ಮಹಾರಾಷ್ಟ್ರ ‘ಸಿಎಂ ಸ್ಥಾನಕ್ಕೆ’ ದೇವೇಂದ್ರ ಫಡ್ನವಿಸ್ ರಾಜೀನಾಮೆ -Vishwanews24

Featured, ರಾಷ್ಟ್ರ ನ್ಯೂಸ್

ಮುಂಬೈ: ವಿಶ್ವಾಸಮತಯಾಚನೆಗೂ ಮುನ್ನವೇ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ್ದಾರೆ.

ಇಂದು ಬೆಳಗ್ಗೆ ಸುಪ್ರೀಂ ಕೋರ್ಟ್ ಬುಧವಾರ ಸಂಜೆ 5 ಗಂಟೆಯ ಒಳಗಡೆ ಬಹುಮತ ಸಾಬೀತು ಪಡಿಸುವಂತೆ ಬಿಜೆಪಿ ಸರ್ಕಾರಕ್ಕೆ ಸೂಚಿಸಿತ್ತು. ಈ ಆದೇಶದ ಬಳಿಕ ಸಂಖ್ಯಾಬಲ ಇಲ್ಲದ ಹಿನ್ನೆಲೆಯಲ್ಲಿ ಅಜಿತ್ ಪವಾರ್ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಇಂದು ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ನೀಡುವುದಾಗಿ ಫಡ್ನವೀಸ್ ಪ್ರಕಟಿಸಿದ್ದಾರೆ.

ದೇವೇಂದ್ರ ಫಡ್ನವಿಸ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಹಿನ್ನಲೆಯಲ್ಲಿ ನಾಳೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತವನ್ನು ಯಾಚನೆ ಮಾಡುವುದಿಲ್ಲ. ಇದಲ್ಲದೇ ಈಗಾಗಲೇ ಎನ್‌ಸಿಪಿ-ಕಾಂಗ್ರೆಸ್‌-ಶಿವಸೇನೆಯು ರಾಜ್ಯಪಾಲರಿಗೆ ಸರಕಾರ ರಚನೆ ಮಾಡುವುದಕ್ಕಾಗಿ ಅವಕಾಶ ನೀಡಬೇಕಾಗಿ ಮನವಿ ಮಾಡಿರುವ ಹಿನ್ನಲೆಯಲ್ಲಿ ರಾಜ್ಯಪಾಲರು ಎನ್‌ಸಿಪಿ-ಕಾಂಗ್ರೆಸ್‌-ಶಿವಸೇನೆ ಮೈತ್ರಿಕೂಟಕ್ಕೆ ಸರಕಾರ ರಚನೆ ನೀಡುವುದಕ್ಕೆ ಅವಕಾಶ ನೀಡಲಿದ್ದು, ಉದ್ಬವ್‌ ಠಾಕ್ರೆ ಮಹಾರಾಷ್ಟ್ರದ ಸಿಎಂ ಆಗಿ ಆಧಿಕಾರ ಸ್ವೀಕಾರ ಮಾಡಲಿದ್ದು, ಅದಾದ ಎರಡು ಅಥಾವ ಮೂರು ದಿವಸದ ಬಳಿಕ ಸದನದಲ್ಲಿ ವಿಶ್ವಾಸ ಮತಯಾಚನೆಯನ್ನು ಮಾಡಲಿದ್ದಾರೆ.