ಪುಣೆ, :ಮಹಾರಾಷ್ಟ್ರದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು ರತ್ನಗಿರಿ ಜಿಲ್ಲೆಯಲ್ಲಿರುವ ತಿವಾರೆ ಅಣೆಕಟ್ಟು ಒಡೆದ ಪರಿಣಾಮ 12 ಮನೆಗಳು ಕೊಚ್ಚಿಹೋಗಿದ್ದು 6 ಜನರು ಮೃತಪಟ್ಟಿದ್ದಾರೆ.
ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ತಿವಾರೆ ಅಣೆಕಟ್ಟು ಒಡೆದಿದೆ. ಇದರ ಸಮೀಪದಲ್ಲಿದ್ದ 12 ಮನೆಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿವೆ. ಘಟನೆಯಲ್ಲಿ 6 ಜನರು ಮೃತಪಟ್ಟಿದ್ದು 20ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಜಲಾಶಯದ ಸನಿಹದಲ್ಲೇ ಇದ್ದ ಸುಮಾರು 12 ಮನೆಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಪೊಲೀಸ್ ಹಾಗೂ ಸ್ವಯಂ ಸೇವಕರು ಸ್ಥಳದಲ್ಲಿದ್ದು, ನಾಪತ್ತೆಯಾದವರ ಶೋಧ ಕಾರ್ಯ ಹಾಗೂ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಮುಂಬೈಯಿಂದ 300 ಕಿಲೋ ಮೀಟರ್ ದೂರದಲ್ಲಿರುವ ರತ್ನಗಿರಿ ಜಿಲ್ಲೆಯಲ್ಲಿ ಚಿಪ್ಲನ್ ಹತ್ತಿರ ತಿವಾರೆ ಎಂಬಲ್ಲಿ ಸಣ್ಣ ಅಣೆಕಟ್ಟು ಧಾರಾಕಾರ ಮಳೆಗೆ ಒಡೆದು ನೀರು ಹೊರಬಂದು ಜಲಾವೃತವಾಗಿ ಕಣ್ಮರೆಯಾದವರ ಸಂಖ್ಯೆ ಇನ್ನೂ ಹೆಚ್ಚಾಗಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ.
ಕಳೆದ ಕೆಲವು ದಿನಗಳಿಂದಲೂ ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಪ್ರವಾಹ ನೀರು ಮನೆಗೆ ನುಗ್ಗಿ ಜನರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಮಂಗಳವಾರ ಸಾರ್ವತ್ರಿಕ ರಜೆ ದಿನವನ್ನಾಗಿ ಘೋಷಿಸಲಾಗಿತ್ತು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…