Featured

ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಚಿತ್ರ ಬಿಡಿಸುವ ಸ್ಪರ್ಧೆ : ಯಶ್‌ಪಾಲ್ ಎ. ಸುವರ್ಣ -Vishwanews24

ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಚಿತ್ರ ಬಿಡಿಸುವ ಸ್ಪರ್ಧೆ : ಯಶ್‌ಪಾಲ್ ಎ. ಸುವರ್ಣ

ಮಹಾಲಕ್ಷಿö್ಮÃ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ಶ್ರೀಮಹಾಲಕ್ಷ್ಮಿ ದೇವಸ್ಥಾನದ
ಸಹಯೋಗದೊಂದಿಗೆ ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ದಿನಾಂಕ : ೦೧-೧೦-೨೦೨೨ ನೇ ಶನಿವಾರ ಬೆಳಿಗ್ಗೆ ೯.೩೦ಕ್ಕೆ ಮೊಗವೀರ ಭವನ ಉಚ್ಚಿಲದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಯಶ್ ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

ಚಿತ್ರ ಬಿಡಿಸುವ ಸ್ಪರ್ಧೆಯ ಚಿತ್ರ ರಚನೆಯ ವಿಷಯವಾಗಿ ದಸರಾ ಮಹೋತ್ಸವವನ್ನು ಆಯ್ಕೆ ಮಾಡಿದ್ದು, ಸ್ಪರ್ಧಿಗಳು ಈ ವಿಷಯಕ್ಕೆ ಸಂಬAಧಿಸಿದ ಚಿತ್ರವನ್ನು ಬಿಡಿಸಬೇಕು. ಒಟ್ಟು ಐದು ವಿಭಾಗಗಳಲ್ಲಿ ಸ್ಪರ್ಧೆಯನ್ನು ಆಯೋಜಿಸಿದ್ದು ಕಿರಿಯರ ವಿಭಾಗ (೧ ರಿಂದ ೪ನೇ ತರಗತಿ), ಪ್ರಾಥಮಿಕ ವಿಭಾಗ ( ೫ ರಿಂದ ೭ ನೇ ತರಗತಿ), ಹೈಸ್ಕೂಲ್ ವಿಭಾಗ ( ೮ ರಿಂದ ೧೦ನೇ ತರಗತಿ), ಕಾಲೇಜು ವಿಭಾಗ (ಪದವಿ ಪೂರ್ವ ಮತ್ತು ಪದವಿ ತರಗತಿ) ಹಾಗೂ ಸಾರ್ವಜನಿಕ ವಿಭಾಗದಲ್ಲಿ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಸ್ಪರ್ಧಾಳುಗಳಿಗೆ ಡ್ರಾಯಿಂಗ್ ಶೀಟ್ ಸ್ಥಳದಲ್ಲೇ ಒದಗಿಸಲಿದ್ದು, ಉಳಿದ ಪರಿಕರಗಳನ್ನು ಅವರೇ ತರತಕ್ಕದ್ದು.

ಪ್ರತಿ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಹಾಗೂ ೩ ಸಮಾಧಾನಕರ ಪ್ರಶಸ್ತಿಗೆ ವಿಜೇತರನ್ನು ಆಯ್ಕೆ ಮಾಡಲಿದ್ದು, ವಿಜೇತರಿಗೆ ನಗದು ಬಹುಮಾನ, ಸ್ಮರಣಿಕೆ, ಪ್ರಶಸ್ತಿ ಪ್ರಮಾಣಪತ್ರ ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ಸ್ಪರ್ಧಾಳುಗಳಿಗೆ ಪ್ರಮಾಣಪತ್ರ ಹಾಗೂ ಸ್ಮರಣಿಕೆ ನೀಡಿ ಪುರಸ್ಕರಿಸಲಾಗುವುದು.

ಈ ಸ್ಪರ್ಧೆಯನ್ನು ಈ ಹಿಂದೆ ಸೆಪ್ಟೆಂಬರ್ ೨೫ ರಂದು ನಡೆಸಲು ನಿರ್ಧರಿಸಿದ್ದು, ಶಾಲೆಗಳಲ್ಲಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮನವಿಯ ಮೇರೆಗೆ ಸ್ಪರ್ಧೆಯನ್ನು ಅಕ್ಟೋಬರ್ ೧ ನೇ ಶನಿವಾರ ಆಯೋಜಿಸಲಾಗಿದೆ.

ಸ್ಪರ್ಧೆಯಲ್ಲಿ ಭಾಗವಹಿಸಲು ಆನ್‌ಲೈನ್ ನೋಂದಣಿಗಾಗಿ ಹಾಗೂ ಸ್ಫರ್ಧೆಯ ವಿವರಗಳು ಮಹಾಲಕ್ಷ್ಮಿ ಬ್ಯಾಂಕಿನ ವೆಬ್‌ಸೈಟ್ www.mahalakshmicoopbank.com ನಲ್ಲಿ ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ೯೯೬೪೦೨೩೩೪೪, ೯೯೭೨೧೨೦೩೩೨, ೯೬೮೬೧೨೪೭೬೯ ಸಂಪರ್ಕಿಸಬಹುದು. ಸಾರ್ವಜನಿಕರು ಈ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಪ್ರಕಟಣೆಯಲ್ಲಿ ಯಶ್‌ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

Vishwa News 24

Recent Posts

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ – vishwanews24

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…

16 hours ago

ರೇಷನ್ ಕಾರ್ಡ್​ ಇ-ಕೆವೈಸಿ ದಿನಾಂಕ ವಿಸ್ತರಣೆ: ಸರ್ಕಾರದಿಂದ ಮಹತ್ವದ ಆದೇಶ – vishwanews24

ರಾಜ್ಯ ಸರ್ಕಾರ ಪಡಿತರ ಕಾರ್ಡ್​ದಾರರಿಗೆ ಬಿಗ್ ಗುಡ್​ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…

16 hours ago

ಗಣಪತಿ ಮೆರವಣಿಗೆ ವಿಚಾರಕ್ಕೆ ಧಮ್ಕಿ : ಇನ್ಸ್‌ಪೆಕ್ಟರ್‌ ಯಾವುದೇ ತಪ್ಪು ಮಾಡಿಲ್ಲ : ಯತೀಂದ್ರ ಸಿದ್ದರಾಮಯ್ಯ – vishwanews24

ಇನ್ಸ್‌ಪೆಕ್ಟರ್‌ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ  ತಪ್ಪೇ ಮಾಡದ ಇನ್ಸ್‌ಪೆಕ್ಟರ್‌ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…

17 hours ago

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ – vishwanews24

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ…

17 hours ago

‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ – vishwanews24

'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ…

18 hours ago

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ – vishwanews24

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕೊಣಾಜೆ  : ಚಾಲಕನ ನಿಯಂತ್ರಣ…

19 hours ago