Featured

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. 2021 – 22 ನೇ ಸಾಲಿನ ಅರ್ಧ ವಾರ್ಷಿಕದಲ್ಲಿ ಒಟ್ಟು ರೂ. 4.60 ಕೋಟಿ ಲಾಭ : ಯಶ್‌ಪಾಲ್ ಎ. ಸುವರ್ಣ – Vishwanews24

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. 2021 – 22 ನೇ ಸಾಲಿನ ಅರ್ಧ ವಾರ್ಷಿಕದಲ್ಲಿ ಒಟ್ಟು ರೂ. 4.60 ಕೋಟಿ ಲಾಭ : ಯಶ್‌ಪಾಲ್ ಎ. ಸುವರ್ಣ – Vishwanews24

ಕರಾವಳಿ ಭಾಗದ ಪ್ರತಿಷ್ಟಿತ ಪಟ್ಟಣ ಸಹಕಾರಿ ಸಂಸ್ಥೆಗಳಲ್ಲಿ ಒಂದಾದ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ೨೦೨೧-೨೨ನೇ ಸಾಲಿನ ಅರ್ಧವಾರ್ಷಿಕದಲ್ಲಿ ಸುಮಾರು ರೂ. ೫೧೭.೫೮ ಕೋಟಿ ವ್ಯವಹಾರ ನಡೆಸಿ ರೂ.೪.೬೦ ಕೋಟಿ ಒಟ್ಟು ಲಾಭ ದಾಖಲಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಯಶ್‌ಪಾಲ್ ಎ ಸುವರ್ಣ ತಿಳಿಸಿದ್ದಾರೆ.

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಸಹಕಾರಿ ಇಲಾಖೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕಿನ ಪರಿವೀಕ್ಷಣೆಗೆ ಒಳಪಟ್ಟು ಅವಿಭಜಿತ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಗಳ ಮೂಲಕ ವ್ಯವಹಾರ ನಡೆಸುತ್ತಿದೆ. ಬ್ಯಾಂಕ್ ೨೦೨೧-೨೨ನೇ ಸಾಲಿನ ಅರ್ಧ ವಾರ್ಷಿಕದಲ್ಲಿ ೨೮೫
ಕೋಟಿಗೂ ಠೇವಣಿ ಸಂಗ್ರಹಣೆ ಹಾಗೂ 244 ಕೋಟಿ ಸಾಲ ಹಾಗೂ ಮುಂಗಡದೊ0ದಿಗೆ, ೨೬,೦೦೦ ಸದಸ್ಯರನ್ನೊಳಗೊಂಡು ೪೦,೦೦೦ ಗ್ರಾಹಕರು ಬ್ಯಾಂಕಿನಲ್ಲಿ ವ್ಯವಹರಿಸುತ್ತಿದ್ದಾರೆ. ಪ್ರಸ್ತುತ ಅರ್ಧವಾರ್ಷಿಕ ಅವಧಿಯಲ್ಲಿ ಠೇವಣಿ ಸಂಗ್ರಹಣೆಯಲ್ಲಿ ೪೩.೩೭%, ಸಾಲ ಮತ್ತು ಮುಂಗಡದಲ್ಲಿ ೭೪.೬೬% ಪ್ರಗತಿ ಸಾಧಿಸಿರುವುದಾಗಿ ತಿಳಿಸಿದ್ದಾರೆ.

ಕಳೆದ 12 ವರ್ಷಗಳಿಂದ ನಿರಂತರವಾಗಿ ಸದಸ್ಯರಿಗೆ ೧೮% ಡಿವಿಡೆಂಡ್ ನೀಡುವ ಕರಾವಳಿ ಭಾಗದ ಏಕೈಕ ಪಟ್ಟಣ ಸಹಕಾರಿ ಬ್ಯಾಂಕ್ ಎAಬ ಹೆಗ್ಗಳಿಕೆ ಪಾತ್ರವಾಗಿರುತ್ತದೆ. ಬ್ಯಾಂಕ್ ಆರ್ಥಿಕ ಸದೃಡಗೊಳ್ಳುತ್ತಿರುವ ದೃಷ್ಟಿಯಿಂದ ಅಧಿಕೃತ ಪಾಲು ಬಂಡವಾಳವನ್ನು ರೂ.೫೦ ಕೋಟಿಗೆ ನಿಗದಿಪಡಿಸಲಾಗಿದೆ. ಒಬ್ಬ ಸದಸ್ಯ ರೂ.೧೦ ಲಕ್ಷ ಪಾಲು ಬಂಡವಾಳವನ್ನು ಹೊಂದಲು ಅವಕಾಶ ಕಲ್ಪಿಸಲಾಗಿರುತ್ತದೆ. ಶಾಸನಬದ್ಧ ಲೆಕ್ಕಪರಿಶೋಧನೆಯಲ್ಲಿ 74.66%
ಶ್ರೇಣಿಯನ್ನು ಪಡೆದಿದೆ. ಪ್ರಸಕ್ತ ಸಾಲಿನಲ್ಲಿ ಬ್ಯಾಂಕಿನ ವ್ಯವಹಾರ ಕ್ಷೇತ್ರವನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಹಾಗೂ
ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಕುಮಟ, ಹೊನ್ನಾವರ, ಭಟ್ಕಳ ತಾಲೂಕುಗಳಿಗೆ ವಿಸ್ತರಿಸಲಾಗಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕ ರಾಜ್ಯದಾದ್ಯಂತ ಬ್ಯಾಂಕಿನ ಕಾರ್ಯ ಕ್ಷೇತ್ರವನ್ನು ವಿಸ್ತರಿಸುವ ಯೋಜನೆ ಆಡಳಿತ ಮಂಡಳಿಯ ಮುಂದಿರುವುದಾಗಿ ತಿಳಿಸಿದ್ದಾರೆ.

ಬ್ಯಾ0ಕಿನ ಮಲ್ಪೆ, ಕುಂದಾಪುರ, ಮಂಗಳೂರು, ಸುರತ್ಕಲ್ ಶಾಖೆ ಹಾಗೂ ಆಡಳಿತ ಕಚೇರಿ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಎಲ್ಲಾ ಶಾಖೆಗಳಲ್ಲಿ ಆಧುನಿಕ ಬ್ಯಾಂಕಿ0ಗ್ ವ್ಯವಸ್ಥೆಯೊ0ದಿಗೆ ಗ್ರಾಹಕರಿಗೆ ಆರ್.ಟಿ.ಜಿ.ಎಸ್., ನೆಫ್ಟ್ ಸೌಲಭ್ಯವನ್ನು ನೀಡುತ್ತಿದೆ. ಸೇಫ್ ಡೆಪಾಸಿಟ್ ಲಾಕರ್, ಇ-ಸ್ಟ್ಯಾಪಿಂಗ್, ಎಸ್‌ಎಮ್‌ಎಸ್ ಬ್ಯಾಂಕಿ0ಗ್, ಎಬಿಕ್ಸ್ ಕ್ಯಾಶ್ (ವೆಸ್ಟರ್ನ್ ಯೂನಿಯನ್), ಭಾರತ್ ಬಿಲ್ ಪೇಮೆಂಟ್, ಸಾಮಾನ್ಯ ಸೇವಾ ಕೇಂದ್ರ , ಎಚ್‌ಡಿಎಫ್‌ಸಿ ಬ್ಯಾಂಕಿನ ಒಡ0ಬಡಿಕೆಯೊ0ದಿಗೆ ಎಟಿಎಂ ಸೌಲಭ್ಯ, ಮೊಬೈಲ್ ಬ್ಯಾಂಕಿ0ಗ್ ಸೇವೆಗಳನ್ನು ಅಳವಡಿಕೊಳ್ಳಲಾಗಿದೆ. ಈಗಾಗಲೇ ನ್ಯೂ ಇಂಡಿಯಾ ಇನ್‌ಶ್ಯೂರೆನ್ಸ್ ಕಂಪೆನಿ ಕಾರ್ಪೋರೇಟ್ ಏಜೆಂಟ್ ಮೂಲಕ ವಿಮಾ ಸೌಲಭ್ಯವನ್ನು ಹಾಗೂ ಕಸ್ತೂರ್ಬಾ ಆಸ್ಪತ್ರೆಯ ಮಣಿಪಾಲ ಆರೋಗ್ಯ ಕಾರ್ಡಿನ ಒಡಂಬಡಿಕೆಯ0ತೆ ಗ್ರಾಹಕರಿಗೆ ಆರೋಗ್ಯ ಕಾರ್ಡ್ ಒದಗಿಸುತ್ತಿದೆ. ಮಲ್ಪೆ ಶಾಖೆಯ ಗ್ರಾಹಕರ ಹೆಚ್ಚಿನ ಸೇವೆಗಾಗಿ ವ್ಯವಹಾರ ಸಮಯವನ್ನು ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ವಿಸ್ತರಿಸಲಾಗಿದೆ. ಬ್ಯಾಂಕಿನ ಅಧಿಕೃತ ವೆಬ್‌ಸೈಟಿಗೆ ಚಾಲನೆ ನೀಡಲಾಗಿದ್ದು ಗ್ರಾಹಕರು ಹೆಚ್ಚಿನ ಮಾಹಿತಿಯನ್ನು
ಪಡೆಯಬಹುದಾಗಿದೆ.

1978ರಲ್ಲಿ ಆರಂಭಗೊ0ಡಿರುವ ಬ್ಯಾಂಕ್ ೪೨ ವರ್ಷಗಳನ್ನು ಪೂರೈಸಿದ್ದು, 5೦ನೇ ವರ್ಷಾಚರಣೆಯ ಸುವರ್ಣ ಮಹೋತ್ಸವ ಆಚರಿಸುವ ಸಂದರ್ಭದಲ್ಲಿ 1 ಲಕ್ಷ ಸದಸ್ಯರನ್ನೊಳಗೊಂಡು, 1 ಸಾವಿರ ಕೋಟಿ ಠೇವಣಿ ಹಾಗೂ 10 ಸಾವಿರ ಕೋಟಿ ವಾರ್ಷಿಕ ವ್ಯವಹಾರದ ಗುರಿಯನ್ನು ಹೊಂದಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಕೋವಿಡ್-19 ಸಂದರ್ಭದಲ್ಲಿಯೂ ಬ್ಯಾಂಕಿನ ವ್ಯವಹಾರದಲ್ಲಿ ಸಹಕರಿಸಿದ ಸರ್ವರಿಗೂ ವಿಶೇಷಅಭಿನಂದನೆಗಳನ್ನು ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ಬ್ಯಾಂಕಿನ ಪ್ರಗತಿಗೆ ಸರ್ವರ ಸಲಹೆ ಸಹಕಾರವನ್ನು ಯಾಚಿಸುವುದಾಗಿ ಯಶ್‌ಪಾಲ್ ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

3 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

5 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

5 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

6 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

6 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

6 hours ago