ಮಹಾಮಾರಿ ಕೊರೋನಾ ವೈರಸ್ , ಚೀನಾದಲ್ಲಿ ಸಾವಿನ ಸಂಖ್ಯೆ 1,400ಕ್ಕೆ ಏರಿಕೆ -Vishwanews24

ಬೀಜಿಂಗ್: ಈಗಾಗಲೇ ಸಹಸ್ರಾರು ಮಂದಿಯನ್ನು ಬಲಿ ಪಡೆದುಕೊಂಡಿರುವ ಮಹಾಮಾರಿ ಕೊರೋನಾ ವೈರಸ್ ಚೀನಾದಲ್ಲಿ ಮತ್ತಷ್ಟು ವ್ಯಾಪಕವಾಗಿ ಹಬ್ಬುತ್ತಿದ್ದು, ಒಂದೇ ದಿನ ಬರೋಬ್ಬರಿ 121 ಮಂದಿ ಇಹಲೋಕ ತ್ಯಜಿಸಿದ್ದಾರೆ.ಇದರಿಂದ ಮೃತಪಟ್ಟವರ ಸಂಖ್ಯೆ 1400ಕ್ಕೆ ಏರಿಕೆಯಾಗಿದೆ.

ಒಂದೇ ದಿನ 5,090 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 63,851ಕ್ಕೆ ಏರಿಕೆಯಾಗಿದೆ. ಸಾಮಾನ್ಯವಾಗಿ ಪ್ರತಿನಿತ್ಯ ಸರಾಸರಿ 80 ಜನರಂತೆ ಕೊರೋನಾ ಪೀಡಿತರು ಚೀನಾದಲ್ಲಿ ಮರಣ ಹೊಂದುತ್ತಿದ್ದರು. ಆದರೆ, ಇದೇ ಮೊದಲ ಬಾರಿದೆ 121 ಮಂದಿ ಒಂದೇ ದಿನ ಸಾವನ್ನಪ್ಪಿದ್ದಾರೆ. ಈ ಎಲ್ಲಾ ಸಾವುಗಳು ಹುಬೆ ಪ್ರಾಂತ್ಯದಲ್ಲೇ ವರದಿಯಾಗಿದೆ.

ಈ ನಡುವೆ ಸಾಕಷ್ಟು ಕ್ರಮಗಳ ನಡವೆಯೂ ಕೊರೋನಾ ಹತ್ತಿಕ್ಕಲು ಚೀನಾ ವಿಫಲವಾಗಿರುವಾಗಲೇ, ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷ ಹುಬೆ ಪ್ರಾಂತ್ಯದ ತನ್ನ ಮುಖ್ಯಸ್ಥ ಜಿಯಾಂಗ್ ಚಾವೋಲಿಯಾಂಗ್ ಅವರನ್ನು ಕಿತ್ತೊಗೆಯಲಾಗಿದೆ.

ಕೊರೋನಾ ವೈರಸ್ ವೊದು ಜಾತಿಯ ವೈರಸ್ ಆಗಿದೆ. ಸೂಕ್ಷ್ಮ ದರ್ಶಕದಲ್ಲಿ ಇದು ಕಿರೀಟ ರೀತಿ ಕಾಣಿಸುತ್ತದೆ. ಲ್ಯಾಟಿನ್ ಭಾಷೆಯಲ್ಲಿ ಕೊರೋನಾ ಎಂದರೆ ಕಿರೀಟ ಎಂದರ್ಥ. ಹೀಗಾಗಿ ವೈರಸ್’ಗೆ ಕೊರೋನಾ ಹೆಸರು. ಚೀನಾದ ವುಹಾನ್ ನಗರದಲ್ಲಿನ ಅಕ್ರಮ ವನ್ಯ ಜೀವಿ ಮಾಂಸ ಕೇಂದ್ರದ ಮೂಲಕ ಮಾನವರಿಗೆ ವೈರಸ್ ತಗುಲಿದೆ. ವೈರಸ್ ಒಂಟೆ, ಬೆಕ್ಕು, ಬಾವಲಿ ಸೇರಿದಂತೆ ಹಲವಾರು ಪ್ರಾಣಿಗಳಲ್ಲೂ ಪ್ರವೇಶಿಸುತ್ತಿದೆ. ಪ್ರಾಣಿಗಳ ದೇಹ ಸೇರಿದ ಈ ವೈರಸ್ ಅಪರೂಪ ಎಂಬಂತೆ ಮನುಷ್ಯರ ದೇಹವನ್ನೂ ಸೇರುತ್ತಿದೆ.

 

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

20 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

20 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

20 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

21 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

21 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

21 hours ago