ನೈರೋಬಿ : ಕೀನ್ಯಾದಲ್ಲಿ ಕಳೆದ ವಾರ ಮಹಿಳಾ ಮುಕ್ತ ಚೆಸ್ ಪಂದ್ಯಾವಳಿ ನಡೆದಿದ್ದು, ಈ ಪಂದ್ಯಾವಳಿಯಲ್ಲಿ ಬುರ್ಖಾ ಹಾಕಿಕೊಂಡು ಮಹಿಳೆಯಂತೆ ವ್ಯಕ್ತಿಯೊಬ್ಬ ಸ್ಪರ್ಧಾಳಾಗಿ ಭಾಗವಹಿಸಿ ಸಿಕ್ಕಿ ಬಿದ್ದಿರುವ ಘಟನೆ ವರದಿಯಾಗಿದೆ.
ಕೀನ್ಯಾ ಮೂಲದ ಸ್ಟಾನ್ಲಿ ಒಮೊಂಡಿ ಎಂಬ ವ್ಯಕ್ತಿ ಆರ್ಥಿಕವಾಗಿ ತೀರ ಸಂಕಷ್ಟದಲ್ಲಿದ್ದು, ಹಣಗಳಿಸುವ ಉದ್ದೇಶದಿಂದ ನೈರೋಬಿಯಲ್ಲಿ ನಡೆದ ಮಹಿಳಾ ಮುಕ್ತ ಚೆಸ್ ಪಂದ್ಯಾವಳಿಯಲ್ಲಿ ಭಾಗಿಯಗಿದ್ದಾನೆ.
ಇನ್ನು ತನ್ನ ಪರಿಚಯ ಯಾರಿಗೂ ತಿಳಿಯಬಾರದೆನ್ನುವ ಕಾರಣದಿಂದ ಬುರ್ಖಾವನ್ನು ಧರಿಸಿಕೊಂಡು, ಕನ್ನಡಕವೊಂದನ್ನು ಹಾಕಿಕೊಂಡು ತನ್ನ ಹೆಸರು ಮಿಲಿಸೆಂಟ್ ಅವರ್ ಎಂದು ರಿಜಿಸ್ಟಾರ್ ಮಾಡಿಸಿ, ಮಹಿಳಾ ಸ್ಪರ್ಧಿಗಳೊಂದಿಗೆ ಚೆಸ್ ನ್ನು ಆಡಿದ್ದಾನೆ.
ಈತ ಸತತ ಗೆಲುವು ಸಾಧಿಸಿಕೊಂಡು ಹೋಗುತ್ತಿದ್ದರಿಂದ ಸಂಶತಗೊಂಡ ಪಂದ್ಯಾಕೂಟದ ಸಿಬ್ಬಂದಿ ಆತನನ್ನು ವಿಚಾರಿಸಿದ್ದಾರೆ. ನಾಲ್ಕನೇ ಸುತ್ತಿನ ಬಳಿಕ ಖಾಸಗಿ ಕೋಣೆಗೆ ಕರೆದುಕೊಂಡು ಬುರ್ಖಾ ತೆಗೆಯುವಂತೆ ಹೇಳಿದ್ದಾರೆ. ಆಗ ಸ್ಟಾನ್ಲಿ ಒಮೊಂಡಿನಿಯ ನಿಜವಾದ ಮುಖವಾಡ ಬಯಲಾಗಿದೆ.
ನಾನೊಬ್ಬ ಯೂನಿವರ್ಸಿಟಿ ವಿದ್ಯಾರ್ಥಿ ಹಾಗೂ ಚೆಸ್ ಆಟಗಾರ. ನನಗೆ ಹಣಕಾಸಿನ ತೀರ ಅಗತ್ಯಯಿದ್ದ ಕಾರಣ ಈ ರೀತಿ ಮಾಡಿದೆ. ನನ್ನ ತಪ್ಪಿಗೆ ನೀಡುವ ಶಿಕ್ಷೆಯನ್ನು ಸ್ವೀಕರಿಸಲು ಸಿದ್ದವೆಂದು ಹೇಳಿರುವುದಾಗಿ ವರದಿಯಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…