Featured

ಮಹಾ ಕುಂಭಮೇಳ  ಪರಿಣಾಮ ವಾರಣಾಸಿಯ ಕಾಶಿ ದೇವಾಲಯಕ್ಕೆ ದಾಖಲೆಯ ಪ್ರಮಾಣದಲ್ಲಿ ಭೇಟಿ ನೀಡಿದ ಭಕ್ತರು  – vishwanews24

ಮಹಾ ಕುಂಭಮೇಳ  ಪರಿಣಾಮ ವಾರಣಾಸಿಯ ಕಾಶಿ ದೇವಾಲಯಕ್ಕೆ ದಾಖಲೆಯ ಪ್ರಮಾಣದಲ್ಲಿ ಭೇಟಿ ನೀಡಿದ ಭಕ್ತರು

ವಾರಾಣಾಸಿ: ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾ ಕುಂಭಮೇಳ  ಪರಿಣಾಮ ವಾರಣಾಸಿಯ ಕಾಶಿ ವಿಶ್ವನಾಥನ ದೇವಸ್ಥಾನಕ್ಕೆ ದಾಖಲೆಯ ಪ್ರಮಾಣದಲ್ಲಿ ಭಕ್ತರು ಭೇಟಿ ನೀಡಿದ್ದಾರೆ. ಕಳೆದ 45 ದಿನಗಳಲ್ಲಿ ಮೂರು ಕೋಟಿ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ ಎಂದು ಶ್ರೀ ಕಾಶಿ ವಿಶ್ವನಾಥ ದೇವಾಲಯ ಟ್ರಸ್ಟ್ ಹೇಳಿದೆ.

ಶ್ರೀ ಕಾಶಿ ವಿಶ್ವನಾಥ ದೇವಾಲಯ ಟ್ರಸ್ಟ್ ಬಿಡುಗಡೆ ಮಾಡಿದ ಮಾಹಿತಿಗಳ ಪ್ರಕಾರ, ಪ್ರತಿದಿನ ಸರಾಸರಿ ಆರೂವರೆ ಲಕ್ಷಕ್ಕೂ ಹೆಚ್ಚು ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇದು ದೇವಾಲಯದ ಇತಿಹಾಸದಲ್ಲಿ ಅತಿ ಹೆಚ್ಚು ದರ್ಶನ ಪಡೆದ ಭಕ್ತರ ಸಂಖ್ಯೆಯಾಗಿದೆ. ಶ್ರಾವಣಕ್ಕಿಂತ ಮಾಘ ಮತ್ತು ಫಾಲ್ಗುಣದಲ್ಲಿ ಹೆಚ್ಚಿನ ಭಕ್ತರು ದರ್ಶನ ಪಡೆದಿದ್ದಾರೆ.

ಮಹಾಶಿವರಾತ್ರಿ ಮತ್ತು ಮೌನಿ ಅಮಾವಾಸ್ಯೆಯಂದು ಭಕ್ತರ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಮೌನಿ ಅಮಾವಾಸ್ಯೆಯಂದು 11 ಲಕ್ಷಕ್ಕೂ ಹೆಚ್ಚು ಭಕ್ತರು ಬಂದಿದ್ದರೆ, ಮಹಾಶಿವರಾತ್ರಿಯಂದು 46 ಗಂಟೆಗಳಲ್ಲಿ 17 ಲಕ್ಷಕ್ಕೂ ಹೆಚ್ಚು ಭಕ್ತರು ವಿಶ್ವನಾಥನ ದರ್ಶನ ಪಡೆದಿದ್ದಾರೆ.

ಜನವರಿ 13ರಿಂದ ಫೆಬ್ರವರಿ 19ರ ನಡುವೆ, ಭಕ್ತರ ಸಂಖ್ಯೆ ಎರಡು ಕೋಟಿ ಗಡಿ ದಾಟಿದೆ. ಫೆಬ್ರವರಿ 27ರಂದು ಬಿಡುಗಡೆಯಾದ ಮಾಹಿತಿಯ ಪ್ರಕಾರ, ಈ ಸಂಖ್ಯೆ ಮೂರು ಕೋಟಿ ತಲುಪಿದೆ. ಅಂದರೆ ಕೇವಲ ಎಂಟು ದಿನಗಳಲ್ಲಿ (ಫೆಬ್ರವರಿ 20ರಿಂದ 27ರವರೆಗೆ) ಒಂದು ಕೋಟಿಗೂ ಹೆಚ್ಚು ಭಕ್ತರು ದರ್ಶನ ಪಡೆದಿದ್ದಾರೆ.

2022ರ ಶ್ರಾವಣ ಮಾಸದಲ್ಲಿ, ಒಂದು ಕೋಟಿಗೂ ಹೆಚ್ಚು ಭಕ್ತರು ವಿಶ್ವನಾಥನ ಜಲಾಭಿಷೇಕವನ್ನು ನೆರವೇರಿಸಿದ್ದರು. 2023ರಲ್ಲಿ ಭಕ್ತರ ಸಂಖ್ಯೆ ಹೊಸ ದಾಖಲೆಯನ್ನು ಸೃಷ್ಟಿಸಿತ್ತು. ಜುಲೈ 4 ರಿಂದ ಪ್ರಾರಂಭವಾದ 60 ದಿನಗಳ ಶ್ರಾವಣದಲ್ಲಿ 1.63 ಕೋಟಿ ಭಕ್ತರು ದರ್ಶನ ಪಡೆದಿದ್ದರು. 2024ರ ಶ್ರಾವಣ ಮಾಸದಲ್ಲಿ 53.84 ಲಕ್ಷ ಭಕ್ತರು ವಿಶ್ವನಾಥನ ಜಲಾಭಿಷೇಕ ನೆರವೇರಿಸಿದ್ದರು. ಇದೇ ಮೊದಲ ಬಾರಿಗೆ ಮೂರು ಕೋಟಿ ಭಕ್ತರು ಭೇಟಿ ನೀಡಿದ್ದಾರೆ.

Vishwa News 24

Recent Posts

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

28 minutes ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

33 minutes ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

20 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

22 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

22 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

22 hours ago