ಮಹಾಬಲಿಪುರಂ : ಮಹಾಬಲಿಪರಂ ಬೀಚ್ ನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದ ವೇಳೆ ಅಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಮತ್ತು ಬಾಟಲಿಗಳನ್ನು ಹೆಕ್ಕಿ ತೆಗೆದಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.
ಸ್ವತಃ ಸ್ವಚ್ಚ ಭಾರತ ಅಭಿಯಾನವನ್ನು ಕೈಗೊಂಡ ವಿಡಿಯೋವನ್ನು ಟ್ವೀಟ್ ಮಾಡಿರುವ ಪಿಎಂ ಮೋದಿ, ಸಾರ್ವಜನಿಕ ಸ್ಥಳಗಳನ್ನು ಸ್ವಚ್ಚ ಮತ್ತು ಅಚ್ಚುಕಟ್ಟಾಗಿರಿಸುವಂತೆ ಸೂಚನೆ ನೀಡಿದ್ದಾರೆ . ಅದರ ಜೊತೆಗೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಹರಿಸಬೇಕೆಂದು ತಿಳಿಸಿದ್ದಾರೆ.
ಈ ಕುರಿತ ವಿಡಿಯೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಅವರು, ಸಂಗ್ರಹಿಸಲಾದ ಕಸವನ್ನು ಹೋಟೆಲ್‍ನ ಸಿಬ್ಬಂದಿ ಜಯರಾಜ್ ಅವರಿಗೆ ನೀಡಿದ್ದಾಗಿ ತಿಳಿಸಿದ್ದಾರೆ. ಅಲ್ಲದೇ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಡುವ ಕಾರ್ಯವನ್ನು ಮಾಡೋಣ, ಸದೃಡ ಆರೋಗ್ಯವನ್ನು ಪಡೆಯೋಣ ಎಂದಿದ್ದಾರೆ.
ವಿಡಿಯೋದಲ್ಲಿ ಮೋದಿ ಅವರು, ಸಮುದ್ರದ ಮರಳಿನ ಮೇಲೆ ಬಿದ್ದಿದ್ದ ಪ್ಲಾಸ್ಟಿಕ್ ಬಾಟಲಿ, ಚೀಲ ಹಾಗೂ ಚಪ್ಪಲಿಗಳನ್ನು ತೆಗೆದು ದೊಡ್ಡ ಪ್ಲಾಸ್ಟಿಕ್ ಚೀಲದಲ್ಲಿ ಸಂಗ್ರಹಿಸುತ್ತಿರುವುದನ್ನು ಕಾಣಬಹುದಾಗಿದೆ. ಪ್ರಧಾನಿಗಳ ಈ ವಿಡಿಯೋವನ್ನು ಇದುವರೆಗೂ ಸುಮಾರು 60 ಸಾವಿರ ಮಂದಿ ಲೈಕ್ ಮಾಡಿದ್ದು, 18 ಸಾವಿರಕ್ಕೂ ಹೆಚ್ಚು ಮಂದಿ ಟ್ವಿಟನ್ನು ರಿಟ್ವೀಟ್ ಮಾಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…