ಮಹಾತ್ಮ ಗಾಂಧೀಜಿಯನ್ನು ಕೊಂದವರು ನನ್ನನ್ನ ಬಿಡ್ತಾರಾ??  : ಬಿಜೆಪಿ ಪ್ರತಿಭಟನಾಕಾರರ ವಿರುದ್ಧ ಸಿದ್ದರಾಮಯ್ಯ – Vishwanews24

Featured, ರಾಜ್ಯ ನ್ಯೂಸ್

ಮಹಾತ್ಮ ಗಾಂಧೀಜಿಯನ್ನು ಕೊಂದವರು ನನ್ನನ್ನ ಬಿಡ್ತಾರಾ??  : ಬಿಜೆಪಿ ಪ್ರತಿಭಟನಾಕಾರರ

ವಿರುದ್ಧ ಸಿದ್ದರಾಮಯ್ಯ

ಚಿಕ್ಕಮಗಳೂರು: ಮಹಾತ್ಮ ಗಾಂಧಿ ಕೊಂದವರು, ನನ್ನನ್ನ ಬಿಡ್ತಾರಾ ಎಂದು ಬಿಜೆಪಿ ಪ್ರತಿಭಟನಾಕಾರರ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಫಿನಾಡು ಚಿಕ್ಕಮಗಳೂರು ಪ್ರವಾಸದಲ್ಲಿರುವ ಸಿದ್ದರಾಮಯ್ಯನವರು ಮಾತನಾಡಿ, ಮಹಾತ್ಮ ಗಾಂಧಿಯನ್ನೇ ಕೊಂದವರು, ನನ್ನನ್ನು ಬಿಡುತ್ತಾರಾ? ಮಹಾತ್ಮಾ ಗಾಂಧಿಯನ್ನು ಕೊಂದ ನಾಥೂರಾಮ್ ಗೋಡ್ಸೆ ಅವರ ಫೋಟೋವನ್ನು ಇಟ್ಟು ಬಿಜೆಪಿ ಯವರು ಪೂಜೆ ಮಾಡುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮತ್ತೊಂದೆಡೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಮಕ್ಕಿಕೊಪ್ಪ ಗ್ರಾಮಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಹಿಂದೂ ಸಂಘಟನೆ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ. ಅಲ್ಲದೇ ಪ್ರತಿಭಟನೆ ವೇಳೆ ಸಾವರ್ಕರ್ ಫೋಟೋ ಹಿಡಿದು ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

ಸಿದ್ದರಾಮಯ್ಯಗೆ ಮೊಟ್ಟೆ ಎಸೆದು ಪ್ರತಿಭಟಿಸುತ್ತಿರುವ ಬಿಜೆಪಿ ಕಾರ್ಯಕರ್ತರು .. ಇದು ಯಾರೂ ಹೇಳಿಕೊಟ್ಟು ಮಾಡಿಸುತ್ತಿರುವುದಲ್ಲ ..

 

Leave a Reply