ಮಹಾರಾಣಿಯಾಗಿ ಮೆರೆಯಬೇಡಿ, ಅಧಿಕಾರಿಯಾಗಿ ವರ್ತಿಸಿ’ :ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಹುಣಸೂರು ಶಾಸಕ ಮಂಜುನಾಥ್‌ -Vishwanews24

ಮಹಾರಾಣಿಯಾಗಿ ಮೆರೆಯಬೇಡಿ, ಅಧಿಕಾರಿಯಾಗಿ ವರ್ತಿಸಿ’ :ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಹುಣಸೂರು ಶಾಸಕ ಮಂಜುನಾಥ್‌ -Vishwanews24

ಮೈಸೂರು: ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಹುಣಸೂರು ಕಾಂಗ್ರೆಸ್ ಶಾಸಕ ಎಚ್‌. ಪಿ. ಮಂಜುನಾಥ್ ಹರಿಹಾಯ್ದಿದ್ದಾರೆ.

ಮೈಸೂರಿಗೆ ಇಬ್ಬರು ಮಹಾರಾಣಿ‌ ಇದ್ದಾರೆ. ಮೂರನೇ ಮಹಾರಾಣಿಯ ಅವಶ್ಯಕತೆ ಇಲ್ಲ ಎಂದು ಲೇವಡಿ ಮಾಡಿದ ಮಂಜುನಾಥ್, ಮಹಾರಾಣಿಯಾಗಿ ಮೆರೆಯಬೇಡಿ, ಅಧಿಕಾರಿಯಾಗಿ ವರ್ತಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಆಗ್ರಹಿಸಿದರು. ನಾನು ಬರೆದ ಒಂದು ಪತ್ರಕ್ಕೂ ಡಿಸಿ ಉತ್ತರ ನೀಡುತ್ತಿಲ್ಲ ಎಂದು ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು.

ಹುಣಸೂರು ತಾಲೂಕಿನಲ್ಲಿ ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಮಂಜುನಾಥ್, ಈ ಬಗ್ಗೆ ಗಮನ ಸೆಳೆದರೂ ಡಿಸಿ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶಗೊಂಡರು.

ನಾಡ ಹಬ್ಬದ ಗಜ ಪಯಣ ಸಂದರ್ಭದಲ್ಲಿ ಹುಣಸೂರು ಕ್ಷೇತ್ರದ ಶಾಸಕನಾದ ನನಗೆ ಆಹ್ವಾನ ನೀಡಲಿಲ್ಲ ಎಂದು ತಗಾದೆ ತೆಗೆದ ಎಚ್. ಪಿ. ಮಂಜುನಾಥ್, ಗಜಪಯಣಕ್ಕೆ ನನ್ನನ್ನು ಏಕೆ ಆಹ್ವಾನಿಸಲಿಲ್ಲ‌ ಎಂದು ಪ್ರಶ್ನಿಸಿದರು. ನೀವೇ ಗಂಧದ ಕಡ್ಡಿ ಬೆಳಗಿದಿರಿ, ಆ ಕೆಲಸ ನಾವು ಮಾಡುತ್ತಿರಲಿಲ್ಲವೇ ಎಂದು ಸವಾಲೆಸೆದರು. ನಿಮಗೆ ಅಷ್ಟೊಂದು ಪ್ರಚಾರದ ಆಸಕ್ತಿ ಇದ್ದರೆ ಜಿಲ್ಲಾಧಿಕಾರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಚುನಾವಣೆಗೆ ಸ್ಪರ್ಧಿಸಿ ಎಂದು ಎಚ್. ಪಿ. ಮಂಜುನಾಥ್ ತರಾಟೆಗೆ ತೆಗೆದುಕೊಂಡರು.

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

23 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago