ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಆಯ್ಕೆಯಾಗಿದ್ದು, ಇಂದು (ಗುರುವಾರ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಏಕನಾಥ್ ಶಿಂಧೆ, ಅಜಿತ್ ಪವಾರ್‌ಗೆ ಡಿಸಿಎಂ ಹುದ್ದೆಯೇ ಗಟ್ಟಿಯಾಗಿದೆ. ಸರ್ಕಾರ ರಚನೆಯ ಮೈತ್ರಿ ಸೂತ್ರ ಇಂದು ರಿವೀಲ್ ಆಗಲಿದೆ.
ಈಗ ಮುಂಗಾರು ಕಮ್ಮಿ ಆಗಿದೆ ಅಂತಾ ಕರಾವಳಿಯಲ್ಲಿ ನಿಮ್ಮ ಮನೆ ಕಟ್ಟಲು ಧೈರ್ಯ ಮಾಡಬೇಡಿ. ನಾನು ಸಮುದ್ರ ಇದ್ದಂತೆ, ಮತ್ತೆ ಬಂದೇ ಬರುತ್ತೇನೆ ಎಂದು 2019ರಲ್ಲಿ ದೇವೇಂದ್ರ ಫಡ್ನವೀಸ್ ಅಂದಿನ ಸಿಎಂ ಉದ್ಧವ್ ಠಾಕ್ರೆಗೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಎಚ್ಚರಿಕೆ ನೀಡಿದ್ದರು. ಅದಾಗಿ ಐದು ವರ್ಷಕ್ಕೇ ಅವತ್ತಿನ ವಾರ್ನಿಂಗ್ ನಿಜವಾಗಿದೆ. ಸಿಎಂ ಕುರ್ಚಿಗಾಗಿ ಬಿಜೆಪಿ ಸಂಬಂಧವನ್ನು ಮುರಿದುಕೊಂಡಿದ್ದ ಉದ್ಧವ್ ಠಾಕ್ರೆಗೆ ಈಗ ನೆಲೆಯೇ ಇಲ್ಲದಂತೆ ಫಡ್ನವೀಸ್ ಮಾಡಿದ್ದಾರೆ. ಅಂದು ಶಿವಸೇನೆಯ ನಡೆಯಿಂದ ಸಿಎಂ ಸ್ಥಾನದಿಂದ ವಂಚಿತರಾಗಿದ್ದ ದೇವೇಂದ್ರ ಫಡ್ನವೀಸ್ ಈಗ ಮತ್ತೊಮ್ಮೆ ಮಹಾರಾಷ್ಟ್ರದ ಸಿಎಂ ಆಗುತ್ತಿದ್ದು, ಐದು ವರ್ಷದಲ್ಲಿ ತಮ್ಮ ತಾಕತ್ತು ಏನು ಎಂಬುದನ್ನು ಉದ್ಧವ್ ಠಾಕ್ರೆ ಸೇರಿ ಮಹಾ ವಿಕಾಸ್ ಅಘಾಡಿಗೆ ತೋರಿಸಿದ್ದಾರೆ. ಈ ಮೂಲಕ ಐದು ವರ್ಷದ ಹಿಂದೆ ಸಮುದ್ರದಂತೆ ನಾನು ವಾಪಸ್ ಬರುತ್ತೇನೆ ಎಂದು ಮಾಡಿದ್ದ ಶಪಥವನ್ನು ಈಡೇರಿಸಿದ್ದಾರೆ.
ಮಹಾರಾಷ್ಟ್ರ ಚುನಾವಣೆ ಫಲಿತಾಂಶ ಹೊರಬಿದ್ದು ಬರೋಬ್ಬರಿ 12 ದಿನಗಳು ಕಳೆದ ಬಳಿಕ ಮಹಾಯುತಿ ಸರ್ಕಾರ ರಚನೆಯಾಗುತ್ತಿದೆ. ಬಿಜೆಪಿ, ಶಿವಸೇನೆ ನಡುವೆ ಸಿಎಂ ಕುರ್ಚಿಗಾಗಿ ನಡೆಯುತ್ತಿದ್ದ ಹಾವು ಏಣಿ ಆಟ ಅಂತ್ಯವಾಗಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಆಗಿ ಇಂದು ಬಿಜೆಪಿಯ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಸಿಎಂ ಆಗಿದ್ದ ಶಿವಸೇನೆ ನಾಯಕ ಏಕನಾಥ್ ಶಿಂಧೆ ಹಾಗೂ ಎನ್‌ಸಿಪಿ ನಾಯಕ ಅಜಿತ್ ಪವಾರ್ ಡಿಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…