ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರಿಗೆ ೧೪ ದಿನ ಗೃಹಬಂಧನ ಮತ್ತು ಅವರ ಮನೆ ಸೀಲ್-ಡೌನ್: ಆರೋಗ್ಯ ಸಚಿವ ಬಿ.ಶ್ರೀರಾಮುಲು | vishwanews24

Ududpi: ಮಹಾರಾಷ್ಟ್ರದಿಂದ ಮರಳಿದವರನ್ನು ಇನ್ನು ಮುಂದೆ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಗಾಗಬೇಕಿಲ್ಲ. 14 ದಿನಗಳ ಕಾಲವೂ ಹೋಂ ಕ್ವಾರಂಟೈನ್‌ಗೆ ಒಳಗಾಗಬೇಕು. ಈ ಸಂದರ್ಭದಲ್ಲಿ ಮನೆಯನ್ನೇ ಸೀಲ್‌ಡೌನ್‌ ಮಾಡಲಾಗುವುದು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

ಈ ಬಗ್ಗೆ ಜೂನ್ 9 ರ ಮಂಗಳವಾರ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಮಹಾರಾಷ್ಟ್ರದಿಂದ ಬಂದು ಹೋಂ ಕ್ವಾರಂಟೈನ್‌ಗೆ ಒಳಗಾಗುವ ವ್ಯಕ್ತಿಯ ಮನೆಯನ್ನು ಸಂಪೂರ್ಣವಾಗಿ ಸೀಲ್‌ಡೌನ್‌ ಮಾಡಲಾಗುವುದು. ವ್ಯಕ್ತಿಯು 14 ದಿನಗಳ ಕಾಲ ಮನೆಯಲ್ಲೇ ಇರಬೇಕು. ಮನೆಯಿಂದ ಹೊರಬಂದಲ್ಲಿ ಮೊಕದ್ದಮೆ ದಾಖಲಿಸಿಲಾಗುವುದು. ಈ ನಿರ್ಧಾರ ರಾಜ್ಯ ಮಟ್ಟದಲ್ಲಿ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಮಹಾರಾಷ್ಟ್ರದಿಂದ ಮರಳಿದ ವ್ಯಕ್ತಿಯ ಮನೆಯು ಅಪಾರ್ಟ್‌ಮೆಂಟ್‌ನಲ್ಲಿ ಇದ್ದಲ್ಲಿ ಸಂಪೂರ್ಣ ಅಪಾರ್ಟ್‌ಮೆಂಟ್‌ನ್ನು ಸೀಲ್‌ಡೌನ್‌ ಮಾಡಲಾಗುವುದಿಲ್ಲ. ಬದಲಾಗಿ ವ್ಯಕ್ತಿ ವಾಸಿಸುವ ನಿವಾಸವನ್ನು ಮಾತ್ರ ಸೀಲ್‌ಡೌನ್‌ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಆಯಾ ಜಿಲ್ಲೆಯ ಮೇಲೆ ಸಂಪೂರ್ಣ ಅಧಿಕಾರವನ್ನು ಜಿಲ್ಲಾಧಿಕಾರಿಗೆ ನೀಡಲಾಗಿದೆ ಎಂದೂ ಕೂಡಾ ಈ ಸಂದರ್ಭದಲ್ಲಿ ಹೇಳಿದರು.

ನಾವು ಪೊಲೀಸ್ ಸಿಬ್ಬಂದಿ ಮತ್ತು ಗೃಹರಕ್ಷಕರನ್ನು ನೇಮಿಸುತ್ತೇವೆ. ಹಾಗೆಯೇ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರ ಮೂಲಕವು ಕ್ವಾರಂಟೈನ್‌ಗೆ ಒಳಗಾದವರ ಮೇಲೆ ಗಮನವಿರಿಸಲಾಗುವುದು. ಸ್ಥಳೀಯರು ಕ್ವಾರಂಟೈನ್‌ಗೆ ಒಳಗಾದವರನ್ನು ಮನೆಯಿಂದ ಹೊರ ಹೋದದ್ದನ್ನು ಗಮನಿಸಿದ್ದಲ್ಲಿ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಇನ್ನು ಕ್ವಾರಂಟೈನ್‌ಗೆ ಒಳಗಾಗಿರುವ ವ್ಯಕ್ತಿಯ ಕುಟುಂಬವು ತೀರಾ ಬಡವರಾಗಿದ್ದಲ್ಲಿ ನಾವು ದೇವಾಲಯದ ಮೂಲಕ ಕಿಟ್ ನೀಡುತ್ತೇವೆ. ಅವರಿಗೆ ಕೊರೊನಾ ಲಕ್ಷಣಗಳು ಕಂಡು ಬಂದಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago