Featured

ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವೀಸ್‌ ನಾಳೆ ಪ್ರಮಾಣ ವಚನ ಸ್ವೀಕಾರ vishwanews24

ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವೀಸ್‌ ನಾಳೆ ಪ್ರಮಾಣ ವಚನ ಸ್ವೀಕಾರ

ಮುಂಬೈ: ಮಹಾರಾಷ್ಟ್ರ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ದೇವೇಂದ್ರ ಫಡ್ನವೀಸ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗುರುವಾರ ಮುಂಬೈನ ಆಜಾದ್ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಇಲ್ಲಿ ನಡೆದ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಉನ್ನತ ಹುದ್ದೆಗೆ ಅಂತಿಮಗೊಳಿಸಲಾಯಿತು.

ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ದೇವೇಂದ್ರ ಫಡ್ನವೀಸ್ ಉಪಸ್ಥಿತರಿದ್ದರು. ಬಿಜೆಪಿ ತನ್ನ ಮಹಾರಾಷ್ಟ್ರ ಶಾಸಕಾಂಗ ಪಕ್ಷದ ಸಭೆಗೆ ನಿರ್ಮಲಾ ಸೀತಾರಾಮನ್ ಮತ್ತು ವಿಜಯ್ ರೂಪಾನಿ ಅವರನ್ನು ಕೇಂದ್ರ ವೀಕ್ಷಕರನ್ನಾಗಿ ನೇಮಿಸಿತ್ತು.

ಶಾಸಕಾಂಗ ಪಕ್ಷದ ಸಭೆಗೆ ಮುನ್ನ ಬಿಜೆಪಿ ನಾಯಕ ಸುಧೀರ್ ಮುಂಗಂಟಿವಾರ್, ಮಹಾಯುತಿ ಮೈತ್ರಕೂಟ ನಾಯಕರು ಬುಧವಾರ ಮಧ್ಯಾಹ್ನ 3:30 ಕ್ಕೆ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ ಎಂದು ಹೇಳಿದ್ದರು.

ನವೆಂಬರ್ 20 ರಂದು ನಡೆದ ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ಗಮನಾರ್ಹ ಯಶಸ್ಸನ್ನು ಸಾಧಿಸಿದೆ. ರಾಜ್ಯದ 288 ವಿಧಾನಸಭಾ ಸ್ಥಾನಗಳ ಪೈಕಿ 132 ಸ್ಥಾನಗಳನ್ನು ಗೆದ್ದಿದೆ. ಇದು ರಾಜ್ಯದಲ್ಲಿ ಇದುವರೆಗಿನ ಅತ್ಯುತ್ತಮ ಸಾಧನೆಯಾಗಿದೆ.

Vishwa News 24

Recent Posts

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

1 hour ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

2 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

2 hours ago

ಉಡುಪಿ: ಸ್ಪೀಡ್‌ ರಾಡಾರ್‌ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ  – vishwanews24

ಉಡುಪಿ: ಸ್ಪೀಡ್‌ ರಾಡಾರ್‌ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ  ಉಡುಪಿ :…

2 hours ago

CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ – vishwanews24

CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ ತಿರುವನಂತಪುರಂ: ಕೊಚ್ಚಿನ್…

3 hours ago

ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ – vishwanews24

ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು…

3 hours ago