ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಮತ್ತೆ ಹೆಚ್ಚಾದರೆ ಖಂಡಿತಾ ಲಾಕ್ ಡೌನ್ ಜಾರಿ ಮಾಡಲಾಗುತ್ತದೆ ಎಂದು ಸಿಎಂ ಉದ್ಧವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಮತ್ತೆ ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ಉಲ್ಪಣವಾಗುತ್ತಿದ್ದು, ಇದು ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಮುಂದಿನ 8 ರಿಂದ 15 ದಿನಗಳ ಕಾಲ ಹೊಸ ಸೋಂಕು ಪ್ರಕರಣಗಳು ಹೀಗೆಯೇ ಮುಂದುವರಿದರೆ ಲಾಕ್ಡೌನ್ ಘೋಷಣೆ ಮಾಡುವ ನಿರ್ಧಾರ ತೆಗೆದುಕೊಳ್ಳುವುದು ಅನಿವಾರ್ಯ ಆಗಲಿದೆ ಎಂದು ಉದ್ಧವ್ ಅಭಿಪ್ರಾಯಪಟ್ಟಿದ್ದಾರೆ.
ಲಾಕ್ ಡೌನ್ ಹೇರುವ ಕುರಿತು ನಡೆದ ಸಭೆಯಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಉದ್ಧವ್ ಠಾಕ್ರೆ, ‘ಮಹಾರಾಷ್ಟ್ರದ ಕೊವಿಡ್ ಪರಿಸ್ಥಿತಿ ಗಂಭೀರವಾಗಿದೆ. ದೈನಂದಿನ ಅಂಕಿ ಅಂಶಗಳ ಪ್ರಸ್ತುತ ಏರಿಕೆ ಆತಂಕ ಮೂಡಿಸಿದೆ. ಇದು ಸೋಂಕಿನ ಹೊಸ ಅಲೆಯೇ ಎಂದು ಕಂಡುಹಿಡಿಯಲು ಒಂದೆರಡು ವಾರಗಳು ಬೇಕು. ಮತ್ತೊಂದು ಲಾಕ್ಡೌನ್ ತಪ್ಪಿಸಲು ಜನರು ಕೊರೊನಾ ವೈರಸ್ ನಿಯಂತ್ರಣ ಶಿಷ್ಟಾಚಾರಗಳನ್ನು ಅನುಸರಿಸಬೇಕೆಂದು ಅವರು ಎಚ್ಚರಿಸಿದರು.
ಇದೇ ವಿಚಾರವಾಗಿ ಮಾತನಾಡಿದ್ದ ಮುಂಬೈ ಮೇಯರ್ ಕಿಶೋರಿ ಪಡ್ನೇಕರ್, ಕೊರೊನಾ ಸೋಂಕು ನಿಯಂತ್ರಣಕ್ಕೆ ಸಾಕಷ್ಟು ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಸೂಚಿಸಲಾಗಿದೆ. ಕೊವಿಡ್ ನಿಯಮದನ್ವಯ, ಮಾಸ್ಕ್ ಹಾಕುವುದು ಕಡ್ಡಾಯವಾದರೆ, ಗುಂಪು ಸೇರುವುದರ ಮೇಲೆ ನಿಷೇಧ ಹೇರಲಾಗಿದೆ. ಆದಾಗ್ಯೂ, ಜನರು ನಿಯಮವನ್ನು ಪಾಲನೆ ಮಾಡುತ್ತಿಲ್ಲ. ಹೀಗಾಗಿ, ಕಟ್ಟುನಿಟ್ಟಾಗಿ ಕೊರೊನಾ ನಿಯಮ ಪಾಲನೆ ಸೂಚಿಸಲಾಗಿದೆ. ನೀವು ಕೊವಿಡ್ ನಿಯಮ ಪಾಲನೆ ಮಾಡದೆ ಕೊರೊನಾ ಕೇಸ್ಗಳ ಸಂಖ್ಯೆ ಹೆಚ್ಚುತ್ತಾ ಹೋದರೆ ಲಾಕ್ಡೌನ್ ಘೋಷಣೆ ಮಾಡಬೇಕಾಗುತ್ತದೆ. ಇದನ್ನು ತಪ್ಪಿಸಬೇಕಾದರೆ ನೀವು ನಿಯಮ ಪಾಲನೆ ಮಾಡಿ ಎಂದು ಹೇಳಿದ್ದರು
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…