Featured

ಮಹಾತ್ಮ ಗಾಂಧಿ ಪ್ರತಿಕೃತಿಗೆ ಗುಂಡು ಹಾರಿಸಿದ್ದ ಹಿಂದೂ ಮಹಾಸಭಾ ನಾಯಕಿ ಬಂಧನ – Vishwanews24

ಅಲಿಗಡ: ಹುತಾತ್ಮರ ದಿನದಂದು (ಜನವರಿ 30) ಉತ್ತರ ಪ್ರದೇಶದಲ್ಲಿ ಮಹಾತ್ಮ ಗಾಂಧಿ ಹತ್ಯೆ ಘಟನೆಯನ್ನು ಮರುಸೃಷ್ಟಿಸಿ ಸಂಭ್ರಮಾಚರಿಸಿ ವಿಕೃತಿ ಮೆರೆದಿದ್ದ ಘಟನೆ ರಾಷ್ಟ್ರದಾದ್ಯಂತ ಚರ್ಚೆಯಾಗುತ್ತಿದ್ಧಂತೆ, ಘಟನೆಯ ರೂವಾರಿ ಪೂಜಾ ಶಕುನ್‌ ಪಾಂಡೆ ನಾಪತ್ತೆಯಾಗಿದ್ದರು. ಮಂಗಳವಾರ ಅಲಿಗಡದಲ್ಲಿ ಅವರನ್ನು ಬಂಧಿಸಲಾಗಿದೆ.

ಅಖಿಲ ಭಾರತ ಹಿಂದೂ ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ಪೂಜಾ ಶಕುನ್ ಪಾಂಡೆ ಮತ್ತು ಅವರ ತಂಡ, ಮಹಾತ್ಮ ಗಾಂಧಿ ಅವರ 71ನೇ ಪುಣ್ಯಸ್ಮರಣೆಯ ದಿನ ಗಾಂಧಿ ಪ್ರತಿಕೃತಿಗೆ ಗುಂಡು ಹಾರಿಸುವ ಮೂಲಕ ಹತ್ಯೆ ಘಟನೆಯನ್ನು ಮರುಸೃಷ್ಟಿಸಲಾಗಿತ್ತು. ಬಲಪಂಥೀಯರ ಈ ಆಚರಣೆ ಸಂಬಂಧ ಉತ್ತರ ಪ್ರದೇಶ ಪೊಲೀಸರು 12 ಮಂದಿ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿದ್ದರು. ವಿಡಿಯೊದಲ್ಲಿ ಕಾಣಿಸಿಕೊಂಡಿದ್ದ ಇತರೆ ಮೂವರನ್ನು ಕಳೆದ ವಾರ ಪೊಲೀಸರು ಬಂಧಿಸಿದ್ದರು. ಪೂಜಾ ಪತಿ ಅಶೋಕ್ ಪಾಂಡೆಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೇಸರಿಧಾರಿಯಾಗಿದ್ದ ಪೂಜಾ ಶಕುನ್‌ ಪಾಂಡೆ ಏರ್‌ ಪಿಸ್ತೂಲ್‌ ಮೂಲಕ ಗಾಂಧೀಜಿ ಚಿತ್ರಕ್ಕೆ ಗುಂಡು ಹಾರಿಸಿದ್ದು ಮತ್ತು ಗಾಂಧೀಜಿ ಹತ್ಯೆ ಮಾಡಿದ ನಾಥೂರಾಮ್‌ ಗೋಡ್ಸೆ ಚಿತ್ರಕ್ಕೆ ಮಾಲೆ ಹಾಕಿದ ವಿಡಿಯೊ, ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿತ್ತು. ಪೂಜಾ ಮಾಡಿದ ಕೃತ್ಯದ ವಿರುದ್ಧ ಬಹಳಷ್ಟು ಜನ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಹಿಂದೂ ಮಹಾಸಭಾ ನಾಥೂರಾಮ್‌ ಗೋಡ್ಸೆ ಕಾರ್ಯವನ್ನು ದೇಶಭಕ್ತಿ ಎಂದೇ ಬಿಂಬಿಸಲು ಪ್ರಯತ್ನಿಸುತ್ತಿದ್ದು, 2015ರಲ್ಲಿ ಹಿಂದೂ ಮಹಾಸಭಾ ಮುಖಂಡ ಸ್ವಾಮಿ ಪ್ರಣವಾನಂದ ಗೋಡ್ಸೆಯ ಪ್ರತಿಮೆಗಳನ್ನು ಅನಾವರಣಗೊಳಿಸುವುದಾಗಿ ಘೋಷಿಸಿದ್ದರು. ಕರ್ನಾಟಕದ ಆರು ಜಿಲ್ಲೆಗಳಲ್ಲಿ ಗೋಡ್ಸೆ ಪ್ರತಿಮೆ ಸ್ಥಾಪಿಸುವ ಯೋಜನೆ ಪ್ರಕಟಿಸಿದ್ದರು.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

11 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

13 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

13 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

13 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

13 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

13 hours ago