ಬೀಜಿಂಗ್: ಈಗಾಗಲೇ ಸಹಸ್ರಾರು ಮಂದಿಯನ್ನು ಬಲಿ ಪಡೆದುಕೊಂಡಿರುವ ಮಹಾಮಾರಿ ಕೊರೋನಾ ವೈರಸ್ ಚೀನಾದಲ್ಲಿ ಮತ್ತಷ್ಟು ವ್ಯಾಪಕವಾಗಿ ಹಬ್ಬುತ್ತಿದ್ದು, ಒಂದೇ ದಿನ ಬರೋಬ್ಬರಿ 121 ಮಂದಿ ಇಹಲೋಕ ತ್ಯಜಿಸಿದ್ದಾರೆ.ಇದರಿಂದ ಮೃತಪಟ್ಟವರ ಸಂಖ್ಯೆ 1400ಕ್ಕೆ ಏರಿಕೆಯಾಗಿದೆ.
ಒಂದೇ ದಿನ 5,090 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 63,851ಕ್ಕೆ ಏರಿಕೆಯಾಗಿದೆ. ಸಾಮಾನ್ಯವಾಗಿ ಪ್ರತಿನಿತ್ಯ ಸರಾಸರಿ 80 ಜನರಂತೆ ಕೊರೋನಾ ಪೀಡಿತರು ಚೀನಾದಲ್ಲಿ ಮರಣ ಹೊಂದುತ್ತಿದ್ದರು. ಆದರೆ, ಇದೇ ಮೊದಲ ಬಾರಿದೆ 121 ಮಂದಿ ಒಂದೇ ದಿನ ಸಾವನ್ನಪ್ಪಿದ್ದಾರೆ. ಈ ಎಲ್ಲಾ ಸಾವುಗಳು ಹುಬೆ ಪ್ರಾಂತ್ಯದಲ್ಲೇ ವರದಿಯಾಗಿದೆ.
ಈ ನಡುವೆ ಸಾಕಷ್ಟು ಕ್ರಮಗಳ ನಡವೆಯೂ ಕೊರೋನಾ ಹತ್ತಿಕ್ಕಲು ಚೀನಾ ವಿಫಲವಾಗಿರುವಾಗಲೇ, ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷ ಹುಬೆ ಪ್ರಾಂತ್ಯದ ತನ್ನ ಮುಖ್ಯಸ್ಥ ಜಿಯಾಂಗ್ ಚಾವೋಲಿಯಾಂಗ್ ಅವರನ್ನು ಕಿತ್ತೊಗೆಯಲಾಗಿದೆ.
ಕೊರೋನಾ ವೈರಸ್ ವೊದು ಜಾತಿಯ ವೈರಸ್ ಆಗಿದೆ. ಸೂಕ್ಷ್ಮ ದರ್ಶಕದಲ್ಲಿ ಇದು ಕಿರೀಟ ರೀತಿ ಕಾಣಿಸುತ್ತದೆ. ಲ್ಯಾಟಿನ್ ಭಾಷೆಯಲ್ಲಿ ಕೊರೋನಾ ಎಂದರೆ ಕಿರೀಟ ಎಂದರ್ಥ. ಹೀಗಾಗಿ ವೈರಸ್’ಗೆ ಕೊರೋನಾ ಹೆಸರು. ಚೀನಾದ ವುಹಾನ್ ನಗರದಲ್ಲಿನ ಅಕ್ರಮ ವನ್ಯ ಜೀವಿ ಮಾಂಸ ಕೇಂದ್ರದ ಮೂಲಕ ಮಾನವರಿಗೆ ವೈರಸ್ ತಗುಲಿದೆ. ವೈರಸ್ ಒಂಟೆ, ಬೆಕ್ಕು, ಬಾವಲಿ ಸೇರಿದಂತೆ ಹಲವಾರು ಪ್ರಾಣಿಗಳಲ್ಲೂ ಪ್ರವೇಶಿಸುತ್ತಿದೆ. ಪ್ರಾಣಿಗಳ ದೇಹ ಸೇರಿದ ಈ ವೈರಸ್ ಅಪರೂಪ ಎಂಬಂತೆ ಮನುಷ್ಯರ ದೇಹವನ್ನೂ ಸೇರುತ್ತಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…