ನವದೆಹಲಿ,: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 73ನೇ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಸ್ಮರಿಸಿಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, “ರಾಷ್ಟ್ರ ಪಿತಾಮಹ ಮಹಾತ್ಮ ಗಾಂಧಿ ಅವರಿಗೆ ನನ್ನ ವಿನಮ್ರ ಗೌರವ. ಅವರ ಶಾಂತಿ, ಅಹಿಂಸೆ, ಸರಳತೆ, ಸಾಧನೆಗೆ ಹಾಗೂ ನಮ್ರತೆಯ ಆದರ್ಶಗಳಿಗೆ ನಾವು ಬದ್ಧರಾಗಿರಬೇಕು. ಅವರ ಸತ್ಯ ಹಾಗೂ ಪ್ರೀತಿಯ ಮಾರ್ಗವನ್ನು ಅನುಸರಿಸಲು ನಾವು ನಿರ್ಧರಿಸೋಣ” ಎಂದಿದ್ದಾರೆ.
“ಬಾಪು ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನಗಳನ್ನು ಸಲ್ಲಿಸುತ್ತೇನೆ. ಅವರ ಆದರ್ಶಗಳು ಲಕ್ಷಾಂತರ ಜನರಿಗೆ ಪ್ರೇರಣೆಯಾಗಿದೆ. ಹುತಾತ್ಮರ ದಿನದಂದು ಭಾರತದ ಸ್ವಾತಂತ್ರ್ಯ ಮತ್ತು ಪ್ರತಿಯೊಬ್ಬ ಭಾರತೀಯರ ಯೋಗಕ್ಷೇಮಕ್ಕಾಗಿ ತಮ್ಮನ್ನು ತಾವು ಅರ್ಪಿಸಿಕೊಂಡ ಎಲ್ಲ ಮಹಾನ್ ಮಹಿಳೆಯರು ಮತ್ತು ಪುರುಷರ ವೀರರ ತ್ಯಾಗವನ್ನು ನಾವು ಸ್ಮರಿಸೋಣ” ಎಂದು ಹೇಳಿದ್ದಾರೆ.
ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದು, “ಸತ್ಯ, ಅಹಿಂಸೆಯ ಆದರ್ಶಗಳ ಸಾಕಾರ ಮೂರ್ತಿಯಂತಿದ್ದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಪುಣ್ಯತಿಥಿಯಂದು ಅವರಿಗೆ ಭಕ್ತಿಪೂರ್ವಕ ಪ್ರಣಾಮಗಳು. ನಮ್ಮನ್ನು ಸದಾ ಎಚ್ಚರಿಸುವ ಗಾಂಧೀಜಿಯವರ ಜೀವನ, ಅವರ ನಡೆ ಮತ್ತು ನುಡಿಗಳ ಬೆಳಕಿನಲ್ಲಿ ಸಮೃದ್ಧ, ಸಶಕ್ತ ಭಾರತ ನಿರ್ಮಾಣದ ಹಾದಿಯಲ್ಲಿ ಮುನ್ನಡೆಯೋಣ” ಎಂದಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…