ಮಹಾ ಮಳೆಗೆ ತತ್ತರಿಸಿದ ಬೆಂಗಳೂರು – Vishwanews24

Featured, ರಾಜ್ಯ ನ್ಯೂಸ್

ರಾತ್ರಿಯಿಡೀ ಸುರಿದ ಮಹಾ ಮಳೆಗೆ ತತ್ತರಿಸಿದ ಬೆಂಗಳೂರು ಜನತೆ

ಬೆಂಗಳೂರು: ಭಾನುವಾರ ರಾತ್ರಿ ಸುರಿದ ಭಾರೀ ಮಳೆ ರಾಜ್ಯ ರಾಜಧಾನಿ ಬೆಂಗಳೂರು ನಲುಗಿದೆ. ಹೆಚ್‍ಬಿಆರ್ ಲೇಔಟ್, ಇಂದಿರಾನಗರ ಸೇರಿದಂತೆ ಅನೇಕ ಏರಿಯಾಗಳು ಜಲಾವೃತವಾಗಿ ಭಾರೀ ಅನಾಹುತಗಳಾಗಿವೆ.

ನಿರಂತರ ಮಳೆಗೆ ಬೆಂಗಳೂರಿನ ರಸ್ತೆಗಳು ಕೆರೆಯಂತೆ ಆಗಿದೆ. ಬಹುತೇಕ ರಸ್ತೆಯಲ್ಲಿ ಸಂಚಾರ ಮಾಡಿದರೂ ರಸ್ತೆಯ ಬದಲು ನೀರನ್ನೆ ಕಾಣುವ ಪರಿಸ್ಥಿತಿ ಉಂಟಾಗಿದೆ. ಇನ್ನೂ ಅಂಡರ್ ಪಾಸ್ ಪರಿಸ್ಥಿತಿ ಹೇಳೋದೇ ಬೇಕಾಗಿಲ್ಲ. ಅದಕ್ಕೆ ಒಂದು ಉದಾಹರಣೆ ಬಾಣಸವಾಡಿ ಔಟರ್ ರಿಂಗ್ ರೋಡ್‍ನ ಅಂಡರ್ ಪಾಸ್ ಸಂಪೂರ್ಣ ಜಲಾವೃತವಾಗಿದೆ.

ರಾತ್ರಿ 10 ಗಂಟೆಯಿಂದಲೂ ಗುಡುಗು ಸಹಿತ ಧಾರಾಕಾರ  ಮಳೆಯಾಗಿದೆ. ಬೆಂಗಳೂರಿನ ಹಲವು ಬಡಾವಣೆಗಳು ಮಳೆ ನೀರಿನಿಂದ ಜಲಾವೃತಗೊಂಡಿದ್ದರೆ, ಹಲಸೂರು, ಜೀವನ್‌ ಭೀಮಾ ನಗರದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಬೆಳ್ಳಂದೂರ ಕ್ರಾಸ್ ಜಲಾವೃತಗೊಂಡಿದೆ.ಮೆಜೆಸ್ಟಿಕ್ ಸುತ್ತಮುತ್ತ ಕೆರೆಯಂತಾಗಿದ್ದವು.

Leave a Reply