Featured

ಮಹಾತ್ಮ ಗಾಂಧಿ ಹೆಸರನ್ನು ಬದಲಾವಣೆ ಮಾಡಿರುವುದು ನೋಡಿದರೆ ಬಿಜೆಪಿಯ ಅಂತ್ಯ ಪ್ರಾರಂಭವಾಗಿದೆ ಎಂದು ನನಗೆ ಅನಿಸುತ್ತಿದೆ : ಡಿ.ಕೆ.ಶಿವಕುಮಾರ್ – vishwanews24

ಮಹಾತ್ಮ ಗಾಂಧಿ ಹೆಸರನ್ನು ಬದಲಾವಣೆ ಮಾಡಿರುವುದು ನೋಡಿದರೆ ಬಿಜೆಪಿಯ ಅಂತ್ಯ ಪ್ರಾರಂಭವಾಗಿದೆ ಎಂದು ನನಗೆ ಅನಿಸುತ್ತಿದೆ : ಡಿ.ಕೆ.ಶಿವಕುಮಾರ್

ಬೆಂಗಳೂರು: ಹುಟ್ಟಿದ ಸೂರ್ಯ ಮುಳುಗಲೇ ಬೇಕು. ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯುವುದರ ಮೂಲಕ ಕೇಂದ್ರ ಬಿಜೆಪಿ ಸಡಿಕಾರದ ಕೊನೆಯ ದಿನಗಳು ಪ್ರಾರಂಭವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಸೋಮವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಾಂವಿಧಾನಿಕವಾಗಿ ಕಾಂಗ್ರೆಸ್ ಪಕ್ಷ ನೀಡಿದ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಕಾರ್ಯಕ್ರಮವನ್ನು ಬಿಜೆಪಿ ಮುಟ್ಟುವ ಧೈರ್ಯ ಮಾಡುತ್ತದೆ ಎಂದುಕೊಂಡಿರಲಿಲ್ಲ. ಆದರೆ ಈಗ ಮನರೇಗಾ ಹೆಸರನ್ನು ಬದಲಾವಣೆ ಮಾಡಿರುವುದು ನೋಡಿದರೆ ಬಿಜೆಪಿಯ ಅಂತ್ಯ ಪ್ರಾರಂಭವಾಗಿದೆ ಎಂದು ನನಗೆ ಅನಿಸುತ್ತಿದೆ ಎಂದರು.

ಬಡವರಿಗೆ ಕೊಟ್ಟ ಕಾರ್ಯಕ್ರಮದ ಕುತ್ತಿಗೆ ಹಿಸುಕುವ ಕೆಲಸ ಮಾಡಲಾಗುತ್ತಿದೆ. ದೇಶದ ಬಡಜನತೆಗೆ ಎಸಗುತ್ತಿರುವ ದ್ರೋಹವಿದು. ಇದಕ್ಕಿಂತ ದೊಡ್ಡ ಅವಮಾನವಿಲ್ಲ. ಡಿ.27 ರಂದು ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಮಾಡಲಾಗುತ್ತದೆ. ಹೆಸರು ಬದಲಾವಣೆ ಹಿಂಪಡೆಯುವ ತನಕ ಪಂಚಾಯಿತಿಯಿಂದ ಪಾರ್ಲಿಮೆಂಟ್ ತನಕ ಹೋರಾಟ ರೂಪಿಸಲಾಗುವುದು ಎಂದು ಶಿವಕುಮಾರ್ ಹೇಳಿದರು.

Vishwa News 24

Recent Posts

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 hour ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 hours ago

ಮಂಗಳೂರು: ವಿದೇಶಿ ಉದ್ಯೋಗದ ಆಮಿಷಕ್ಕೆ ವಂಚಕರ ಬಲೆಗೆ ಬೀಳದಂತೆ ಯುವಜನತೆಗೆ ಪೊಲೀಸ್‌ ಆಯುಕ್ತರ ಎಚ್ಚರಿಕೆ – vishwanews24

ಮಂಗಳೂರು: ವಿದೇಶಿ ಉದ್ಯೋಗದ ಆಕಾಂಕ್ಷಿಗಳು ಯಾವುದೇ ಏಜೆನ್ಸಿಯನ್ನು ನಂಬುವ ಮುನ್ನಎಚ್ಚರ : ಸುಧೀರ್ ಕುಮಾರ್ ರೆಡ್ಡಿ ಮನವಿ ಮಂಗಳೂರು: ವಿದೇಶದಲ್ಲಿ…

2 hours ago

ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್ ಶಾಕ್ : ED ದಾಳಿ ಬೆನ್ನಲ್ಲೇ IT ಇಲಾಖೆ ಅಧಿಕಾರಿಗಳಿಂದ ದಾಳಿ – vishwanews24

ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್ ಶಾಕ್ : ED ದಾಳಿ ಬೆನ್ನಲ್ಲೇ, IT ಇಲಾಖೆ ಅಧಿಕಾರಿಗಳಿಂದ ದಾಳಿ ಬೆಂಗಳೂರು: ಅಟ್ಟಿಕಾ…

2 hours ago

ಕಾನ್ಪುರದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಸ್ತಿ ಕೈತಪ್ಪುವ ಭೀತಿಯಿಂದ ತಂದೆಯನ್ನೇ ಮುಗಿಸಿದ ಮಗ – vishwanews24

ಕಾನ್ಪುರದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಸ್ತಿ ಬೇರೆ ಮಹಿಳೆಯ ಪಾಲಾಗಬಹುದೆಂಬ ಭೀತಿಯಿಂದ ತಂದೆಯನ್ನೇ ಮುಗಿಸಿದ ಮಗ …

3 hours ago