ಮಹಾಬಲಿಪರಂ ಬೀಚ್ ನಲ್ಲಿ ಪ್ರಧಾನಿ ಮೋದಿಯಿಂದ ಪ್ಲಾಸ್ಟಿಕ್ ಹೆಕ್ಕಿ ಸ್ವಚ್ಛ ಭಾರತ ಅಭಿಯಾನ -Vishwanews24

Featured, ದೇಶ, ರಾಷ್ಟ್ರ ನ್ಯೂಸ್

ಮಹಾಬಲಿಪುರಂ : ಮಹಾಬಲಿಪರಂ ಬೀಚ್ ನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು  ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದ ವೇಳೆ  ಅಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಮತ್ತು ಬಾಟಲಿಗಳನ್ನು ಹೆಕ್ಕಿ ತೆಗೆದಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.

ಸ್ವತಃ ಸ್ವಚ್ಚ ಭಾರತ ಅಭಿಯಾನವನ್ನು ಕೈಗೊಂಡ ವಿಡಿಯೋವನ್ನು ಟ್ವೀಟ್ ಮಾಡಿರುವ ಪಿಎಂ ಮೋದಿ, ಸಾರ್ವಜನಿಕ ಸ್ಥಳಗಳನ್ನು ಸ್ವಚ್ಚ ಮತ್ತು  ಅಚ್ಚುಕಟ್ಟಾಗಿರಿಸುವಂತೆ ಸೂಚನೆ ನೀಡಿದ್ದಾರೆ . ಅದರ ಜೊತೆಗೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಹರಿಸಬೇಕೆಂದು ತಿಳಿಸಿದ್ದಾರೆ.

ಈ ಕುರಿತ ವಿಡಿಯೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಅವರು, ಸಂಗ್ರಹಿಸಲಾದ ಕಸವನ್ನು ಹೋಟೆಲ್‍ನ ಸಿಬ್ಬಂದಿ ಜಯರಾಜ್ ಅವರಿಗೆ ನೀಡಿದ್ದಾಗಿ ತಿಳಿಸಿದ್ದಾರೆ. ಅಲ್ಲದೇ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಡುವ ಕಾರ್ಯವನ್ನು ಮಾಡೋಣ, ಸದೃಡ ಆರೋಗ್ಯವನ್ನು ಪಡೆಯೋಣ ಎಂದಿದ್ದಾರೆ.

ವಿಡಿಯೋದಲ್ಲಿ ಮೋದಿ ಅವರು, ಸಮುದ್ರದ ಮರಳಿನ ಮೇಲೆ ಬಿದ್ದಿದ್ದ ಪ್ಲಾಸ್ಟಿಕ್ ಬಾಟಲಿ, ಚೀಲ ಹಾಗೂ ಚಪ್ಪಲಿಗಳನ್ನು ತೆಗೆದು ದೊಡ್ಡ ಪ್ಲಾಸ್ಟಿಕ್ ಚೀಲದಲ್ಲಿ ಸಂಗ್ರಹಿಸುತ್ತಿರುವುದನ್ನು ಕಾಣಬಹುದಾಗಿದೆ. ಪ್ರಧಾನಿಗಳ ಈ ವಿಡಿಯೋವನ್ನು ಇದುವರೆಗೂ ಸುಮಾರು 60 ಸಾವಿರ ಮಂದಿ ಲೈಕ್ ಮಾಡಿದ್ದು, 18 ಸಾವಿರಕ್ಕೂ ಹೆಚ್ಚು ಮಂದಿ ಟ್ವಿಟನ್ನು ರಿಟ್ವೀಟ್ ಮಾಡಿದ್ದಾರೆ.