ಚಿಕ್ಕಬಳ್ಳಾಪುರ: ಶಂಕಿತ ಡೆಂಗ್ಯೂಗೆ 18 ವರ್ಷದ ಯುವತಿ ಬಲಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ಗ್ರಾಮದಲ್ಲಿ ನಡೆದಿದೆ.
ಯಶಸ್ವಿನಿ (18) ಮೃತ ಯುವತಿ. ಕಳೆದ ಒಂದು ವಾರದಿಂದ ತೀವ್ರತರನಾದ ಜ್ವರದಿಂದ ಬಳಲುತ್ತಿದ್ದ ಯಶಸ್ವಿನಿಯನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಯಶಸ್ವಿನಿ ಮೃತಪಟ್ಟಿದ್ದಾಳೆ. ದ್ವಿತೀಯ ಪಿಯುಸಿಯಲ್ಲಿ 95% ಅಂಕ ಗಳಿಸಿದ್ದ ಯಶಸ್ವಿನಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು.
ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ 400ಕ್ಕೂ ಹೆಚ್ಚು ಡೆಂಗ್ಯೂ ಕೇಸ್ ಪತ್ತೆಯಾಗಿದೆ. ಶುಕ್ರವಾರ ರಾಜ್ಯದಲ್ಲಿ 437 ಡೆಂಗ್ಯೂ ಕೇಸ್ ದಾಖಲಾಗಿತ್ತು. ರಾಜ್ಯದಲ್ಲಿ ಒಟ್ಟು ಡೆಂಗ್ಯೂ ಕೇಸ್ 8,658ಕ್ಕೆ ಏರಿಕೆಯಾಗಿದೆ. ಶುಕ್ರವಾರದವರೆಗೆ ಡೆಂಗ್ಯೂಗೆ ಏಳು ಜನರು ಬಲಿಯಾಗಿದ್ದು, ಇದು ಎಂಟನೇ ಬಲಿಯಾಗಿದೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…