ನವದೆಹಲಿ : 2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸರ್ಕಾರವನ್ನು ಸೋಲಿಸಲು ಮೈತ್ರಿಗೆ ಕರೆ ನೀಡಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಪ್ರತಿ ಪಕ್ಷಗಳ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಇಲ್ಲವೇ ಬಿಎಸ್ಪಿ ವರಿಷ್ಠೆ ಮಾಯಾವತಿ ಅವರ ಪರ ಬ್ಯಾಟ್ ಬೀಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ದೇವೇಗೌಡರು, ಮಮತಾ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸಿದರೆ ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತೇನೆ. ಇಂದಿರಾ ಗಾಂಧಿ ಅವರು ದಶಕಕ್ಕೂ ಹೆಚ್ಚು ಕಾಲ ದೇಶವನ್ನು ಮುನ್ನಡೆಸಲಿಲ್ಲವೇ? ನಾವು ಪುರಷರಷ್ಟೇ ಪ್ರಧಾನಿಯಾಗಬೇಕೆಂದು ಬಯಸುವುದೇಕೆ? ಮಮತಾ, ಮಯಾವತಿ ಅವರು ಪ್ರಧಾನಿ ಅಭ್ಯರ್ಥಿಯಾಕಾಗಬಾರದು ಎಂದು ಪ್ರಶ್ನಿಸಿದ್ದಾರೆ.
ಕೇಂದ್ರದ ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟ ಅಗತ್ಯವಿದೆ ಎಂದಿರುವ ದೇವೇಗೌಡರು, ತೃತೀಯ ರಂಗ ರಚನೆ ಈಗಾಗಲೇ ಏನನ್ನೂ ಹೇಳಲಾಗದು ಎಂದಿದ್ದಾರೆ. ಇದೇ ವೇಳೆ ಕರ್ನಾಟಕದಲ್ಲಿ ಜೆಡಿಎಸ್-ಕಾಂಗ್ರೆಸ್ ಜಂಟಿಯಾಗಿ ಸಾರ್ವತ್ರಿಕ ಚುನಾವಣೆ ಎದುರಿಸಲಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಜೆಡಿಎಸ್ ಕೂಡ ಬಿಜೆಪಿ ವಿರುದ್ಧ ಹೋರಾಟಕ್ಕೆ ಇತರೆ ಪಕ್ಷಗಳೊಂದಿಗೆ ಕೈ ಜೋಡಿಸಲು ಸಿದ್ಧವಿದೆ. ದೇಶದಲ್ಲಿ ಸದ್ಯ ಭಯದ ವಾತಾವರಣ ನಿರ್ಮಾಣವಾಗಿದೆ. ಉತ್ತರಪ್ರದೇಶ, ಗುಜರಾತ್, ಬಿಹಾರದಂಥ ರಾಜ್ಯಗಳಲ್ಲಿ ಅಲ್ಪಸಂಖ್ಯಾತರಿಗೆ ಉಸಿರುಗಟ್ಟಿಸುವ ವಾತಾವರಣವಿದೆ. ಹೀಗಾಗಿ ಬಿಜೆಪಿಯನ್ನ ಎದುರಿಸಲು ಮಹಾಮೈತ್ರಿ ಅತ್ಯವಶ್ಯಕ ಅಂತ ಅವ್ರು ಹೇಳಿದ್ದಾರೆ
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…