Featured

ಮಹಾರಾಷ್ಟ್ರದಲ್ಲಿ ಬಿಜೆಪಿಯ ಹೀನ ರಾಜಕಾರಣ  ; ಅಪರೇಶನ್ ಕಮಲದ ಮೂಲಕ ಅಧಿಕಾರಕ್ಕೆ ಬರುವ ಯತ್ನ : ದಿನೇಶ್ ಗುಂಡೂರಾವ್ – Vishwanews24

ಮಹಾರಾಷ್ಟ್ರದಲ್ಲಿ ಬಿಜೆಪಿಯ ಹೀನ ರಾಜಕಾರಣ  ; ಅಪರೇಶನ್ ಕಮಲದ ಮೂಲಕ ಅಧಿಕಾರಕ್ಕೆ ಬರುವ ಯತ್ನ : ದಿನೇಶ್ ಗುಂಡೂರಾವ್

ಬೆಂಗಳೂರು: ಆಪರೇಷನ್ ಕಮಲ ಬಿಜೆಪಿಯವರ ಅನಿಷ್ಟ ಕೂಸು, ಮಹಾರಾಷ್ಟ್ರದಲ್ಲಿ ಬಿಜೆಪಿ ಹೀನ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ದಿನೇಶ್ ಗುಂಡೂರಾವ್ ಆಕ್ರೋಶ ಹೊರಹಾಕಿದ್ದಾರೆ.

ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಮಹಾರಾಷ್ಟ್ರದಲ್ಲಿ ಮತ್ತೆ ಕೊಳಕು ರಾಜಕೀಯ ಶುರು ಮಾಡಿರುವ ಬಿಜೆಪಿ ಆಪರೇಶನ್ ಕಮಲದ ಮೂಲಕ ಅಧಿಕಾರಕ್ಕೆ ಬರುವ ಯತ್ನ ಮಾಡುತ್ತಿದೆ. ಆಪರೇಷನ್ ಕಮಲ ಬಿಜೆಪಿಯವರ ಅನಿಷ್ಟ ಕೂಸು. ಮಧ್ಯಪ್ರದೇಶ, ಕರ್ನಾಟಕದಲ್ಲಿ ಈಗಾಗಲೇ ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದಿರುವ ಬಿಜೆಪಿ ಈಗ ಮಹಾರಾಷ್ಟ್ರದಲ್ಲೂ ಹೀನ ರಾಜಕಾರಣ ಮಾಡುತ್ತಿದೆ. ಬಿಜೆಪಿಯ ವರ್ತನೆ ಸಂವಿಧಾನ ಬಾಹಿರ ಎಂದು ಕಿಡಿಕಾರಿದ್ದಾರೆ.

ನಾ ಖಾವೂಂಗಾ, ನಾ ಖಾನೇ ದೂಂಗಾ ಎಂದು ಬೊಗಳೆ ಭಾಷಣ ಬಿಗಿಯುವ ಮೋದಿಯವರು, ಆಪರೇಷನ್ ಕಮಲಕ್ಕೆ ಸುರಿಯುವ ಸಾವಿರಾರು ಕೋಟಿ ಹಣ ಯಾರು ತಿಂದು ವಿಸರ್ಜಿಸಿದ್ದು ಎಂದು ಹೇಳುತ್ತಾರೆಯೇ? ಮೋದಿಯವರು ಪ್ರಾಮಾಣಿಕರಾಗಿದ್ದರೆ ಮಹಾರಾಷ್ಟ್ರದಲ್ಲಿ ಈಗ ನಡೆಯುತ್ತಿರುವ ಆಪರೇಷನ್ ಕಮಲದಲ್ಲಿ ಕೈ ಬದಲಾಗುವ ಹಣದ ಮೂಲದ ಬಗ್ಗೆ ಇಡಿ ತನಿಖೆಗೆ ಆದೇಶಿಸಲು ಸಾಧ್ಯವೆ ಎಂದು ಪ್ರಶ್ನಿಸಿದ್ದಾರೆ.

ಅಧಿಕಾರಕ್ಕಾಗಿ ಬಿಜೆಪಿ ಎಷ್ಟು ಕೀಳು ಮಟ್ಟಕ್ಕಾದರೂ ಇಳಿಯುತ್ತದೆ ಎಂಬುದಕ್ಕೆ ಮಹಾರಾಷ್ಟ್ರದ ಇಂದಿನ ರಾಜಕೀಯ ಸನ್ನಿವೇಶ ಮಗದೊಂದು ಉದಾಹರಣೆ. ಸಂವಿಧಾನಕ್ಕೆ ಸದಾ ಅಪಚಾರ ಎಸಗುತ್ತಾ, ಪ್ರಜಾಪ್ರಭುತ್ವ ಮೌಲ್ಯಗಳನ್ನು ಕತ್ತು ಹಿಸುಕುತ್ತಾ ಬಂದಿರುವ ಬಿಜೆಪಿ ಈಗ ಮಹಾರಾಷ್ಟ್ರದಲ್ಲೂ ಅನೈತಿಕ ರಾಜಕಾರಣದ ಮೂಲಕ ಅಧಿಕಾರಕ್ಕೆ ಬರಲು ಹವಣಿಸುತ್ತಿದೆ ಎಂದು ಹರಿಹಾಯ್ದಿದ್ದಾರೆ.

ಸಂವಿಧಾನಬದ್ಧವಾಗಿ ಅಸ್ತಿತ್ವದಲ್ಲಿರುವ ಸರ್ಕಾರವನ್ನು ಅಸಂವಿಧಾನಿಕವಾಗಿ ಉರುಳಿಸುವ ಕೆಟ್ಟ ಸಂಪ್ರದಾಯ ಶುರುವಾಗಿದ್ದೇ ಕರ್ನಾಟಕದಲ್ಲಿ. ಆಪರೇಷನ್ ಕಮಲದ ಜನಕ ಯಡಿಯೂರಪ್ಪನವರು. ಬಿಎಸ್‍ವೈ ಸೃಷ್ಟಿಸಿದ ಪಿಡುಗನ್ನು ಇಂದು ದೇಶಾದ್ಯಂತ ಬಿಜೆಪಿಯವರು ಹಬ್ಬಿಸಿ ರಾಜಕೀಯ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದಾರೆ. ಇಂತಹ ಪಿಡುಗಿಗೆ ಜನರೇ ಕಡಿವಾಣ ಹಾಕಬೇಕು ಎಂದು ಕೆಂಡಕಾರಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

21 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

22 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

22 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

22 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

22 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago