ಮುಂಬೈ : ಮಹಾರಾಷ್ಟ್ರ ಸರಕಾರ ಸಂಬಂಧಿಸಿ ನಾಳೆ ಬಹುಮತ ಸಾಬೀತು ಮಾಡಲು ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು ಬಹುಮತ ಸಾಬೀತಿಗೆ ಮುನ್ನವೇ ಡಿಸಿಎಂ ಸ್ಥಾನಕ್ಕೆ ಅಜಿತ್ ಪವಾರ್ ರಾಜೀನಾಮೆ ಸಲ್ಲಿಸಿದ್ದಾರೆ.
ಸಿಎಂ ದೇವೇಂದ್ರ ಫಡ್ನವಿಸ್ ಬಹುಮತ ಸಾಬೀತಿಗೆ ಸಂಬಂಧಪಟ್ಟಂತೆ ಇಂದು ಅಪರಾಹ್ನ 3.30ಕ್ಕೆ ಸುದ್ದಿಗೋಷ್ಠಿ ಕರೆದಿದ್ದು, ಮುಂದಿನ ರಾಜಕೀಯ ಬೆಳವಣಿಗೆಗಳು ತೀವ್ರ ಕುತೂಹಲ ಮೂಡಿಸಿವೆ.
ಅದರ ಬೆನ್ನಲ್ಲೇ ಶಿವಸೇನೆಯ ಮುಖಂಡ ಸಂಜಯ್ ರಾವತ್ “ಅಜಿತ್ ದಾದಾ ನಮ್ಮೊಂದಿಗಿದ್ದು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಉದ್ಧವ್ ಠಾಕ್ರೆ ೫ ವರ್ಷಗಳ ಕಾಲ ಆಡಳಿತ ನಡೆಸಲಿದ್ದಾರೆ” ಎಂದು ಹೇಳಿದ್ದಾರೆ.
ನಿನ್ನೆ ತಡರಾತ್ರಿ ಅಜಿತ್ ಪವಾರ್, ಶರದ್ ಪವಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಅದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಸರ್ಕಾರ ನಾಳೆ (ಬುಧವಾರ ) ಸಂಜೆ 5 ಗಂಟೆಯ ಒಳಗಾಗಿ ಬಹುಮತ ಸಾಬೀತು ಮಾಡಬೇಕಾಗಿ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…