Featured

ಮಹಾರಾಷ್ಟ್ರ : ಆಕ್ಸಿಜನ್ ಟ್ಯಾಂಕ್ ಸೋರಿಕೆ ; 22 ಕೊವಿಡ್ ರೋಗಿಗಳ ದುರ್ಮರಣ -Vishwanews24

ಮಹಾರಾಷ್ಟ್ರ : ಆಕ್ಸಿಜನ್ ಟ್ಯಾಂಕ್ ಸೋರಿಕೆ ; 22 ಕೊವಿಡ್ ರೋಗಿಗಳ ದುರ್ಮರಣ -Vishwanews24

ಮುಂಬೈ : ಮಹಾರಾಷ್ಟ್ರದ ನಾಸಿಕ್‌ನ ಆಸ್ಪತ್ರೆಯೊಂದರ ಹೊರಗೆ ಮಂಗಳವಾರ ಆಮ್ಲಜನಕದ ಟ್ಯಾಂಕರ್ ಸೋರಿಕೆಯಾದ ಕಾರಣ ಆಕ್ಸಿಜನ್ ಕೊರತೆಯಿಂದಾಗಿ 22 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಆಕ್ಸಿಜನ್‌ ಟ್ಯಾಂಕರ್‌ ಸೋರಿಕೆಯಾದ ಪರಿಣಾಮ ಸುಮಾರು 30 ನಿಮಿಷಗಳ ಕಾಲ ಆಮ್ಲಜನಕದ ಪೂರೈಕೆ ಸ್ಥಗಿತಗೊಂಡಿತ್ತು.

ಕೊರೊನಾ ಸೋಂಕಿತರಿಗಾಗಿ ಮೀಸಲಾಗಿರುವ ನಗರದ ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಇಲ್ಲಿ ಸುಮಾರು 150 ಕೊರೊನಾ ರೋಗಿಗಳನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ಮೃತರೆಲ್ಲರಿಗೂ ವೆಂಟಿಲೇಟರ್‌ ಇರಿಸಲಾಗಿತ್ತು. ಅವರಿಗೆ ನಿರಂತರ ಆಮ್ಲಜನರದ ಪೂರೈಕೆಯೂ ಅತ್ಯಗತ್ಯವಾಗಿತ್ತು.

ಶಿರ್ವ : ಗ್ರಾ.ಪಂ.ಅಧ್ಯಕ್ಷ ಚುನಾವಣೆ : ಅಧ್ಯಕ್ಷ ಗಾದಿ ಕಾಂಗ್ರೆಸ್ ತೆಕ್ಕೆಗೆ -Vishwanews24

ಈ ಬಗ್ಗೆ ಮಾತನಾಡಿದ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೋಪೆ, ಆಮ್ಲಜನಕದ ಪೂರೈಕೆ ಸ್ಥಗಿತವೇ ಸಾವಿಗೆ ಕಾರಣವಾಗಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ನಾಸಿಕ್ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿದ್ದ ರೋಗಿಗಳು ಸಾವನ್ನಪ್ಪಿದ್ದಾರೆ. ಈ ರೋಗಿಗಳಿಗೆ ಆಮ್ಲಜನಕವನ್ನು ಪೂರೈಸುತ್ತಿದ್ದ ಆಮ್ಲಜನಕ ಟ್ಯಾಂಕರ್‌ನಲ್ಲಿ ಸೋರಿಕೆ ಕಂಡುಬಂದಿದೆ. ಈ ಹಿನ್ನೆಲೆ ಆಮ್ಲಜನಕ ಲಭಿಸದೆ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಟ್ಯಾಂಕರ್‌ನಿಂದ ವೇಗವಾಗಿ ಅನಿಲ ಸೋರಿಕೆಯಾಗಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಳಿ ಹೊಗೆ ಆವರಿಸಿರುವುದೆ. ಇನ್ನು ಆಮ್ಲಜನಕದ ಪೂರೈಕೆ ಸ್ಥಗಿತವಾದ್ದರಿಂದ ರೋಗಿಗಳು ಮತ್ತು ಅವರ ಕುಟುಂಬ ಸದಸ್ಯರು ಆತಂಕಕ್ಕೆ ಒಳಗಾಗಿ ಉಸಿರಾಟದ ತೊಂದರೆ ಇರುವ ರೋಗಿಗಳಿಗೆ ಸಹಾಯ ಮಾಡುವ ಯತ್ನ ಮಾಡಿದ್ದಾರೆ ಎಂದು ವರದಿಯಾಗಿದೆ.

ಸ್ಥಳಕ್ಕೆ ಕೂಡಲೇ ಅಗ್ನಿಶಾಮಕದಳ ಸಿಬ್ಬಂದಿಗಳು ಆಗಮಿಸಿದ್ದು ಸೋರಿಕೆ ನಿಯಂತ್ರಿಸಲು ಕಾಯಚರಣೆ ನಡೆಸಲಾಗುತ್ತಿದೆ. ಆಮ್ಲಜನಕ ಅಗತ್ಯವಿರುವ 80 ರೋಗಿಗಳ ಪೈಕಿ 31 ರೋಗಿಗಳನ್ನು ಇತರ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

ಕೇಂದ್ರ ಸರ್ಕಾರದ ಲಸಿಕೆ ತಂತ್ರವು ನೋಟ್‌ ಬ್ಯಾನ್‌ಗಿಂತ ಕಡಿಮೆಯೇನಿಲ್ಲ : ರಾಹುಲ್‌ ಗಾಂಧಿ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

7 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

16 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

16 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

16 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

16 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago