಸುವುದಾಗಿ ಘೋಷಿಸಿದ್ದರು. ಕರ್ನಾಟಕದ ಆರು ಜಿಲ್ಲೆಗಳಲ್ಲಿ ಗೋಡ್ಸೆ ಪ್ರತಿಮೆ ಸ್ಥಾಪಿಸುವ ಯೋಜನೆ ಪ್ರಕಟಿಸಿದ್ದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…