ಮೈಸೂರು: ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಹುಣಸೂರು ಕಾಂಗ್ರೆಸ್ ಶಾಸಕ ಎಚ್. ಪಿ. ಮಂಜುನಾಥ್ ಹರಿಹಾಯ್ದಿದ್ದಾರೆ.
ಮೈಸೂರಿಗೆ ಇಬ್ಬರು ಮಹಾರಾಣಿ ಇದ್ದಾರೆ. ಮೂರನೇ ಮಹಾರಾಣಿಯ ಅವಶ್ಯಕತೆ ಇಲ್ಲ ಎಂದು ಲೇವಡಿ ಮಾಡಿದ ಮಂಜುನಾಥ್, ಮಹಾರಾಣಿಯಾಗಿ ಮೆರೆಯಬೇಡಿ, ಅಧಿಕಾರಿಯಾಗಿ ವರ್ತಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಆಗ್ರಹಿಸಿದರು. ನಾನು ಬರೆದ ಒಂದು ಪತ್ರಕ್ಕೂ ಡಿಸಿ ಉತ್ತರ ನೀಡುತ್ತಿಲ್ಲ ಎಂದು ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು.
ಹುಣಸೂರು ತಾಲೂಕಿನಲ್ಲಿ ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಮಂಜುನಾಥ್, ಈ ಬಗ್ಗೆ ಗಮನ ಸೆಳೆದರೂ ಡಿಸಿ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶಗೊಂಡರು.
ನಾಡ ಹಬ್ಬದ ಗಜ ಪಯಣ ಸಂದರ್ಭದಲ್ಲಿ ಹುಣಸೂರು ಕ್ಷೇತ್ರದ ಶಾಸಕನಾದ ನನಗೆ ಆಹ್ವಾನ ನೀಡಲಿಲ್ಲ ಎಂದು ತಗಾದೆ ತೆಗೆದ ಎಚ್. ಪಿ. ಮಂಜುನಾಥ್, ಗಜಪಯಣಕ್ಕೆ ನನ್ನನ್ನು ಏಕೆ ಆಹ್ವಾನಿಸಲಿಲ್ಲ ಎಂದು ಪ್ರಶ್ನಿಸಿದರು. ನೀವೇ ಗಂಧದ ಕಡ್ಡಿ ಬೆಳಗಿದಿರಿ, ಆ ಕೆಲಸ ನಾವು ಮಾಡುತ್ತಿರಲಿಲ್ಲವೇ ಎಂದು ಸವಾಲೆಸೆದರು. ನಿಮಗೆ ಅಷ್ಟೊಂದು ಪ್ರಚಾರದ ಆಸಕ್ತಿ ಇದ್ದರೆ ಜಿಲ್ಲಾಧಿಕಾರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಚುನಾವಣೆಗೆ ಸ್ಪರ್ಧಿಸಿ ಎಂದು ಎಚ್. ಪಿ. ಮಂಜುನಾಥ್ ತರಾಟೆಗೆ ತೆಗೆದುಕೊಂಡರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…