Featured

ಮಹಾಲಕ್ಷ್ಮೀ ದೇವಸ್ಥಾನ ಉಚ್ಚಿಲ : ಎ. 1ರಿಂದ 15ವರೆಗೆ ಪುನರ್‌ ಪ್ರತಿಷ್ಠೆ, ಬ್ರಹ್ಮಕಲಶ ಪುಣ್ಯೋತ್ಸವ, ರಥೋತ್ಸವ – Vishwanews24

ಮಹಾಲಕ್ಷ್ಮೀ ದೇವಸ್ಥಾನ ಉಚ್ಚಿಲ : ಎ. 1ರಿಂದ 15ವರೆಗೆ ಪುನರ್‌ ಪ್ರತಿಷ್ಠೆ, ಬ್ರಹ್ಮಕಲಶ ಪುಣ್ಯೋತ್ಸವ, ರಥೋತ್ಸವ – Vishwanews24

ಉಡುಪಿ: ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀ ಕ್ಷೇತ್ರ ಉಚ್ಚಿಲ ಇದರ ಪುನರ್‌ ಪ್ರತಿಷ್ಠೆ, ಬ್ರಹ್ಮಕಲಶ ಪುಣ್ಯೋತ್ಸವ, ರಥೋತ್ಸವ, ಚತುಃಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮಗಳು ಏಪ್ರಿಲ್‌ 1 ರ ಶುಕ್ರವಾರದಿಂದ 15 ನೇ ತಾರೀಕಿನ ವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರು ಜಿರ್ಣೋದ್ದಾರ ಸಮಿತಯ ಗೌರವಾಧ್ಯಕ್ಷರೂ ಆಗಿರುವ ನಾಡೋಜ ಡಾ|ಜಿ ಶಂಕರ್‌ ಹೇಳಿದರು.

ಅವರು ಗುರುವಾರ ಉಚ್ಚಿಲ ಮೊಗವೀರ ಭವನದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದ.ಕ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ಮಹಾಲಕ್ಷ್ಮೀ ದೇವಸ್ಥಾನವು 1957 ರಲ್ಲಿ ಮೊಗವೀರ ಕುಲಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲರವರ ನೇತೃತ್ವದಲ್ಲಿ ದಿವಂಗತ ಸದಿಯ ಸಾಹುಕಾರರು ದಾನವಾಗಿ ನೀಡಿದ ಜಾಗದಲ್ಲಿ ಪ್ರತಿಷ್ಠಾಪಿಸಲ್ಪಟ್ಟಿದೆ. ಹಲವಾರು ವರ್ಷಗಳಿಂದ ಶ್ರೀ ಮಹಾಲಕ್ಷ್ಮೀ ದೇವಸ್ಥಾನವನ್ನು ಸಮಗ್ರವಾಗಿ ಜೀರ್ಣೋದ್ಧಾರ ಮಾಡಿ ಶ್ರೀ ಮಹಾಲಕ್ಷ್ಮೀ ದೇವಿಯನ್ನು ಹತ್ತಿರದಲ್ಲಿ ನೋಡಬೇಕೆನ್ನುವ ಹಂಬಲವನ್ನು ಸ್ಥಳೀಯ ಹಾಗೂ ಮುಂಬಯಿಯ ಭಕ್ತಾಧಿಗಳು ಸಮಾಜದ ಮುಖಂಡರಾದ ನಾಡೋಜ ಡಾ ಜಿ ಶಂಕರ್ ಹಾಗೂ ದ.ಕ ಮೊಗವೀರ ಮಹಾಜನ ಸಂಘದ ಪದಾಧಿಕಾರಿಗಳ ಜೊತೆ ವ್ಯಕ್ತಪಡಿಸಿದಾಗ ತಾವೆಲ್ಲರೂ ಸೇರಿ ಶ್ರದ್ಧಾಭಕ್ತಿಯಿಂದ ಈ ಕೆಲಸ ಮಾಡೋಣ ಎಂದು ತಿಳಿಸಿ ಮಹಾಜನ ಸಂಘದ ನೇತೃತ್ವದಲ್ಲಿ ಕೇರಳದ ಜ್ಯೋತಿಷ್ಯ ವಿದ್ವಾನ್ ಶ್ರೀ ಮಾಧವನ್ ಪುದುವಾಳರವರ ಮೂಲಕ ಅಷ್ಟಮಂಗಲ ಪ್ರಶ್ನೆಯಲ್ಲಿ ವಿಚಾರ ವಿನಿಮಯ ಮಾಡಲಾಯಿತು . ಅಷ್ಟಮಂಗಲ ಪ್ರಶ್ನೆಯಲ್ಲಿ ದೇವಸ್ಥಾನದ ಬಗ್ಗೆ ಅನೇಕ ಪ್ರಶ್ನೆಗಳು ಮೂಡಿ ಬಂದಿದ್ದು ಅವುಗಳಿಗೆಲ್ಲಾ ಪ್ರಾಯಶ್ಚಿತ್ತಾದಿ ಸತ್ಕರ್ಮಗಳನ್ನು ನೆರವೇರಿಸಿ ನಾಡೋಜ ಡಾ. ಜಿ ಶಂಕರ್ ನೇತೃತ್ವದಲ್ಲಿ ಜೀರ್ಣೋದ್ಧಾರ ಕಾರ್ಯಕ್ರಮ ಕೈಗೊಳ್ಳುವುದೆಂದು ನಿರ್ದಾರ ಕೈಗೊಳ್ಳಲಾಯಿತು.

ದ.ಕ ಮೊಗವೀರ ಮಹಾಜನ ಸಂಘದ ಸಭೆಯಲ್ಲಿ ಡಾ. ಜಿ ಶಂಕರ್‍ರವರ ಗೌರವಾಧ್ಯಕ್ಷತೆ , ಶ್ರೀ ಗುಂಡು ಬಿ ಅಮೀನ್‍ರವರ ಅಧ್ಯಕ್ಷತೆಯಲ್ಲಿ ಜೀರ್ಣೋದ್ಧಾರ ಸಮಿತಿ ರಚಿಸಲಾಯಿತು. ವಾಸ್ತು ತಜ್ಞ ವಿದ್ವಾನ್ ಶ್ರೀ ಸುಬ್ರಹ್ಮಣ್ಯ ಭಟ್ ಗುಂಡಿಬೈಲು, ಕ್ಷೇತ್ರ ತಂತ್ರಿಗಳಾದ ಶ್ರೀ ರಾಘವೇಂದ್ರ ತಂತ್ರಿ ಕುಕ್ಕಿಕಟ್ಟೆಯವರ ಮಾರ್ಗದರ್ಶನದಲ್ಲಿ ಶಿಲಾಮಯ ಗರ್ಭ ಗುಡಿ , ಶಿಲಾಮಯ ಶ್ರೀ ಭದ್ರಕಾಳಿ ಗುಡಿ , ಶಿಲಾಮಯ ಶ್ರೀ ಪ್ರಸನ್ನ ಗಣಪತಿ ಗುಡಿ , ಶ್ರೀ ನಾಗದೇವರ ಗುಡಿ, ಸುತ್ತುಪೌಳಿ, ಗುರುಪೀಠ, ರಾಜಗೋಪುರ, ಯಾಗಶಾಲೆ, ವಸಂತ ಮಂಟಪ , ರಥಬೀಧಿ, ಸುತ್ತು ಆವರಣ ಗೋಡೆ, ಬಯಲು ರಂಗ ಮಂಟಪ , ಒಳಚರಂಡಿ ವ್ಯವಸ್ಥೆ, ನೆಲಹಾಸು(ಇಂಟರ್‍ಲಾಕ್) ಅಳವಡಿಕೆ ಹಾಗೂ ಪುಷ್ಕರಣಿಗಳನ್ನೊಳಗೊಂಡ ರೂಪಾಯಿ 32 ಕೋಟಿ ಅಂದಾಜು ಮೊತ್ತದ ಸಮಗ್ರ ಜೀರ್ಣೋದ್ಧಾರ ಕಾರ್ಯಕೈಗೊಳ್ಳಲಾಯಿತು.

ಮೊಗವೀರ ಭವನ: ಮಂಗಳೂರು ರಿಪೈನರೀಸ್ ಆಂಡ್ ಪೆಟ್ರೋಕೆಮಿಕಲ್ ಲಿಮಿಟೆಡ್ ನ ಸಿ ಎಸ್ ಆರ್ ನಿಧಿಯಿಂದ ಕೊಡಮಾಡಿದ ಅನುದಾನದೊಂದಿಗೆ ಹಾಗೂ ಮಹಾಜನ ಸಂಘದ ಮೊತ್ತವನ್ನು ಸೇರಿಸಿ ಸುಮಾರು 15 ಕೋಟಿ ವೆಚ್ಚದ ಎರಡು ಸಭಾಂಗಣಗಳನ್ನೊಳಗೊಂಡ “ಮೊಗವೀರ ಭವನ” ನಿರ್ಮಿಸಲಾಗಿದೆ.

ಇದೀಗ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಕಾರ್ಯಗಳು ಸಂಪನ್ನಗೊಂಡಿದ್ದು ಶಿಲೆದಾರು ಶಿಲ್ಪಗಳಿಂದ ಕೂಡಿದ ದೇವಾಲಯದಲ್ಲಿ ಶ್ರೀ ಪ್ರಸನ್ನ ಗಣಪತಿ, ಶ್ರೀ ಭದ್ರಕಾಳಿ, ಶ್ರೀ ನಾಗದೇವರ ಸಹಿತ ಶ್ರೀ ಮಹಾಲಕ್ಷ್ಮೀ ದೇವಿಯ ಬಿಂಬ ಪುನರ್ ಪ್ರತಿಷ್ಠಾಪನೆ, ಅಷ್ಟಬಂಧ ಬ್ರಹ್ಮಕಲಶೋತ್ಸವ, ರಥೋತ್ಸವ, ಚತುಃಪವಿತ್ರ ನಾಗಮಂಡಲೋತ್ಸವಗಳನ್ನೊಳಗೊಂಡ ವೈಧಿಕ ವಿಧಿ ವಿಧಾನಗಳನ್ನು ಇದೇ ಬರುವ ಎಪ್ರಿಲ್ 1 ರಿಂದ ಎಪ್ರಿಲ್ 15 ರವರೆಗೆ ಕ್ಷೇತ್ರದ ತಂತ್ರಿಗಳಾದ ವಿದ್ವಾನ್ ಶ್ರೀ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿಗಳ ನೇತೃತ್ವದಲ್ಲಿ, ಹಿರಿಯ ಅರ್ಚಕರಾದ ವೆಂಕಟನರಸಿಂಹ ಉಪಾಧ್ಯಾಯ ಹಾಗೂ ರಾಘವೇಂದ್ರ ಉಪಾಧ್ಯಾಯರ ಉಪಸ್ಥಿತಿಯಲ್ಲಿ ಮತ್ತು ಯತಿವರೇಣ್ಯರ ಶುಭಾಶೀರ್ವಾದಗಳೊಂದಿಗೆ ವೈಭವೋಪೇತವಾಗಿ ನಡೆಸಲು ಸಂಕಲ್ಪಿಸಲಾಗಿದೆ ಎಂದರು.

ಪ್ರಮುಖ ಧಾರ್ಮೀಕ ಕಾರ್ಯಕ್ರಮಗಳು:
ಹೊರೆಕಾಣಿಕೆ: ರಾಜ್ಯ ಹಾಗೂ ಹೊರರಾಜ್ಯಗಳಿಂದ 2 ರಿಂದ 3 ಲಕ್ಷದಷ್ಟು ಭಕ್ತಾಧಿಗಳು ಆಗಮಿಸುವ ನಿರೀಕ್ಷೆಯಿದ್ದು ಆಗಮಿಸುವ ಎಲ್ಲಾ ಭಕ್ತಾಧಿಗಳಿಗೂ ದಿನಂಪ್ರತಿ ಮಧ್ಯಾಹ್ನ ಹಾಗೂ ರಾತ್ರಿ ಅನ್ನಸಂತರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಪ್ರಯುಕ್ತ ಮಾರ್ಚ್ 27 ಕ್ಕೆ ಅವಿಭಜಿತ ದ. ಕ ಜಿಲ್ಲೆಯ ಪ್ರಸಿದ್ಧ ದೇವಸ್ಥಾನಗಳಿಂದ ಪ್ರಸಾದದ ರೂಪದಲ್ಲಿ ಹೊರೆಕಾಣಿಕೆಯು ಕ್ಷೇತ್ರವನ್ನು ತಲುಪಲಿದೆ. ಈಗಾಗಲೇ ಹೈದ್ರಾಬಾದ್ ಕರ್ನಾಟಕ ಸೇರಿದಂತೆ ರಾಜ್ಯದ ಇತರ ಭಾಗಗಳಿಂದ ಹೊರೆಕಾಣಿಕೆಗಳು ದೇವಸ್ಥಾನಕ್ಕೆ ತಲುಪಿದೆ. ಕರಾವಳಿ ಭಾಗದ ಭಕ್ತಾಧಿಗಳ ಹೊರಕಾಣಿಕೆಯು 2000ಕ್ಕೂ ಮಿಕ್ಕಿದ ವಾಹನಗಳ ಮೂಲಕ ದೇವಸ್ಥಾನದ ಉತ್ತರ ಭಾಗದ ಮೆರವಣಿಗೆಯು ಮೂಳೂರಿನಿಂದ ಹಾಗೂ ದಕ್ಷಿಣ ಭಾಗದ ಮೆರವಣಿಗೆಯು ತೆಂಕ ಎರ್ಮಾಳ್‍ನಿಂದ ಹೊರಟು ವಿವಿಧ ರೀತಿಯ ಟ್ಯಾಬ್ಲೋ, ಚೆಂಡೆ, ಭಜನಾಕುಣಿತ ಮುಂತಾದ ಬಿರುದಾವಳಿಗಳೊಂದಿಗೆ ದೇವಸ್ಥಾನ ತಲುಪಲಿದೆ.

ಅನ್ನ ಛತ್ರ ಹಾಗೂ ಪಾರ್ಕಿಂಗ್: ಕ್ಷೇತ್ರಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಯಾವುದೇ ನೂಕು ನುಗ್ಗಲಾಗದಂತೆ ಸುಮಾರು 1 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ಅನ್ನಛತ್ರದ ಚಪ್ಪರ ನಿರ್ಮಿಸಿ ಎಲೆ ಊಟ ಮತ್ತು ಬಫೆ ಊಟಕ್ಕೆ ಅನುಕೂಲವಾಗುವಂತೆ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಹಾಗೂ ಕ್ಷೇತ್ರಕ್ಕೆ ಆಗಮಿಸುವ ಭಕ್ತಾಧಿಗಳ ವಾಹನ ನಿಲುಗಡೆಗೆ ಬೇಕಾಗುವಷ್ಟು ಪಾರ್ಕಿಂಗ್ ಜಾಗದ ಸಿದ್ದತೆ ಮಾಡಿಕೊಳ್ಳಲಾಗಿದೆ.

ರಾಜಗೋಪುರ ಹಾಗೂ ಲಕ್ಷ್ಮೀ ತೀರ್ಥ ಕೆರೆ ಉದ್ಘಾಟನೆ ಎಪ್ರಿಲ್ 1: ನೂತನವಾಗಿ ನಿರ್ಮಾಣಗೊಂಡ ಭವ್ಯ ರಾಜಗೋಪುರ ಹಾಗೂ ಸರಕಾರದ ಅನುಧಾನದೊಂದಿಗೆ ನಿರ್ಮಾಣಗೊಂಡ ಲಕ್ಷ್ಮೀತೀರ್ಥ ಕೆರೆಯು ಎಪ್ರಿಲ್ 1ರ ಸಂಜೆ 5 ಗಂಟೆಗೆ ಉದ್ಘಾಟನೆಗೊಳ್ಳಲಿದೆ.

ದಿನಂಪ್ರತಿ ಕುಂಕುಮಾರ್ಚನೆಯೊಂದಿಗೆ ಮಹಾಮಂಗಳಾರತಿ : ಎಪ್ರಿಲ್ 2ರಿಂದ ಎಪ್ರಿಲ್ 15ರತನಕ ಪ್ರತೀದಿನ ಸಂಜೆ ಗಂಟೆ 4 ರಿಂದ 5ರವರೆಗೆ ಸಾವಿರ ಸುಮಂಗಲೆಯರಿಂದ ಕುಂಕುಮಾರ್ಚನೆಯೊಂದಿಗೆ ಮಹಾಮಂಗಳಾರತಿ ಕಾರ್ಯಕ್ರಮವನ್ನು ವಿಶೇಷವಾಗಿ ಆಯೋಜಿಸಲಾಗಿದೆ.

ಮಹಾಲಕ್ಷ್ಮೀ ದೇವಿಯ ಬಿಂಬ ಪ್ರತಿಷ್ಠೆ , ಸ್ವರ್ಣಕಲಶ ಪ್ರತಿಷ್ಠೆ ಹಾಗೂ ಮಹಾಅನ್ನಸಂತರ್ಪಣೆ ಎಪ್ರಿಲ್ 6ರಂದು ನಡೆಯಲಿದೆ.

ವಾರ್ಷಿಕ ರಥೋತ್ಸವ :ವರ್ಷಂಪ್ರತಿ ನಡೆಯುವ ಶ್ರೀಮಹಾಲಕ್ಷ್ಮೀ ರಥೋತ್ಸವ ಹಾಗೂ ಮಹಾಅನ್ನಸಂತರ್ಪಣೆಯು ಎಪ್ರಿಲ್ 13ರಂದು ನಡೆಯಲಿದೆ.

ಚತುಃಪವಿತ್ರ ನಾಗಮಂಡಲ ಸೇವೆ : ಎಪ್ರಿಲ್ 15ರ ರಾತ್ರಿ ಗಂಟೆ 8.00ಕ್ಕೆ ಹಾಲಿಟ್ಟು ಸೇವೆ ರಾತ್ರಿ 9.00ರಿಂದ ಚತುಃಪವಿತ್ರ ನಾಗಮಂಡಲೋತ್ಸವ ನಡೆಯಲಿದೆ. ಎಪ್ರಿಲ್ 16ರ ಬೆಳಗ್ಗೆ ಸಂಪೆÇೀಕ್ಷಣೆ, ಮಂತ್ರಾಕ್ಷತೆಯೊಂದಿಗೆ ಪುನಃ ಪ್ರತಿಷ್ಠೆ ಧಾರ್ಮಿಕ ವಿಧಿವಿಧಾನಗಳು ಶುಭಾಂತ್ಯವಾಗಲಿದೆ.

ನಿರಂತರ 15ದಿನಗಳ ಪರ್ಯಂತ ಧಾರ್ಮಿಕ ಸಭಾಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ, ಶ್ರೀ ಸಿದ್ಧರಾಮಯ್ಯ, ಶ್ರೀ ಹೆ ಚ್ ಡಿ ಕುಮಾರಸ್ವಾಮಿ, ಸಂಸದರುಗಳಾದ ಶ್ರೀನಳಿನ್ ಕುಮಾರ್ ಕಟೀಲ್ , ಶೋಭಾಕರಂದ್ಲಾಜೆ , ರಾಜ್ಯದ ಹಾಲಿ ಹಾಗೂ ಮಾಜಿ ಸಚಿವರು, ಹಾಲಿ ಹಾಗೂ ಮಾಜಿ ಶಾಸಕರು, ರಾಜಕೀಯ ಮುಖಂಡರುಗಳು ಭಾಗವಹಿಸಲಿದ್ದಾರೆ. ವಿವಿಧ ಮಠಾಧೀಶರುಗಳು ಮತ್ತು ಧಾರ್ಮಿಕ ಮುಖಂಡರುಗಳು ಆಶೀರ್ವಚನ ನೀಡಲಿದ್ದಾರೆ.

ಸಾಂಸ್ಕ್ರತಿಕ ಕಾರ್ಯಕ್ರಮದ ಅಂಗವಾಗಿ ಭಾರತ ಸರಕಾರ ಪ್ರಸ್ತುತ ಪಡಿಸುವ ದಕ್ಷಿಣ ವಲಯ ಸಾಂಸ್ಕ್ರತಿಕ ಕೇಂದ್ರ ತಾಂಜವೂರು ಇವರು ಸಾದರ ಪಡಿಸುವ 20 ರಾಜ್ಯಗಳ ಕಲಾವಿದರುಗಳ ಸಾಂಸ್ಕ್ರತಿಕ ಉತ್ಸವ ಏರ್ಪಡಿಸಲಾಗಿದೆ. ರಾಜ್ಯದ ಹಾಗೂ ಸ್ಥಳೀಯ ಕಲಾವಿದರುಗಳಿಂದ ಪ್ರತೀ ದಿನ ಸಂಜೆ ನೃತ್ಯ ವೈವಿಧ್ಯ, ಯಕ್ಷಗಾನ , ನಾಟಕ ಮುಂತಾದ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಲಿದೆ ಮತ್ತು ಖ್ಯಾತ ಗಾಯಕರೂ , ಸಂಗೀತ ನಿರ್ದೇಶಕರೂ ಆದ ಗಾನಗಂಧರ್ವ ವಿಜಯ ಪ್ರಕಾಶರವರಿಂದ ಸಾಂಸ್ಕ್ರತಿಕ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ. ಪ್ರತೀದಿನ ಪೂರ್ವಾಹ್ನ ಗಂಟೆ 11.30 ರಿಂದ ರಾಜ್ಯದ ಖ್ಯಾತ ಕಲಾವಿದರುಗಳಿಂದ ಭಕ್ತಿ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಸುದ್ದಿಗೋಷ್ಠೀಯಲ್ಲಿ ದಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ ಕೋಟ್ಯಾನ್, ಜಿರ್ಣೋದ್ಧಾರ ಸಮಿತಿಯ ಅಧ್ಯ್ಷರಾದ ಗುಂಡು ಬಿ ಅಮೀನ್, ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ವಾಸುದೇವ ಸಾಲ್ಯಾನ್, ಸುಧಾಕರ ಕುಂದರ್, ವಾಸುದೇವ ಸಾಲ್ಯಾನ್, ಮೋಹನ್ ಕರ್ಕೇರಾ, ಭರತ್ ಎರ್ಮಾಳ್, ವಿನಯ್ ಕರ್ಕೇರಾ, ಶಂಕರ್ ಸಾಲ್ಯಾನ್ ಹಾಗೂ ಇತರರು ಉಪಸ್ಥಿರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago