ಮಹಾರಾಷ್ಟ್ರ : ಗೆಲುವಿನ ಉತ್ಸಾಹದಲ್ಲಿ ಬಿಜೆಪಿ ; ಸಂಭ್ರಮಾಚರಣೆಗೆ ಸಿದ್ಧವಾಗಿದೆ ಲಡ್ಡುಗಳು -Vishwanews24

Featured, ರಾಷ್ಟ್ರ ನ್ಯೂಸ್

ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ ಗೆಲುವಿನ ಉತ್ಸಾಹದಲ್ಲಿದೆ. ಪ್ರಸ್ತುತ ಲಭ್ಯವಾಗಿರುವ ಮಾಹಿತಿ ಪ್ರಕಾರ ಬಿಜೆಪಿ ಮ್ರೈತ್ರಿಕೂಟ ಮುನ್ನಡೆ ಸಾಧಿಸಿದೆ. ಬಿಜೆಪಿ 107 ಸ್ಥಾನ ಹಾಗೂ ಶಿವಸೇನೆ 70 ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದೆ.

ಹೀಗಾಗಿ ಮಹಾರಾಷ್ಟ್ರದಲ್ಲಿ ಈಗಾಗಲೇ ಬಿಜೆಪಿ ಕಾರ್ಯಕರ್ತರು ಗೆಲುವಿನ ಉತ್ಸಾಹದಲ್ಲಿದ್ದು, ಫಲಿತಾಂಶ ಘೋಷಣೆಗೆ ಮೊದಲೇ ಸಂಭ್ರಮದಲ್ಲಿ ಕಾರ್ಯಕರ್ತರು ಲಡ್ಡು ವಿತರಣೆಗೆ ತಯಾರಾಗಿ ನಿಂತಿದ್ದಾರೆ. ಮುಂಬೈನ ಹಲವು ಭಾಗಗಳಲ್ಲಿ ಫಲಿತಾಂಶದ ಬಳಿಕ ಹಂಚಲೆಂದು 5000 ಲಾಡು ತಯಾರಿಸಲಾಗುತ್ತಿದೆ.

ಬಹುತೇಕ ಮತಗಟ್ಟೆ ಸಮೀಕ್ಷೆಗಳು ಬಿಜೆಪಿ ಶಿವಸೇನೆ ಮೈತ್ರಿಕೂಟ ಗೆಲುವು ಸಾಧಿಸಲಿದೆ, ಜೊತೆಗೆ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಭವಿಷ್ಯ ನುಡಿದಿದ್ದವು.