ಶ್ಲಾಘನೀಯ: ನಾಡೋಜ ಡಾ| ಜಿ.ಶಂಕರ್ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ಇದರ ೨೦೨೨ನೇ ಸಾಲಿನ ಡೈರಿಯನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕರಾದ ನಾಡೋಜ ಡಾ| ಜಿ. ಶಂಕರ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಯಶ್ಪಾಲ್ ಸುವರ್ಣರವರ ಅಧ್ಯಕ್ಷತೆಯಲ್ಲಿ ಗ್ರಾಹಕಸ್ನೇಹಿ ಸೇವೆಯ ಮೂಲಕ ಕರಾವಳಿ ಕರ್ನಾಟಕದ ಅಗ್ರಗಣ್ಯ ಪಟ್ಟಣ ಸಹಕಾರಿ ಬ್ಯಾಂಕ್ ಎ0ಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್, ರಾಜ್ಯದಲ್ಲಿರುವ ೭೦ ಲಕ್ಷ ಮೀನುಗಾರ ಸಮುದಾಯಕ್ಕೆ ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಶಾಖೆಗಳನ್ನು ವಿಸ್ತರಿಸುವ ಮೂಲಕ ಗ್ರಾಹಕರಿಗೆ ಉತ್ತಮ ಸೇವೆ
ನೀಡುವಂತಾಗಲಿ ಎಂದು ಶುಭಹಾರೈಸಿದರು.
ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಗೆ ಬ್ಯಾಂಕಿನ ವತಿಯಿಂದ ಮಂಜೂರಾದ ೩೦ ಲಕ್ಷ ದೇಣಿಗೆಯ ದ್ವಿತೀಯ ಹಂತದ ೫ ಲಕ್ಷದ ಚೆಕ್ಕನ್ನು ನಾಡೋಜ ಡಾ ಜಿ. ಶಂಕರ್ ರವರಿಗೆ ಹಸ್ತಾಂತರಿಸಲಾಯಿತು.
ಸಮಾರ0ಭದ ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ಮಾತನಾಡಿ ಗ್ರಾಹಕರ ಮತ್ತು ಸದಸ್ಯರ ಸಹಕಾರದಿಂದ ಬ್ಯಾಂಕ್ ಉತ್ತಮ ಪ್ರಗತಿಯನ್ನು ಸಾಧಿಸಿದ್ದು, ಈಗಾಗಲೇ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೮ ಶಾಖೆಗಳನ್ನು ಹೊಂದಿರುವ ಮಹಾಲಕ್ಷ್ಮೀ ಬ್ಯಾಂಕ್ ಶೀಘ್ರದಲ್ಲಿಯೇ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಕುಮಟ ಮತ್ತು ಕಾರವಾರ ತಾಲೂಕಿಗೂ ಶಾಖೆಗಳ ಆರಂಭಿಸಲು ಆಡಳಿತ ಮಂಡಳಿ ಕಾರ್ಯಪ್ರವೃತ್ತರಾಗಿರುವುದಾಗಿ ತಿಳಿಸಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿದ್ದ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ ಸಿ. ಕೋಟ್ಯಾನ್ ಮತ್ತು ಬ್ಯಾಂಕಿನ ಲೆಕ್ಕಪರಿಶೋಧಕರಾದ ಸಿ. ಎ. ಗಣೇಶ್ ಬಿ. ಕಾಂಚನ್ ಬ್ಯಾಂಕಿನ ಕಾರ್ಯಚಟುವಟಿಕೆಯ ಬಗ್ಗೆ ಶ್ಲಾಘಿಸಿದರು.
ಈ ಸಂದರ್ಭದಲ್ಲಿ ನಿರ್ದೇಶಕರಾದ ವೆಂಕಟರಮಣ ಕಿದಿಯೂರು, ವಾಸುದೇವ ಸಾಲ್ಯಾನ್, ಶಶಿಕಾಂತ ಬಿ ಕೋಟ್ಯಾನ್, ಹೇಮನಾಥ ಜೆ ಪುತ್ರನ್, ಶೋಭೇಂದ್ರ ಸಸಿಹಿತ್ಲು, ಕೆ ಸಂಜೀವ ಶ್ರೀಯಾನ್, ರಾಮ ನಾಯ್ಕ್ ಎಚ್, ವಿನಯ ಕರ್ಕೇರ, ನಾರಾಯಣ ಟಿ ಅಮೀನ್, ಸುರೇಶ್ ಬಿ ಕರ್ಕೇರ, ಬಿ ಬಿ ಕಾಂಚನ್, ಶಿವರಾಮ ಕುಂದರ್, ಶ್ರೀಮತಿ ವನಜಾ ಹೆಚ್ ಕಿದಿಯೂರು, ಶ್ರೀಮತಿ ವನಜಾ ಜೆ ಪುತ್ರನ್, ವೃತ್ತಿಪರ ನಿರ್ದೇಶಕರಾದ ಶ್ರೀ ಮಂಜುನಾಥ ಎಸ್ ಕೆ, ಬ್ಯಾಂಕಿ0ಗ್ ಸಲಹೆಗಾರರಾದ ಶ್ರೀ ಆನಂದ ಎನ್ ಪುತ್ರನ್ ಹಾಗೂ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಜಿ ಕೆ ಶೀನಾ ರವರು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…